Homeಕರ್ನಾಟಕನಿರ್ಮಲಾ ಸೀತಾರಾಮನ್, ಕಟೀಲ್ ವಿರುದ್ಧದ ಸುಲಿಗೆ ಪ್ರಕರಣ | ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್

ನಿರ್ಮಲಾ ಸೀತಾರಾಮನ್, ಕಟೀಲ್ ವಿರುದ್ಧದ ಸುಲಿಗೆ ಪ್ರಕರಣ | ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್

- Advertisement -
- Advertisement -

ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಮಾಜಿ ಸಂಸದ ನಳೀನ್‌ ಕುಮಾರ್‌ ಕಟೀಲ್‌, ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಹಾಗೂ ಬಿಜೆಪಿ ಕಚೇರಿ ವಿರುದ್ಧ ನಗರ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಬುಧವಾರ ಮುಗಿಸಿರುವ ರಾಜ್ಯ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿದೆ.

ತಿಲಕ್ ನಗರ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನ ಕಾನೂನುಬದ್ಧತೆಯನ್ನು ಪ್ರಶ್ನಿಸಿ ದಾಖಲಿಸಲಾಗಿರುವ ಈ ಅರ್ಜಿಯಲ್ಲಿ ದೂರುದಾರರ ಪರ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಮತ್ತು ಅರ್ಜಿದಾರ ನಳೀನ್ ಕುಮಾರ್ ಕಟೀಲ್ ಪರ ಹಿರಿಯ ವಕೀಲ ಕೆ.ಜಿ. ರಾಘವನ್ ಅವರ ವಾದವನ್ನು ಆಲಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಆದೇಶವನ್ನು ಕಾಯ್ದಿರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜನಾಧಿಕಾರ ಸಂಘರ್ಷ ಪರಿಷತ್ತಿನ ಸಹ ಅಧ್ಯಕ್ಷರಾದ ಆದರ್ಶ್ ಆರ್. ಅಯ್ಯರ್ ಅವರು ಸಲ್ಲಿಸಿದ ಖಾಸಗಿ ದೂರಿನ ಮೇರೆಗೆ ಮ್ಯಾಜಿಸ್ಟ್ರೇಟ್ ನೀಡಿದ ಆದೇಶವನ್ನು ಆಧರಿಸಿ ಬೆಂಗಳೂರಿನ ತಿಲಕ್ ನಗರ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.

2ನೇ ಆರೋಪಿಯಾಗಿರುವ ED ಭಯವನ್ನು ಹುಟ್ಟುಹಾಕಿ ಕೆಲವು ಕಂಪನಿಗಳು ಚುನಾವಣಾ ಬಾಂಡ್‌ಗಳನ್ನು ಖರೀದಿಸುವಂತೆ ಮಾಡಿರುವ ಭಾರಿ ಪ್ರಕರಣ ಇದಾಗಿದೆ ಎಂದು ಪ್ರಶಾಂತ್ ಭೂಷಣ್ ಪ್ರತಿಪಾದಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಆರೋಪಿಗಳ ಪರ ವಕೀಲರಾದ ರಾಘವನ್, ಸುಲಿಗೆಯ ದೂರು ದಾಖಲಾಗಬೇಕಾದರೆ ದೂರುದಾರ ಬಲಿಪಶುವಾಗಿರಬೇಕು ಮತ್ತು ಆರೋಪಿಯು ಫಲಾನುಭವಿಯಾಗಿರಬೇಕಾಗಿದ್ದು, ಇಲ್ಲಿ ದೂರುದಾರರು ಬಲಿಪಶು ಅಲ್ಲ, ಜೊತೆಗೆ ಈ ಪ್ರಕರಣವನ್ನು ಮುಂದುವರಿಸಲು ಅನುಮತಿ ನೀಡಿದರೆ, ಇದು ಕಾನೂನು ಅಸಂಬದ್ಧ ಪರಿಸ್ಥಿತಿಗೆ ಕೊಂಡೊಯ್ಯುತ್ತದೆ ಎಂದು ವಾದಿಸಿದ್ದಾರೆ.

ಚುನಾವಣಾ ಬಾಂಡ್‌ ಮೂಲಕ ಸುಲಿಗೆ ಹಿನ್ನಲೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸುವಂತೆ ಆದೇಶಿಸಿತ್ತು. ಅದರಂತೆ ಪೊಲೀಸರು ನಿರ್ಮಲಾ ಸೀತಾರಾಮನ್ ಮತ್ತು ಇತರರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಫೆಬ್ರವರಿಯಲ್ಲಿ, ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್‌ಗಳ ಯೋಜನೆಯನ್ನು ರದ್ದುಗೊಳಿಸಿತ್ತು. ಈ ವೇಳೆ ನ್ಯಾಯಾಲಯವು ಯೋಜನೆಯನ್ನು “ಅಸಂವಿಧಾನಿಕ” ಮತ್ತು ಇದು ನಾಗರಿಕರ ಮಾಹಿತಿಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಹೇಳಿತ್ತು. ಕೇಂದ್ರ ಸರ್ಕಾರವು 2018 ರಲ್ಲಿ ಯೋಜನೆಯನ್ನು ಪರಿಚಯಿಸಿ, ರಾಜಕೀಯ ಪಕ್ಷಗಳಿಗೆ ನಗದು ದೇಣಿಗೆಗಳನ್ನು ನೀಡುವ ನೀತಿಗೆ ಬದಲಾವಣೆ ತಂದಿತ್ತು.

ಇದನ್ನೂ ಓದಿ: ಚುನಾವಣಾ ಬಾಂಡ್ ಸುಲಿಗೆ | ನಿರ್ಮಲಾ ಸೀತಾರಾಮನ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

ಚುನಾವಣಾ ಬಾಂಡ್ ಸುಲಿಗೆ | ನಿರ್ಮಲಾ ಸೀತಾರಾಮನ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...