Homeಕರ್ನಾಟಕದೇಶದಲ್ಲಿ 5.8 ಕೋಟಿ ನಕಲಿ ಪಡಿತರ ಚೀಟಿ ರದ್ದು: ಕೇಂದ್ರ ಆಹಾರ ಸಚಿವಾಲಯ

ದೇಶದಲ್ಲಿ 5.8 ಕೋಟಿ ನಕಲಿ ಪಡಿತರ ಚೀಟಿ ರದ್ದು: ಕೇಂದ್ರ ಆಹಾರ ಸಚಿವಾಲಯ

- Advertisement -
- Advertisement -

ನವದೆಹಲಿ: ದೇಶದಲ್ಲಿ ಸಾರ್ವಜನಿಕ ಪಡಿತರ ವ್ಯವಸ್ಥೆಯ ಡಿಜಿಟಲೀಕರಣಕ್ಕೆ ಚಾಲನೆ ನೀಡಲಾಗಿದ್ದು, 5.8 ಕೋಟಿ ನಕಲಿ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗಿದೆ ಎಂದು ಕೇಂದ್ರ ಆಹಾರ ಸಚಿವಾಲಯವು ಬುಧವಾರ ತಿಳಿಸಿದೆ.

ದೇಶದಲ್ಲಿ ಒಟ್ಟು 80.6 ಕೋಟಿ ಪಡಿತರ ಚೀಟಿಗಳನ್ನು ಹೊಂದಿದ ಕುಟುಂಬಗಳಿವೆ. ಆಧಾರ್‌ ಸಂಖ್ಯೆ  ಪರಿಶೀಲನೆ ಪ್ರಕ್ರಿಯೆ ಮೂಲಕ ಈ ನಕಲಿ ಚೀಟಿಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಅದು ಹೇಳಿದೆ.

ಆಹಾರ ಭದ್ರತೆ ಹಿನ್ನಲೆಯಲ್ಲಿ ‘ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆ’ಯನ್ನು ಅನುಷ್ಠಾನಗೊಳಿಸಿದೆ.

ಪಿಒಎಸ್

ದೇಶದಾದ್ಯಂತ 5.33 ಲಕ್ಷ ನ್ಯಾಯಬೆಲೆ ಅಂಗಡಿಗಳಲ್ಲಿ ತಂತ್ರಜ್ಞಾನ ಆಧಾರಿತ ಇ–ಪಿಒಎಸ್‌ (ಪಾಯಿಂಟ್‌ ಆಫ್‌ ಸೇಲ್‌) ಸಾಧನಗಳನ್ನು ಅಳವಡಿಸಲಾಗಿದೆ. ಇವುಗಳ ಮೂಲಕ ಪಡಿತರ ವಿತರಣೆ ವೇಳೆ ಆಧಾರ ಸಂಖ್ಯೆಯನ್ನು ದೃಢೀಕರಿಸಲಾಗುತ್ತದೆ. ಅರ್ಹ ಪಡಿತರ ಚೀಟಿದಾರರಿಗೆ ಮಾತ್ರ ಪಡಿತರ ವಿತರಿಸಲಾಗುತ್ತಿದೆ ಎಂದು ತಿಳಿಸಿದೆ.

ಅನರ್ಹ ಪಡಿತರ ಚೀಟಿ ಗುರುತಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿ ಪಾಲನೆ: ಆಹಾರ ಇಲಾಖೆ 

ಬೆಂಗಳೂರು: ರಾಜ್ಯದಲ್ಲಿ ಒಟ್ಟು 1,50,90,534 ಪಡಿತರ ಚೀಟಿಗಳಿದ್ದು, ಈ ಪೈಕಿ 10,68,042 ಅಂತ್ಯೋದಯ ಕಾರ್ಡ್‌ಗಳು, 1,14,60,137 ಬಿಪಿಎಲ್ ಕಾರ್ಡ್‌ಗಳು, ಉಳಿದಂತೆ, 25,62,355 ಎಪಿಲ್ ಕಾರ್ಡ್‌ಗಳು ಎಂದು ಆಹಾರ ಇಲಾಖೆ ಮಾಹಿತಿ ನೀಡಿದೆ.

