ದೆಹಲಿಯ ಮುಖ್ಯಮಂತ್ರಿ ಆತಿಶಿ ಅವರು ಈ ಹಿಂದಿನ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗಿಂತ ಸಾವಿರ ಪಟ್ಟು ಉತ್ತಮ ಎಂದು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಶುಕ್ರವಾರ ಹೊಗಳಿದ್ದಾರೆ. ಅವರು ದೆಹಲಿಯ ಇಂದಿರಾಗಾಂಧಿ ದೆಹಲಿ ಮಹಿಳಾ ತಾಂತ್ರಿಕ ವಿಶ್ವವಿದ್ಯಾಲಯದ ಏಳನೇ ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡುತ್ತಿದ್ದರು. ಕೇಜ್ರಿವಾಲ್‌ಗಿಂತ
“ದಿಲ್ಲಿಯ ಸಿಎಂ ಮಹಿಳೆಯಾಗಿರುವುದು ನನಗೆ ಇಂದು ಸಂತಸ ತಂದಿದೆ. ಅವರು ತಮ್ಮ ಹಿಂದಿನ ಸಿಎಂಗಿಂತ ಸಾವಿರ ಪಟ್ಟು ಉತ್ತಮರು ಎಂದು ಆತ್ಮವಿಶ್ವಾಸದಿಂದ ಹೇಳಬಲ್ಲೆ’’ ಎಂದು ಸಕ್ಸೇನಾ ಅವರು ಹೇಳಿದ್ದಾರೆ. ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು ಈ ಹೇಳಿಕೆ ವೇಳೆ ಅತಿಶಿಯತ್ತ ನೋಟ ಬೀರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಸಕ್ಸೇನಾ, “ನೀವು ಮುಂದುವರಿದಂತೆ, ನಿಮ್ಮನ್ನು ಮುನ್ನಡೆಸುವ ನಾಲ್ಕು ಮಾರ್ಗದರ್ಶಿ ಸೂತ್ರಗಳಿರುತ್ತವೆ. ಮೊದಲನೆಯದು, ನಿಮ್ಮ ಕಡೆಗಿನ ನಿಮ್ಮ ಜವಾಬ್ದಾರಿ, ಎರಡನೆಯದು, ನಿಮ್ಮ ಪೋಷಕರು ಹಾಗೂ ಕುಟುಂಬ, ಮೂರನೆಯದು, ಸಮಾಜ ಮತ್ತು ರಾಷ್ಟ್ರ ನಿರ್ಮಾಣದೆಡೆಗಿನ ಹೊಣೆಗಾರಿಕೆ” ಎಂದು ಅವರು ಹೇಳಿದ್ದಾರೆ. ಕೇಜ್ರಿವಾಲ್‌ಗಿಂತ
ಲಿಂಗ ತಾರತಮ್ಯದ ಗೋಡೆಯನ್ನು ಒಡೆದು ಹಾಕಿ, ಎಲ್ಲ ಕ್ಷೇತ್ರಗಳಲ್ಲೂ ಇನ್ನಿತರರೊಂದಿಗೆ ಸಮನಾಗಿ ನಿಲ್ಲುವ ಮಹಿಳೆಯಾಗುವುದು ನಿಮ್ಮ ನಾಲ್ಕನೆ ಜವಾಬ್ದಾರಿ ಎಂದು ಅವರು ಹೇಳಿದ್ದಾರೆ.
ಸೆಪ್ಟೆಂಬರ್ ತಿಂಗಳಲ್ಲಿ ಕೇಜ್ರಿವಾಲ್ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ನಂತರ, ಆಡಳಿತ ಮತ್ತು ಅಧಿಕಾರಶಾಹಿಯ ನಿಯಂತ್ರಣ ಸೇರಿದಂತೆ ವಿವಿಧ ವಿಷಯಗಳ ಕುರಿತು ಎಎಪಿ ಮತ್ತು ಬಿಜೆಪಿ ನಡುವೆ ಹಗ್ಗ ಜಗ್ಗಾಟ ನಡೆಯುತ್ತಿದೆ.
ತಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ, ಸಾರ್ವಜನಿಕರಿಂದ ನಾನು ಪ್ರಾಮಾಣಿಕತೆಯ ಪ್ರಮಾಣ ಪತ್ರ ಪಡೆಯಲು ಬಯಸುತ್ತೇನೆ. ಹಾಗಾಗಿ ಈಗ ತಾನು ರಾಜೀನಾಮೆ ನೀಡುತ್ತೇನೆ ಎಂದು ರಾಜೀನಾಮೆ ವೇಳೆ ಅರವಿಂದ್ ಕೇಜ್ರಿವಾಲ್ ಹೇಳಿದ್ದರು. ಇದರ ನಂತರ ಪಕ್ಷದ ಶಾಸಕಾಂಗ ಸಭೆಯಲ್ಲಿ ಕೇಜ್ರಿವಾಲ್ ಅವರು ಅತಿಶಿ ಅವರ ಹೆಸರನ್ನು ಮುಖ್ಯಮಂತ್ರಿಯಾಗಿ ಪ್ರಸ್ತಾಪಿಸಿದ್ದರು ಮತ್ತು ಅದನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿತ್ತು.
ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್
ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್


