Homeಮುಖಪುಟಅದಾನಿ ವಂಚನೆ | 20% ಶೇರು ಕುಸಿತ; $600 ಮಿಲಿಯನ್ ಬಾಂಡ್ ನೀಡುವುದನ್ನು ರದ್ದು ಮಾಡಿದ...

ಅದಾನಿ ವಂಚನೆ | 20% ಶೇರು ಕುಸಿತ; $600 ಮಿಲಿಯನ್ ಬಾಂಡ್ ನೀಡುವುದನ್ನು ರದ್ದು ಮಾಡಿದ ಕಂಪೆನಿ

- Advertisement -
- Advertisement -

ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಅದಾನಿ ಗ್ರೀನ್ ಎನರ್ಜಿ ಕಂಪನಿಯ ಅಧ್ಯಕ್ಷ ಗೌತಮ್ ಅದಾನಿ ಹಾಗೂ ಇತರರ ವಿರುದ್ದ ಅಮೆರಿಕದ ಪ್ರಾಸಿಕ್ಯೂಟರ್ ಕ್ರಿಮಿನಲ್ ಆರೋಪಪಟ್ಟಿ ಸಲ್ಲಿಸಿದ ವರದಿಯ ನಂತರ ಅದಾನಿ ಗ್ರೂಪ್‌ ಕಂಪನಿಗಳ ಷೇರುಗಳು 20% ಕುಸಿತ ಕಂಡಿದ್ದು, ಜೊತೆಗೆ ಕಂಪೆನಿಯು ತನ್ನ $600 ಮಿಲಿಯನ್ ಬಾಂಡ್ ನೀಡುವುದನ್ನು ರದ್ದುಗೊಳಿಸಿದೆ. ಅದಾನಿ ವಂಚನೆ

ಅದಾನಿ ಗ್ರೀನ್ ಎನರ್ಜಿ 18.76% ಕುಸಿದರೆ, ಅದಾನಿ ಎನರ್ಜಿ ಸಲ್ಯೂಷನ್ಸ್ 20%, ಅದಾನಿ ಎಂಟರ್‌ಪ್ರೈಸಸ್ 10%, ಅದಾನಿ ಪವರ್ 13.98% ಮತ್ತು ಅದಾನಿ ಪೋರ್ಟ್ಸ್ 13.98% ದಷ್ಟು ಬೆಳಗಿನ ಅವಧಿಯಲ್ಲಿ ಕುಸಿದವು ಎಂದು ವರದಿಯಗಳು ಉಲ್ಲೇಖಿಸಿವೆ. ಅದಾನಿ ವಂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಸೇರಿದಂತೆ ಇತರ ಏಳು ಆರೋಪಿಗಳು 20 ವರ್ಷಗಳಲ್ಲಿ 2 ಶತಕೋಟಿ ಡಾಲರ್ ಲಾಭ ತರಲಿದ್ದ ಸೌರಶಕ್ತಿ ಪೂರೈಕೆ ಒಪ್ಪಂದಗಳನ್ನು ಪಡೆಯಲು ಭಾರತೀಯ ಸರ್ಕಾರಿ ಅಧಿಕಾರಿಗಳಿಗೆ ಸುಮಾರು 265 ಮಿಲಿಯನ್ ಡಾಲರ್ ಲಂಚ ನೀಡಲು ಒಪ್ಪಿದ್ದರು ಎನ್ನಲಾಗಿದೆ.

