Homeಮುಖಪುಟಸಂವಿಧಾನದ ಪೀಠಿಕೆಯ 'ಸಮಾಜವಾದಿ' & 'ಜಾತ್ಯಾತೀತ' ಪದದ ಬಗ್ಗೆ ನವೆಂಬರ್ 25ರಂದು ತೀರ್ಪು!

ಸಂವಿಧಾನದ ಪೀಠಿಕೆಯ ‘ಸಮಾಜವಾದಿ’ & ‘ಜಾತ್ಯಾತೀತ’ ಪದದ ಬಗ್ಗೆ ನವೆಂಬರ್ 25ರಂದು ತೀರ್ಪು!

- Advertisement -
- Advertisement -

ಸಂವಿಧಾನದ ಪೀಠಿಕೆಯಲ್ಲಿ “ಸಮಾಜವಾದಿ” ಮತ್ತು “ಜಾತ್ಯತೀತ” ಪದಗಳನ್ನು ಸೇರಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಕಾಯ್ದಿರಿಸಿದೆ. ರಾಜ್ಯಸಭಾ ಮಾಜಿ ಸಂಸದ ಸುಬ್ರಮಣಿಯನ್ ಸ್ವಾಮಿ, ವಕೀಲ ವಿಷ್ಣು ಶಂಕರ್ ಜೈನ್ ಮತ್ತು ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ನವೆಂಬರ್‌ 25ರಲ್ಲಿ ತನ್ನ ಆದೇಶವನ್ನು ಪ್ರಕಟಿಸುವುದಾಗಿ ಹೇಳಿದೆ. ಸಂವಿಧಾನದ ಪೀಠಿಕೆಯ

“ತಿದ್ದುಪಡಿಯನ್ನು (42 ನೇ ತಿದ್ದುಪಡಿ) ಈ ನ್ಯಾಯಾಲಯವು ಸಾಕಷ್ಟು ನ್ಯಾಯಾಂಗ ಪರಿಶೀಲನೆಗೆ ಒಳಪಡಿಸಿದೆ. ಸಂಸತ್ತು ಮಧ್ಯಪ್ರವೇಶಿಸಿದೆ. ಆ ಸಮಯದಲ್ಲಿ (ತುರ್ತು ಪರಿಸ್ಥಿತಿ) ಸಂಸತ್ತು ಏನೂ ಮಾಡಿಲ್ಲ ಎಂದು ನಾವು ಹೇಳಲು ಸಾಧ್ಯವಿಲ್ಲ” ಎಂದು ಸಿಜೆಐ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅದಾಗ್ಯೂ, ಪ್ರಕರಣವನ್ನು ದೊಡ್ಡ ಪೀಠಕ್ಕೆ ಉಲ್ಲೇಖಿಸುವಂತೆ ಅರ್ಜಿದಾರರು ಕೋರಿದ್ದ ಮನವಿಯನ್ನು ಪೀಠವು ನಿರಾಕರಿಸಿದ್ದು, “ಸಮಾಜವಾದಿಯಾಗಿರುವುದು” ಎಂಬುವುದು ಭಾರತೀಯ ಅರ್ಥದಲ್ಲಿ “ಕಲ್ಯಾಣ ರಾಜ್ಯ” ಎಂದು ತಿಳಿಯಲಾಗಿದೆ ಎಂದು ಹೇಳಿದ್ದಾರೆ. ಸಂವಿಧಾನದ ಪೀಠಿಕೆಯ

ವಿಚಾರಣೆ ವೇಳೆ “ಸಮಾಜವಾದಿ” ಪದದ ವ್ಯಾಖ್ಯಾನವನ್ನು ಬಹುಸಂಖ್ಯಾತರು ಅನುಮಾನಿಸಿದ್ದಾರೆ ಎಂದು ವಕೀಲ ಜೈನ್ ಪ್ರತಿಪಾದಿಸಿದ್ದಾರೆ. ದಿವಂಗತ ಪ್ರಧಾನಿ ಇಂದಿರಾ ಗಾಂಧಿಯವರು ಜೂನ್ 25, 1975 ರಿಂದ ಮಾರ್ಚ್ 21, 1977 ರವರೆಗೆ ಭಾರತದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದರು.

