ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ನ.21) ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ನಬಾರ್ಡ್‌ನಿಂದ ರಾಜ್ಯದ ರೈತರಿಗೆ ಆಗಿರುವ ಸಾಲದ ಕೊರತೆಯನ್ನು ಸರಿಪಡಿಸಿ, ಆಗಿರುವ ಅನ್ಯಾಯವನ್ನು ಸರಿದೂಗಿಸುವಂತೆ ಮನವಿ ಮಾಡಿದ್ದಾರೆ.
ಸಚಿವರಾದ ಬೈರತಿ ಸುರೇಶ್, ಚೆಲುವರಾಯಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಈ ಉಪಸ್ಥಿತರಿದ್ದರು.

ಇದಕ್ಕೂ ಮುನ್ನ “ನಬಾರ್ಡ್ ಕಳೆದ ವರ್ಷ ರಾಜ್ಯಕ್ಕೆ 5,600 ಕೋಟಿ ರೂ. ಸಾಲ ನೀಡಿತ್ತು. ಈ ವರ್ಷ 2,340 ಕೋಟಿ ರೂ.ಗೆ ಕಡಿತ ಮಾಡಿದೆ. ಈ ಬಗ್ಗೆ ಕೇಂದ್ರ ವಿತ್ತ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಲಾಗುವುದು” ಎಂದು ಸಿಎಂ ಹೇಳಿದ್ದರು.
ವಿತ್ತ ಸಚಿವರ ಭೇಟಿ ಕುರಿತು ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಸಿಎಂ, ನಬಾರ್ಡ್‌ನ ಕೃಷಿ ಸಾಲವನ್ನು ಶೇ.58 ಕಡಿತ ಮಾಡಿರುವುದರಿಂದ ರಾಜ್ಯದ ರೈತರಿಗೆ ಬಹುದೊಡ್ಡ ಸಂಕಷ್ಟ ಎದುರಾಗಿದೆ. ಹಾಗಾಗಿ ಈ ಸಾಲದ ಮಿತಿಯನ್ನು ಹೆಚ್ಚಿಸಿ ರೈತರ ಹಿತಕಾಯುವಂತೆ ಮನವಿ ಮಾಡಿದ್ದೇನೆ ಎಂದಿದ್ದಾರೆ.
ನಬಾರ್ಡ್‌ನ ಕೃಷಿ ಸಾಲದ ಮಿತಿಯನ್ನು ಹೆಚ್ಚಿಸುವ ಮೂಲಕ ರಾಜ್ಯದ ರೈತರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಕೋರಿ ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ನೀಡಿದ ಮನವಿ ಪತ್ರದ ಕನ್ನಡ ಅನುವಾದ #ನಬಾರ್ಡ್ pic.twitter.com/8MFlFfrl8R
— Siddaramaiah (@siddaramaiah) November 21, 2024
ಇದನ್ನೂ ಓದಿ : ಅದಾನಿ ವಿರುದ್ಧ ಅಮೆರಿಕಾ ದೋಷಾರೋಪ | ತಕ್ಷಣವೇ ಬಂಧಿಸಿ ಎಂದ ರಾಹುಲ್ ಗಾಂಧಿ