ನ್ಯೂಯಾರ್ಕ್‌ನ ಪೂರ್ವ ಜಿಲ್ಲಾ ನ್ಯಾಯಾಲಯದಲ್ಲಿರುವ ಅಮೆರಿಕದ ಅಟಾರ್ನಿ ಕಚೇರಿಯ ಮಾಹಿತಿ ಪ್ರಕಾರ, ಗೌತಮ್ ಅದಾನಿ, ಸಾಗರ್‌ ಆರ್. ಅದಾನಿ ಹಾಗೂ ವಿನೀತ್ ಎಸ್. ಜೈನ್‌ ವಿರುದ್ಧ ಐದು ಅಂಶಗಳ ಕ್ರಿಮಿನಲ್‌ ಆರೋಪಪಟ್ಟಿ ಸಲ್ಲಿಸಲಾಗಿದೆ. ಬಂಡವಾಳ ಆಕರ್ಷಿಸಲು ಅಮೆರಿಕದ ಹೂಡಿಕೆದಾರರು ಹಾಗೂ ಜಾಗತಿಕ ಹಣಕಾಸು ಸಂಸ್ಥೆಗಳಿಗೆ ಸುಳ್ಳು ಮತ್ತು ತಪ್ಪು ಹೇಳಿಕೆ ನೀಡಿರುವ ಆರೋಪ ಇವರ ಮೇಲಿದೆ ಎಂದು ರಾಯಿಟರ್ಸ್ ವರದಿ ಹೇಳಿದೆ.

ನ್ಯಾಯಾಧೀಶರು ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ವಿರುದ್ದ ಬಂಧನ ವಾರೆಂಟ್‌ಗಳನ್ನು ಹೊರಡಿಸಿದ್ದಾರೆ. ಆ ವಾರೆಂಟ್‌ಗಳನ್ನು ವಿದೇಶಿ ಕಾನೂನು ಜಾರಿ ಸಂಸ್ಥೆಗಳಿಗೆ ಹಸ್ತಾಂತರಿಸಲು ಪ್ರಾಸಿಕ್ಯೂಟರ್‌ಗಳು ಯೋಜಿಸಿದ್ದಾರೆ ಎಂದು ನ್ಯಾಯಾಲಯದ ದಾಖಲೆಗಳನ್ನು ಉಲ್ಲೇಖಿಸಿ ರಾಯಿಟರ್ಸ್ ತಿಳಿಸಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯೂಯಾರ್ಕ್‌ ಸ್ಟಾಕ್‌ ಎಕ್ಸ್‌ಚೇಂಜ್‌ನಲ್ಲಿ ವ್ಯವಹಾರ ನಡೆಸಿದ್ದ ಕಂಪನಿಯ ಮಾಜಿ ಅಧಿಕಾರಿಗಳಾದ ರಂಜಿತ್ ಗುಪ್ತಾ ಹಾಗೂ ರೂಪೇಶ್ ಅಗರವಾಲ್‌ ಹಾಗೂ ಕೆನಡಾ ಮೂಲದ ಹೂಡಿಕೆದಾರರಾದ ದೀಪಕ್ ಮಲ್ಹೋತ್ರಾ ಮತ್ತು ಸೌರಬ್‌ ಅಗರವಾಲ್‌ ಅವರು ಲಂಚ ನೀಡಿರುವುದು ವಿದೇಶಿ ಭ್ರಷ್ಟ ಕಾರ್ಯಾಚರಣೆ ಕಾಯ್ದೆಯಡಿ ಅಪರಾಧವಾಗಿದೆ ಎಂದು ದೋಷಾರೋಪ ಪಟ್ಟಿಯಲ್ಲಿ ಹೇಳಲಾಗಿದೆ.

“ತಮ್ಮ ವ್ಯವಹಾರಗಳಿಗೆ ಅನುಕೂಲವಾಗುವಂತೆ ಭಾರತ ಸರ್ಕಾರದ ಅಧಿಕಾರಿಗಳಿಗೆ ಆರೋಪಿಗಳು ಲಂಚ ನೀಡಿದ್ದಾರೆ. ಲಂಚ ಹಾಗೂ ಭ್ರಷ್ಟಾಚಾರದ ಕುರಿತು ಸುಳ್ಳು ಹೇಳಿಕೆಗಳ ಮೂಲಕ ಅದಾನಿ ಹಾಗೂ ಇತರ ಆರೋಪಿಗಳು ಹೂಡಿಕೆದಾರರಿಗೆ ತಪ್ಪು ಮಾಹಿತಿ ನೀಡಿದ್ದಾರೆ. ಇತರ ಆರೋಪಿಗಳು ತನಿಖೆಗೆ ಅಡ್ಡಿಪಡಿಸುವ ಮೂಲಕ ಲಂಚದ ಆರೋಪವನ್ನು ಮರೆಮಾಚಲು ಯತ್ನಿಸಿದ್ದಾರೆ” ಎಂದು ಆರೋಪಿಸಲಾಗಿದೆ.