“ಭಾರತದಲ್ಲಿ ನಾವು ಸಮಾಜವಾದವನ್ನು ಅರ್ಥಮಾಡಿಕೊಳ್ಳುವ ವಿಧಾನವು ಇತರ ದೇಶಗಳಿಗಿಂತ ಬಹಳ ಭಿನ್ನವಾಗಿದೆ. ನಮ್ಮ ಸಂದರ್ಭದಲ್ಲಿ, ಸಮಾಜವಾದವು ಪ್ರಾಥಮಿಕವಾಗಿ ಕಲ್ಯಾಣ ರಾಜ್ಯ ಎಂದರ್ಥ. ಅಷ್ಟೆ. ಉತ್ತಮವಾಗಿ ಅಭಿವೃದ್ಧಿ ಹೊಂದುತ್ತಿರುವ ಖಾಸಗಿ ವಲಯವನ್ನು ಅದು ಎಂದಿಗೂ ತಡೆಯಲಿಲ್ಲ. ನಾವೆಲ್ಲರೂ ಅದರಿಂದ ಪ್ರಯೋಜನ ಪಡೆದಿದ್ದೇವೆ” ಎಂದು ಪೀಠವು ಹೇಳಿದೆ.

ಸಮಾಜವಾದ ಎಂಬ ಪದವನ್ನು ವಿಶ್ವಾದ್ಯಂತ ವಿವಿಧ ಸಂದರ್ಭಗಳಲ್ಲಿ ಬಳಸಲಾಗಿದೆ ಮತ್ತು ಭಾರತದಲ್ಲಿ ಇದರರ್ಥ ಕಲ್ಯಾಣ ರಾಜ್ಯವಾಗಿದೆ. ಅಂದರೆ, ಜನರ ಕಲ್ಯಾಣಕ್ಕಾಗಿ ನಿಲ್ಲಬೇಕು ಮತ್ತು ಸಮಾನ ಅವಕಾಶಗಳನ್ನು ಒದಗಿಸಬೇಕು ಎಂಬ ಅರ್ಥವಾಗಿದೆ ಎಂದು ನ್ಯಾಯಮೂರ್ತಿ ಖನ್ನಾ ಹೇಳಿದ್ದಾರೆ. 1994 ರ ಎಸ್‌ಆರ್ ಬೊಮ್ಮಾಯಿ ಪ್ರಕರಣದಲ್ಲಿ ‘ಜಾತ್ಯಾತೀತೆಯು’ ಸಂವಿಧಾನದ ಮೂಲ ರಚನೆಯ ಭಾಗವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ಇನ್ನೊಬ್ಬ ಅರ್ಜಿದಾರರಾದ ವಕೀಲ ಅಶ್ವಿನಿ ಉಪಾಧ್ಯಾಯ ಅವರು, ನಾವು “ಸಮಾಜವಾದ” ಮತ್ತು “ಜಾತ್ಯತೀತತೆ” ಪರಿಕಲ್ಪನೆಗಳಿಗೆ ವಿರುದ್ಧವಾಗಿಲ್ಲ. ಆದರೆ ಪೀಠಿಕೆಗೆ ಅವುಗಳ ಅಳವಡಿಕೆಯನ್ನು ವಿರೋಧಿಸುತ್ತೇವೆ ಎಂದು ಹೇಳಿದ್ದಾರೆ.

368ನೇ ವಿಧಿಯು ಸಂವಿಧಾನವನ್ನು ತಿದ್ದುಪಡಿ ಮಾಡುವ ಅಧಿಕಾರವನ್ನು ಸಂಸತ್ತಿಗೆ ನೀಡಿದೆ ಮತ್ತು ಅದು ಪೀಠಿಕೆಗೂ ವಿಸ್ತರಿಸಿದೆ ಎಂದು ಪೀಠ ಹೇಳಿದೆ. “ಪೀಠಿಕೆಯು ಸಂವಿಧಾನದ ಒಂದು ಭಾಗವಾಗಿದೆ” ಎಂದು ಹೇಳಿದೆ.

ಇದನ್ನೂ ಓದಿ: ಬಂಗಾಳ ಉಪಚುನಾವಣೆ: 6 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ ಟಿಎಂಸಿ, 8 ವರ್ಷಗಳ ಬಳಿಕ ಬಿಜೆಪಿ ಕ್ಷೇತ್ರ ವಶಕ್ಕೆ

ಬಂಗಾಳ ಉಪಚುನಾವಣೆ: 6 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ ಟಿಎಂಸಿ, 8 ವರ್ಷಗಳ ಬಳಿಕ ಬಿಜೆಪಿ ಕ್ಷೇತ್ರ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...