Homeಮುಖಪುಟಯುಪಿ: ಸಂಭಾಲ್‌ ಮಸೀದಿ ಸಮೀಕ್ಷೆ ಸಂದರ್ಭದಲ್ಲಿ ಘರ್ಷಣೆ; ಕಲ್ಲು ತೂರಾಟ, ಪೊಲೀಸರಿಂದ ಅಶ್ರುವಾಯು ಪ್ರಯೋಗ

ಯುಪಿ: ಸಂಭಾಲ್‌ ಮಸೀದಿ ಸಮೀಕ್ಷೆ ಸಂದರ್ಭದಲ್ಲಿ ಘರ್ಷಣೆ; ಕಲ್ಲು ತೂರಾಟ, ಪೊಲೀಸರಿಂದ ಅಶ್ರುವಾಯು ಪ್ರಯೋಗ

- Advertisement -
- Advertisement -

ಮೊಘಲರು ಮಸೀದಿ ನಿರ್ಮಿಸಲು ದೇವಾಲಯವನ್ನು ಕೆಡವಿದರು ಎಂಬ ದೂರಿನ ಮೇರೆಗೆ ನ್ಯಾಯಾಲಯದ ಆದೇಶದ ನಂತರ ಪ್ರಾರಂಭವಾದ ಮಸೀದಿಯ ಸಮೀಕ್ಷೆಯನ್ನು ಗುಂಪೊಂದು ವಿರೋಧಿಸಿದಾಗ ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಭಾನುವಾರ ಹಿಂಸಾತ್ಮಕ ಘರ್ಷಣೆ ಸಂಭವಿಸಿದೆ.

ಸಮೀಕ್ಷಾ ತಂಡ ಆಗಮಿಸುತ್ತಿದ್ದಂತೆ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು ಶಾಹಿ ಜಾಮಾ ಮಸೀದಿ ಬಳಿ ಜಮಾಯಿಸಿ ಈ ಕ್ರಮವನ್ನು ವಿರೋಧಿಸಿದರು. ಭಾರೀ ಪೊಲೀಸ್ ಬಂದೋಬಸ್ತ್‌ನೊಂದಿಗೆ ಸಮೀಕ್ಷಾ ತಂಡದ ಮೇಲೆ ಗುಂಪು ಕಲ್ಲು ತೂರಾಟ ನಡೆಸಿದ್ದರಿಂದ ಪರಿಸ್ಥಿತಿ ಹಿಂಸಾಚಾರಕ್ಕೆ ತಿರುಗಿತು.

ಜಮಾ ಮಸೀದಿಯ ಮುಖ್ಯಸ್ಥರು ಮಸೀದಿಯ ಒಳಗಿನಿಂದ ಘೋಷಣೆ ಮಾಡಿದರು, ಮಸೀದಿಯ ಸುತ್ತಲೂ ನೆರೆದಿದ್ದ ಜನರನ್ನು ಚದುರಿಸಲು ಒತ್ತಾಯಿಸಿದರು. ಆದರೂ ಪ್ರತಿಭಟನೆ ಮುಂದುವರಿಸಿದರು. ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಗುಂಪನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ಆದರೆ, ಅವರ ಪ್ರಯತ್ನಗಳು ವಿಫಲವಾಗಿದ್ದು, ಗುಂಪು ಕಲ್ಲು ತೂರಾಟವನ್ನು ಪ್ರಾರಂಭಿಸಿತು.

“ನ್ಯಾಯಾಲಯದ ಆದೇಶದ ಮೇರೆಗೆ ಸಂಭಾಲ್‌ನಲ್ಲಿ ಸರ್ವೆ ನಡೆಸಲಾಗುತ್ತಿದೆ. ಕೆಲ ಸಮಾಜ ವಿರೋಧಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಇದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಪೊಲೀಸರು ಕಲ್ಲು ತೂರಾಟಗಾರರನ್ನು ಗುರುತಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ” ಎಂದು ಉತ್ತರ ಪ್ರದೇಶದ ಉನ್ನತ ಪೊಲೀಸ್ ಪ್ರಶಾಂತ್ ಕುಮಾರ್ ಹೇಳಿದ್ದಾರೆ.