ಒಟ್ಟು ಬಿಪಿಎಲ್ ಕಾರ್ಡ್‌ಗಳ ಪೈಕಿ 13,87,652 ಕಾರ್ಡ್‌ಗಳನ್ನು ಅನರ್ಹ ಎಂದು ಗುರುತಿಸಲಾಗಿದೆ. ಅವುಗಳಲ್ಲಿ 98,473 ಆದಾಯ ತೆರಿಗೆ ಪಾವತಿದಾರರು ಹೊಂದಿರುವ ಕಾರ್ಡ್‌ಗಳಾಗಿವೆ. 4,036 ಸರ್ಕಾರಿ ನೌಕರರು ಹೊಂದಿರುವ ಕಾರ್ಡ್‌ಗಳಾಗಿವೆ. ಕುಟುಂಬದ ವಾರ್ಷಿಕ ಆದಾಯ ₹1.20 ಲಕ್ಷಕ್ಕಿಂತ ಹೆಚ್ಚಿರುವವರು ಹೊಂದಿರುವ ಕಾರ್ಡ್‌ಗಳ ಸಂಖ್ಯೆ 10,09,476. ಕಳೆದ ಆರು ತಿಂಗಳುಗಳಿಂದ ಪಡಿತರವನ್ನೇ ಪಡೆಯದ ಕಾರಣಕ್ಕೆ ಅಮಾನತುಗೊಂಡ ಕಾರ್ಡ್‌ಗಳ ಸಂಖ್ಯೆ 2,75,667.

ಅಲ್ಲದೆ, ಮೃತಪಟ್ಟ 1,59,319 ಸದಸ್ಯರ ಹೆಸರುಗಳನ್ನು ಕಾರ್ಡ್‌ನಿಂದ ತೆಗೆದುಹಾಕಲಾಗಿದೆ ಎಂದು ಆಹಾರ ಇಲಾಖೆ ತಿಳಿಸಿದೆ.

ಅಮಾನತು, ರದ್ದು ಮತ್ತು ಎಪಿಎಲ್ ಕಾರ್ಡ್‌ಗಳಾಗಿ ಬದಲಾಯಿಸಿದ ಒಟ್ಟು ಕಾರ್ಡ್‌ಗಳ ಸಂಖ್ಯೆ 3,81,983.

ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಲಾಗಿದೆ ಎಂದು ಇಲಾಖೆಯ ಮೂಲಗಳು ಮಾಹಿತಿ ನೀಡಿವೆ.

ಇದನ್ನೂ ಓದಿ…ದಲಿತ ಮಹಿಳೆಯ ಹತ್ಯೆ | 21 ಮಂದಿ ಅಪರಾಧಿಗಳು : ತುಮಕೂರು ನ್ಯಾಯಾಲಯ ಮಹತ್ವದ ತೀರ್ಪು