ದೋಷಾರೋಪಣೆಯ ಪ್ರಕಾರ, ಆರೋಪಿಗಳು ವಂಚನೆಗೆ ಗೌತಮ್ ಅದಾಮಿ ಅವರನ್ನು “ನ್ಯೂಮೆರೊ ಯುನೊ” ಮತ್ತು “ಬಿಗ್ ಮ್ಯಾನ್‌” ಎಂಬ ಕೋಡ್ ಹೆಸರುಗಳೊಂದಿಗೆ ಖಾಸಗಿಯಾಗಿ ಕರೆಯತ್ತಿದ್ದರು. ಸಾಗರ್ ಅದಾನಿ ಲಂಚದ ವ್ಯವಹಾರದ ಬಗ್ಗೆ ನಿಗಾ ಇಡಲು ತಮ್ಮ ಸೆಲ್ ಫೋನ್ ಬಳಸಿದ್ದಾರೆ ಎಂದು ಹೇಳಲಾಗಿದೆ.

ಅದಾನಿ ಮತ್ತು ಆತನ ಸಂಬಂಧಿಗಳು, ವಿನೀತ್ ಜೈನ್ ಸೇರಿದಂತೆ ಅದಾನಿ ಗ್ರೀನ್ ಎನರ್ಜಿಯ ಕಾರ್ಯನಿರ್ವಾಹಕರು ಸಾಲದಾತರು ಮತ್ತು ಹೂಡಿಕೆದಾರರಿಂದ ಭ್ರಷ್ಟಾಚಾರವನ್ನು ಮರೆಮಾಚುವ ಮೂಲಕ ತಮ್ಮ ಕಂಪನಿಗೆ 3 ಶತಕೋಟಿ ಡಾಲರ್‌ಗಿಂತ ಹೆಚ್ಚಿನ ಸಾಲ ಮತ್ತು ಬಾಂಡ್‌ಗಳನ್ನು ಸಂಗ್ರಹಿಸಿದ್ದಾರೆ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

“ಈ ಪ್ರಕರಣ ಕುರಿತ ತನಿಖೆಯನ್ನು ತಡೆಯಲು ಎಫ್‌ಬಿಐ, ನ್ಯಾಯಾಂಗ ಇಲಾಖೆ ಮತ್ತು ಸೆಕ್ಯುರಿಟಿ ಅಂಡ್ ಎಕ್ಸ್‌ಚೇಂಜ್ ಕಮಿಷನ್‌ ಕೂಡಾ ಪ್ರಯತ್ನಿಸುತ್ತಿದೆ” ಎಂದು ಪ್ರಾಸಿಕ್ಯೂಟರ್ ಆರೋಪಿಸಿದ್ದಾಗಿ ವರದಿಯಾಗಿದೆ.
ಪ್ರಕರಣದ ತನಿಖೆಯನ್ನು ನ್ಯೂಯಾರ್ಕ್‌ನ ಎಫ್‌ಬಿಐ ಕಚೇರಿ ನಡೆಸುತ್ತಿದೆ.

ಇದನ್ನೂ ಓದಿ: ನಿರ್ಮಲಾ ಸೀತಾರಾಮನ್, ಕಟೀಲ್ ವಿರುದ್ಧದ ಸುಲಿಗೆ ಪ್ರಕರಣ | ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್

ನಿರ್ಮಲಾ ಸೀತಾರಾಮನ್, ಕಟೀಲ್ ವಿರುದ್ಧದ ಸುಲಿಗೆ ಪ್ರಕರಣ | ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...