ಹಿಂಸಾಚಾರದ ಹೊರತಾಗಿಯೂ, ಅಡ್ವೊಕೇಟ್ ಆಯೋಗವು ಸಮೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿತು. ಸಂಪೂರ್ಣ ಪ್ರಕ್ರಿಯೆಯನ್ನು ವೀಡಿಯೊ ಮತ್ತು ಛಾಯಾಚಿತ್ರ ತೆಗೆಯಲಾಗಿದೆ ಎಂದು ಸಂಭಾಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಂದರ್ ಪೆನ್ಸಿಯಾ ಹೇಳಿದ್ದಾರೆ. ಆಯೋಗವು ತನ್ನ ವರದಿಯನ್ನು ನವೆಂಬರ್ 29 ರಂದು ನ್ಯಾಯಾಲಯಕ್ಕೆ ಸಲ್ಲಿಸಲು ಸಜ್ಜಾಗಿದೆ.

ಶಾಹಿ ಜಾಮಾ ಮಸೀದಿಯಲ್ಲಿನ ಸರ್ವೇಯನ್ನು ಸುಪ್ರೀಂ ಕೋರ್ಟ್ ವಕೀಲ ವಿಷ್ಣು ಶಂಕರ್ ಜೈನ್ ಅವರು ನ್ಯಾಯಾಲಯದ ದೂರಿನ ನಂತರ ಮಸೀದಿಯನ್ನು ಮೂಲತಃ ದೇವಾಲಯ ಎಂದು ಪ್ರತಿಪಾದಿಸಿದ್ದರು.

ಕಳೆದ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಐದಕ್ಕಿಂತ ಹೆಚ್ಚು ಜನರು ಸೇರುವುದನ್ನು ತಡೆಯಲು ಈ ಪ್ರದೇಶದಲ್ಲಿ ನಿಷೇಧಾಜ್ಞೆಯನ್ನೂ ವಿಧಿಸಲಾಗಿದೆ.

ಇದೇ ರೀತಿಯ ಸಮೀಕ್ಷೆಯನ್ನು ನವೆಂಬರ್ 19 ರಂದು ನಡೆಸಲಾಯಿತು, ಸ್ಥಳೀಯ ಪೊಲೀಸರು ಮತ್ತು ಮಸೀದಿಯ ಆಡಳಿತ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಜೈನ್ ಅವರ ನ್ಯಾಯಾಲಯದ ದೂರಿನ ಪ್ರಕಾರ ಹರಿ ಹರ ಮಂದಿರವು ಒಮ್ಮೆ ಮಸೀದಿಯ ಸ್ಥಳದಲ್ಲಿ ಇತ್ತು. ಮೊಘಲ್ ಚಕ್ರವರ್ತಿ ಬಾಬರ್ ಅದನ್ನು 1529 ರಲ್ಲಿ ಭಾಗಶಃ ಕೆಡವಿದನು ಎಂದು ಆರೋಪಿಸಿದ್ದಾರೆ.

ವಿಷ್ಣು ಜೈನ್ ಮತ್ತು ಅವರ ತಂದೆ ಹರಿ ಶಂಕರ್ ಜೈನ್ ಅವರು ಜ್ಞಾನವಾಪಿ-ಕಾಶಿ ವಿಶ್ವನಾಥ ವಿವಾದ ಸೇರಿದಂತೆ ಪೂಜಾ ಸ್ಥಳಗಳಿಗೆ ಸಂಬಂಧಿಸಿದ ಅನೇಕ ಪ್ರಕರಣಗಳಲ್ಲಿ ಪ್ರತಿನಿಧಿಸಿದ್ದಾರೆ.

ಇದನ್ನೂ ಓದಿ; ಲಂಚ ಪ್ರಕರಣ: ಗೌತಮ್ ಅದಾನಿ, ಸಾಗರ್‌ಗೆ ಎಸ್‌ಇಸಿ ಸಮನ್ಸ್, 21 ದಿನಗಳಲ್ಲಿ ಉತ್ತರಿಸುವಂತೆ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...