Homeಕರ್ನಾಟಕಭೋವಿ ನಿಗಮ ಹಗರಣ: ತನಿಖಾಧಿಕಾರಿಯ ಕಿರುಕುಳಕ್ಕೆ ಬೇಸತ್ತು ಮಹಿಳಾ ಆರೋಪಿ ಆತ್ಮಹತ್ಯೆಗೆ ಶರಣು?

ಭೋವಿ ನಿಗಮ ಹಗರಣ: ತನಿಖಾಧಿಕಾರಿಯ ಕಿರುಕುಳಕ್ಕೆ ಬೇಸತ್ತು ಮಹಿಳಾ ಆರೋಪಿ ಆತ್ಮಹತ್ಯೆಗೆ ಶರಣು?

- Advertisement -
- Advertisement -

ಭೋವಿ ನಿಗಮ ಹಗರಣದಲ್ಲಿ ಆರೋಪಿಯಾಗಿದ್ದ 33 ವರ್ಷದ ಮಹಿಳೆಯೊಬ್ಬರು ಬೆಂಗಳೂರಿನ ಪದ್ಮನಾಭನಗರದಲ್ಲಿರುವ ತಮ್ಮ ನಿವಾಸದಲ್ಲಿ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಯ ಪ್ರಕಾರ, ಮಹಿಳೆ ಸಿಐಡಿ ತನಿಖೆ ನಡೆಸುತ್ತಿರುವ ಪ್ರಕರಣದಲ್ಲಿ ಆರೋಪಿಯಾಗಿದ್ದರು. ಆಕೆಯ ಸೂಸೈಡ್ ನೋಟ್‌ನಲ್ಲಿ, ತನಿಖಾಧಿಕಾರಿಯಿಂದ ಕಿರುಕುಳವನ್ನು ಅವರು ಆರೋಪಿಸಿದ್ದಾರೆ.

ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾಳೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದರು.

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಅಪರಾಧ ತನಿಖಾ ಇಲಾಖೆ (ಸಿಐಡಿ) ಮಹಿಳೆಯನ್ನು ವಿಚಾರಣೆ ನಡೆಸಿದ್ದರು. ಅವರು ಶುಕ್ರವಾರ ಇಲ್ಲಿನ ಪದ್ಮನಾಭನಗರದಲ್ಲಿರುವ ತಮ್ಮ ನಿವಾಸದಲ್ಲಿ ತಮ್ಮ ಜೀವನವನ್ನು ಅಂತ್ಯಗೊಳಿಸಿದ್ದಾರೆ. ಅವರು ಡೆತ್ ನೋಟ್ ಬರೆದಿದ್ದಾರೆ ಎನ್ನಲಾಗಿದೆ ಎಂದು ವರದಿಯಾಗಿದೆ. ಅದರಲ್ಲಿ ಅವರು ತಮ್ಮ ಸಾವಿಗೆ ಸಿಐಡಿಯ ತನಿಖಾಧಿಕಾರಿಗಳನ್ನು ದೂಷಿಸಿದ್ದಾರೆ.

ಸಾವನ್ನು ದೃಢಪಡಿಸಿರುವ ಬೆಂಗಳೂರು ಉಪ ಪೊಲೀಸ್ ಆಯುಕ್ತ (ದಕ್ಷಿಣ) ಲೋಕೇಶ್ ಬಿ.ಜಗಲಾಸರ್, ಡಿವೈ ಕನಕಲಕ್ಷ್ಮಿ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಮೃತರನ್ನು ಜೀವಾ ಎಂದು ಗುರುತಿಸಲಾಗಿದೆ. ಉದ್ಯೋಗ ಯೋಜನೆಯಡಿ ರಾಜ್ಯ ಸರ್ಕಾರ ನಿಗಮಕ್ಕೆ ನೀಡಿದ್ದ ಒಟ್ಟು ₹97 ಕೋಟಿಯನ್ನು 500 ಫಲಾನುಭವಿಗಳ ಹೆಸರಿನಲ್ಲಿ ದುರ್ಬಳಕೆ ಮಾಡಲಾಗಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.

ಈ ಹಣದ ಒಂದು ಭಾಗವನ್ನು ಮೃತ ಮಹಿಳೆಯ ಹೆಸರಿನ ಖಾತೆಗಳಿಗೆ ವರ್ಗಾಯಿಸಲಾಗಿದೆ. ಅಲ್ಲಿಂದ ಇತರ ಆರೋಪಿಗಳಿಗೆ ವಿತರಿಸಲಾಗಿದೆ ಎಂದು ಸಿಐಡಿ ಅಧಿಕಾರಿಗಳು ಹೇಳುತ್ತಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸಿಐಡಿ ಬಿಜೆಪಿ ಎಂಎಲ್‌ಸಿ ಸುನೀಲ್ ವಲ್ಯಾಪುರೆ ಅವರ ನಿವಾಸದ ಮೇಲೆ ದಾಳಿ ನಡೆಸಿತ್ತು.

ಇದನ್ನೂ ಓದಿ; ಗ್ಯಾರಂಟಿ, ಅಭಿವೃದ್ದಿಯ ಗೆಲುವು : ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...