ಯಾವುದೇ ಪಡಿತರ ಚೀಟಿ ರದ್ದತಿ ಇಲ್ಲ:  ಮುನಿಯಪ್ಪ

ಬೆಂಗಳೂರು: ಬಿಪಿಎಲ್‌, ಎಪಿಎಲ್‌ ಪಡಿತರ ಚೀಟಿಗಳನ್ನು ರದ್ದು ಮಾಡಲಾಗುತ್ತದೆ ಎಂಬುದಾಗಿ ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ ಅಷ್ಟೆ. ಸರ್ಕಾರ ಎಲ್ಲೂ ಹೇಳಿಲ್ಲ. ಬಿಪಿಎಲ್‌ ಹಾಗೂ ಎಪಿಎಲ್‌ ಪಡಿತರ ಚೀಟಿ ರದ್ದಾಗುವುದಿಲ್ಲ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಭಾರತದ ಯಾವುದೇ ರಾಜ್ಯಗಳಲ್ಲಿ ಶೇ 50ರಷ್ಟು ಬಿಪಿಎಲ್ ಪಡಿತರ ಚೀಟಿಗಳು ಇಲ್ಲ. ಕರ್ನಾಟಕವು ಆರ್ಥಿಕವಾಗಿ ಸುಭದ್ರವಾಗಿ ಇರುವ ರಾಜ್ಯವಾಗಿದ್ದು, ತೆರಿಗೆ ಪಾವತಿಸುವುದರಲ್ಲಿ ಮಹಾರಾಷ್ಟ್ರದ ನಂತರದ ಸ್ಥಾನದಲ್ಲಿದೆ. ಹೀಗಿದ್ದರೂ ಶೇ 75 ರಿಂದ 80 ರಷ್ಟು ಬಿಪಿಎಲ್ ಚೀಟಿಗಳು ಇರಲು ಸಾಧ್ಯವೇ ಎಂಬ ಪ್ರಶ್ನೆ ಉದ್ಭವಿಸಿದೆ. ಇದು ಈ ಸರ್ಕಾರದಲ್ಲಿ ಮಾತ್ರವಲ್ಲ; ಸುಮಾರು 10 ವರ್ಷಗಳಿಂದಲೂ ನಡೆದುಕೊಂಡು ಬಂದಿದೆ. ಕಾಂಗ್ರೆಸ್ ಅಲ್ಲದೇ; ಬಿಜೆಪಿ ಹಾಗೂ ಮೈತ್ರಿ ಸರ್ಕಾರದಲ್ಲಿಯೂ ಚರ್ಚೆಗಳಾಗಿವೆ. ಹೀಗಾಗಿ, ಬಿಪಿಎಲ್‍ಗೆ ಅರ್ಹರಲ್ಲದವರನ್ನು ಎಪಿಎಲ್‍ಗೆ ಬದಲಾಯಿಸಲಾಗುತ್ತದೆ ಹೇಳಿದರು.

ಅರ್ಹರಿಗೆ ಬಿಪಿಎಲ್ಕಾರ್ಡ್ತಪ್ಪಿ ಹೋಗಬಾರದು

ಒಂದು ವೇಳೆ ಬಿಪಿಎಲ್‌ ಕಾರ್ಡ್‌ ವಿಚಾರದಲ್ಲಿ ಬಡವರಿಗೆ ತೊಂದರೆಯಾದಲ್ಲಿ ತಹಶೀಲ್ದಾರ್‌ಗೆ ಗಮನಕ್ಕೆ ತಂದರೆ ಒಂದು ವಾರದೊಳಗಾಗಿ ಸಮಸ್ಯೆ ಬಗೆಹರಿಸಲಾಗುವುದು ಎಂ‌ದು ಕೆ.ಎಚ್‌.ಮುನಿಯ‌ಪ್ಪ ತಿಳಿಸಿದರು.

ಅನರ್ಹರನ್ನು ಗುರುತಿಸಿ ಬಿಪಿಎಲ್‌ನಿಂದ ಎಪಿಎಲ್‍ಗೆ ಇಡಲಾಗುತ್ತದೆಯೇ ಹೊರತು ರದ್ದು ಮಾಡಲ್ಲ. ಗುರುವಾರ ಅಂಕಿಅಂಶ ಸಮೇತ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುತ್ತೇನೆ ಎಂದರು.

ಅರ್ಹರಿಗೆ ಯಾವುದೇ ಕಾರಣಕ್ಕೂ ಬಿಪಿಎಲ್ ಕಾರ್ಡ್ ತಪ್ಪಬಾರದು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಯಾವುದೇ ಕಾರಣಕ್ಕೂ ಅರ್ಹರಿಗೆ ಬಿಪಿಎಲ್ ಕಾರ್ಡ್ ತಪ್ಪಬಾರದು. ಒಂದು ವೇಳೆ ಒಂದಿಬ್ಬರು ಅನರ್ಹರು ಸೇರಿಕೊಂಡರೂ ಪರವಾಗಿಲ್ಲ, ಅರ್ಹರಿಗೆ ತಪ್ಪಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಯಾರಾದರೂ ಬಿಪಿಎಲ್ ನವರು ಇದ್ದರೆ ಅರ್ಜಿ ಹಾಕಿ. ಅಂತಹವರಿಗೆ ಮತ್ತೆ ಕಾರ್ಡ್ ಕೊಡುತ್ತೇವೆ. ಈ ವಿಚಾರದಲ್ಲಿ ಬಿಜೆಪಿಯವರಿಂದ ಪಾಠ ಕಲಿಯಬೇಕಾದ ಅಗತ್ಯವಿಲ್ಲ ಎಂದರು.

