Homeಮುಖಪುಟವಯನಾಡ್ : ಚೊಚ್ಚಲ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿಗೆ ಭರ್ಜರಿ ಜಯ

ವಯನಾಡ್ : ಚೊಚ್ಚಲ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿಗೆ ಭರ್ಜರಿ ಜಯ

- Advertisement -
- Advertisement -

ರಾಹುಲ್ ಗಾಂಧಿಯಿಂದ ತೆರವಾಗಿರುವ ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಗೆದ್ದು ಬೀಗಿದ್ದಾರೆ.

ಚುನಾವಣಾ ಆಯೋಗದ ಅಧಿಕೃತ ಮಾಹಿತಿ ಪ್ರಕಾರ, ಈ ಸುದ್ದಿ ಬರೆಯುವ ಹೊತ್ತಿಗೆ (4.30PM) ಪ್ರಿಯಾಂಕಾ ಗಾಂಧಿ 6,22,338 ಮತಗಳನ್ನು ಪಡೆದಿದ್ದರು. ಅವರ ಗೆಲುವಿನ ಅಂತರ 410,931 ಇತ್ತು. ಈ ಮೂಲಕ ಈ ವರ್ಷ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಸಹೋದರ ರಾಹುಲ್ ಗಾಂಧಿ ಪಡೆದ 3.64 ಮತಗಳಿಗಿಂತ ಹೆಚ್ಚು ಮತಗಳನ್ನು ಪ್ರಿಯಾಂಕಾ ಸೆಳೆದಿದ್ದಾರೆ.

ರಾಹುಲ್ ಗಾಂಧಿ ವಯನಾಡ್ ಲೋಕಸಭಾ ಕ್ಷೇತ್ರದಿಂದ 2019ರಲ್ಲಿ ಮೊದಲ ಬಾರಿ ಲೋಕಸಭೆಗೆ ಸ್ಪರ್ಧಿಸಿದ್ದಾಗ 4.3 ಲಕ್ಷ ದಾಖಲೆ ಮತಗಳನ್ನು ಪಡೆದಿದ್ದರು. ಆ ದಾಖಲೆ ಮುರಿದು ಪ್ರಿಯಾಂಕಾ ಗಾಂಧಿ ಸುಮಾರು 5 ಲಕ್ಷ ಮತಗಳನ್ನು ಪಡೆಯುವ ನಿರೀಕ್ಷೆಯನ್ನು ಕಾಂಗ್ರೆಸ್ ಹೊಂದಿತ್ತು. ಆದರೆ, ಈ ಬಾರಿಯ ಚುನಾವಣೆಯಲ್ಲಿ ಮತದಾನ ಪ್ರಮಾಣ ಕಡಿಮೆಯಾದ್ದರಿಂದ ದಾಖಲೆ ಮುರಿಯುವ ಸಾಧ್ಯತೆ ಇಲ್ಲ ಎನ್ನಲಾಗಿತ್ತು.

ಕಳೆದ ಸಾರ್ವತ್ರಿಕ ಚುನಾವಣೆಗೆ ಹೋಲಿಸಿದರೆ ಶೇ.9ರಷ್ಟು ಮತದಾನದ ಪ್ರಮಾಣ ಕುಸಿದಿದ್ದರೂ, ಪ್ರಿಯಾಂಕಾ ಅವರ ಮತಗಳಿಕೆ ಶೇ.60ರಿಂದ ಶೇ.65ಕ್ಕೆ ಏರಿಕೆಯಾಗಿದೆ.

ಮಲ್ಲಪ್ಪುರಂ ಮತ್ತು ಕೋಯಿಕ್ಕೋಡ್ ಜಿಲ್ಲೆಗಳ ಪ್ರದೇಶಗಳನ್ನು ಒಳಗೊಂಡಿರುವ ವಯನಾಡ್ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಮೊಟ್ಟ ಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಕಳೆದ ಹಲವು ವರ್ಷಗಳಿಂದ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದರೂ, ಸ್ವತಃ ಚುನಾವಣೆ ಎದುರಿಸಿದ್ದು ಇದೇ ಮೊದಲ ಬಾರಿಯಾಗಿದೆ.

ಪ್ರಿಯಾಂಕಾ ಗಾಂಧಿ ವಿರುದ್ದ ಸ್ಪರ್ಧಿಸಿದ್ದ ಎಲ್‌ಡಿಎಫ್ ಅಭ್ಯರ್ಥಿ ಸಿಪಿಐನ ಸತ್ಯನ್ ಮೊಕೇರಿ ಅವರು ಈ ಸುದ್ದಿ ಬರೆಯುವ ಹೊತ್ತಿಗೆ 2,11,407 ಮತಗಳನ್ನು ಗಳಿಸಿ ಎರಡನೇ ಸ್ಥಾನ ಪಡೆದಿದ್ದರು. ಇದು ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಸಿಪಿಐನ ಅಭ್ಯರ್ಥಿಯಾಗಿದ್ದ ಅನ್ನಿ ರಾಜಾ ಗಳಿಸಿದ್ದ 2.83 ಲಕ್ಷ ಮತಗಳಿಗಿಂತ ಕಡಿಮೆಯಾಗಿದೆ. ಎಲ್‌ಡಿಎಫ್‌ನ ಮತಗಳ ಪ್ರಮಾಣವೂ ಸುಮಾರು ನಾಲ್ಕು ಪ್ರತಿಶತದಷ್ಟು ಕುಸಿತ ಕಂಡಿದೆ.

ಬಿಜೆಪಿಯ ನವ್ಯಾ ಹರಿದಾಸ್ ಈ ಸುದ್ದಿ ಬರೆಯು ಹೊತ್ತಿಗೆ 10,9,939 ಮತಗಳೊಂದಿಗೆ ಮೂರನೇ ಸ್ಥಾನ ಗಳಿಸಿದ್ದರು. ಇದು ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ಗಳಿಸಿದ್ದ 1.41 ಲಕ್ಷ ಮತಗಳಿಗಿಂತ ಕಡಿಮೆಯಾಗಿದೆ. ಬಿಜೆಪಿಯ ಮತಗಳ ಪ್ರಮಾಣವೂ ಈ ಬಾರಿ ಶೇ.13ರಿಂದ ಶೇ.11.5ಕ್ಕೆ ಕುಸಿದಿದೆ.

ಇದನ್ನೂ ಓದಿ : ಉಪಚುನಾವಣೆ : ರಾಜ್ಯದ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...