ಕೇಂದ್ರ ಮಾನದಂಡದಂತೆ ಕಾರ್ಡ್ ಪರಿಶೀಲನೆ : ಡಿ.ಕೆ.ಶಿವಕುಮಾರ್

ಬೆಂಗಳೂರು:ಬಿಪಿಎಲ್ ಕಾರ್ಡ್ ವಿತರಣೆಗೆ ಕೇಂದ್ರ ಸರಕಾರ ಕೆಲವು ಮಾನದಂಡಗಳನ್ನು ನಿಗದಿಪಡಿಸಿದೆ. ಸರಕಾರ ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ನಮ್ಮ ಸರಕಾರ ಇರುವುದೇ ಬಡವರಿಗಾಗಿ. ಬಡವರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಅವರಿಗೆ ಮತ್ತೆ ನೀಡುತ್ತೇವೆ. ಅರ್ಹರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಭಯ ನೀಡಿದರು.

ಬುಧವಾರ ಸದಾಶಿವನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್ ವಿತರಣೆಗೆ ಕೇಂದ್ರ ಸರಕಾರ ಕೆಲವು ಮಾನದಂಡ ನಿಗದಿಪಡಿಸಿದೆ. ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಅರ್ಹರ ಕಾರ್ಡ್ ರದ್ದಾಗಿದ್ದರೆ ಅವರಿಂದ ಮತ್ತೆ ಅರ್ಜಿ ಪಡೆದು ಮತ್ತೆ ಬಿಪಿಎಲ್ ಕಾರ್ಡ್ ನೀಡಲಾಗುವುದು. ಯಾರೂ ಗಾಬರಿಯಾಗುವ ಅಗತ್ಯವಿಲ್ಲ. ಕೆಲವು ಕಡೆ ಹೆಚ್ಚುಕಮ್ಮಿಯಾಗಿದ್ದು, ಎಲ್ಲವನ್ನು ಬಗೆಹರಿಸುತ್ತೇವೆ. ದಯಮಾಡಿ ಸಹಕಾರ ನೀಡಿ. ಸರಕಾರಿ ನೌಕರರು, ಸಹಕಾರಿ ಸಂಘಗಳ ಅಧಿಕಾರಿಗಳು, ಆದಾಯ ತೆರಿಗೆ ಪಾವತಿದಾರರು ಬಿಪಿಎಲ್ ಕಾರ್ಡ್ ಹೊಂದಿರುವ ಹಿನ್ನೆಲೆಯಲ್ಲಿ ಈ ಪರಿಷ್ಕರಣೆ ಮಾಡಲಾಗುತ್ತಿದೆ ಎಂದರು.

ಅರ್ಹರಿಗೆ ಮಾತ್ರ ಬಿಪಿಎಲ್‌ ಕಾರ್ಡ್: ಡಾ.ಜಿ.ಪರಮೇಶ್ವರ್

ಬೆಂಗಳೂರು: ವಿರೋಧ ಪಕ್ಷದವರು ಬಿಪಿಎಲ್‌ ಪಡಿತರ ಚೀಟಿಗಳ ಬಗ್ಗೆ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಆದರೆ ಸರಕಾರ ಅನರ್ಹರ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸಿ, ಅರ್ಹ ಬಿಪಿಎಲ್‌ ಕಾರ್ಡ್ ಗಳನ್ನು ಉಳಿಸಿಕೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಅನರ್ಹ ಬಿಪಿಎಲ್‌ ಪಡಿತರ ಚೀಟಿ ಹೊಂದಿದವರನ್ನು ಪತ್ತೆ ಹಚ್ಚಿ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

ಇದನ್ನೂ ಓದಿ…ಯಾವುದೇ ಕಾರಣಕ್ಕೂ ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...