Homeಮುಖಪುಟಸಂವಿಧಾನದ ಪೀಠಿಕೆಯ 'ಜಾತ್ಯತೀತ' ಪದವನ್ನು ಮತ್ತೆ ಎತ್ತಿಹಿಡಿದ ಸುಪ್ರೀಂಕೋರ್ಟ್ - ಬಿಜೆಪಿ & ಆರೆಸ್ಸೆಸ್‌ಗೆ ಮುಖಭಂಗ

ಸಂವಿಧಾನದ ಪೀಠಿಕೆಯ ‘ಜಾತ್ಯತೀತ’ ಪದವನ್ನು ಮತ್ತೆ ಎತ್ತಿಹಿಡಿದ ಸುಪ್ರೀಂಕೋರ್ಟ್ – ಬಿಜೆಪಿ & ಆರೆಸ್ಸೆಸ್‌ಗೆ ಮುಖಭಂಗ

- Advertisement -
- Advertisement -

ಭಾರತದ ಸಂವಿಧಾನದ ಪೀಠಿಕೆಯಲ್ಲಿ ಇರುವ ‘ಜಾತ್ಯತೀತ’ ಮತ್ತು ‘ಸಮಾಜವಾದಿ’ ಪದಗಳನ್ನು ತೆಗೆದುಹಾಕುವಂತೆ ಕೋರಿ ಸಲ್ಲಿಸಲಾದ ಕನಿಷ್ಠ ಮೂರು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ. ರಾಷ್ಟ್ರೀಯ ತುರ್ತುಪರಿಸ್ಥಿತಿ ಜಾರಿಯಲ್ಲಿದ್ದಾಗ 42ನೇ ತಿದ್ದುಪಡಿಯ ಮೂಲಕ 1976ರಲ್ಲಿ ಈ ಪದಗಳನ್ನು ಮುನ್ನುಡಿಗೆ ಸೇರಿಸಲಾಗಿತ್ತು.

ಸಂವಿಧಾನವನ್ನು ತಿದ್ದುಪಡಿ ಮಾಡುವ ಸಂಸತ್ತಿನ ಅಧಿಕಾರ ಪೀಠಿಕೆಗೂ ಅನ್ವಯವಾಗುತ್ತದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಪಿವಿ ಸಂಜಯ್ ಕುಮಾರ್ ಅವರ ಪೀಠ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಾಜಿ ರಾಜ್ಯಸಭಾ ಸದಸ್ಯ ಮತ್ತು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ, ಬಿಜೆಪಿ ಮತ್ತು ಆರೆಸ್ಸೆಸ್‌ ಪರ ವಕೀಲ ಅಶ್ವಿನಿ ಉಪಾಧ್ಯಾಯ ಮತ್ತು ಬಲರಾಮ್ ಸಿಂಗ್ ಅವರು ಪದಗಳನ್ನು ಕಿತ್ತು ಹಾಕುವಂತೆ ಅರ್ಜಿಗಳನ್ನು ಸಲ್ಲಿಸಿದ್ದರು. ಈ ಅರ್ಜಿಗಳನ್ನು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ನಾಯಕ ಮತ್ತು ರಾಜ್ಯಸಭಾ ಸದಸ್ಯ ಬಿನೋಯ್ ವಿಶ್ವಂ ಅವರು ವಕೀಲ ಶ್ರೀರಾಮ್ ಪರಕ್ಕಟ್ ಮೂಲಕ ವಿರೋಧಿಸಿದ್ದರು.

“ರಿಟ್ ಅರ್ಜಿಗಳಿಗೆ ಹೆಚ್ಚಿನ ಚರ್ಚೆ ಮತ್ತು ತೀರ್ಪು ಅಗತ್ಯವಿಲ್ಲ. ಸಂವಿಧಾನದ ಮೇಲೆ ಸಂಸತ್ತಿನ ತಿದ್ದುಪಡಿ ಅಧಿಕಾರವು ಪೀಠಿಕೆಗೆ ಅನ್ವಯವಾಗುತ್ತದೆ. ಹಲವು ವರ್ಷಗಳ ನಂತರ ಪ್ರಕ್ರಿಯೆಯನ್ನು ರದ್ದು ಮಾಡುವುದಿಲ್ಲ ಎಂದು ನಾವು ವಿವರಿಸಿದ್ದೇವೆ. ತಿದ್ದಪಡಿ ಮಾಡಲಾದ ದಿನಾಂಕವು 368 ನೇ ವಿಧಿಯ ಅಡಿಯಲ್ಲಿ ಸರ್ಕಾರದ ಅಧಿಕಾರವನ್ನು ಮೊಟಕುಗೊಳಿಸುವುದಿಲ್ಲ”ಎಂದು ನ್ಯಾಯಾಲಯ ಹೇಳಿದೆ.

ಭಾರತೀಯ ಸನ್ನಿವೇಶದಲ್ಲಿ ಸಮಾಜವಾದ ಮತ್ತು ಜಾತ್ಯತೀತತೆಯ ಅರ್ಥವೇನು ಮತ್ತು ಅದರ ಬಗ್ಗೆ ಸರ್ಕಾರವು ಹೇಗೆ ನೀತಿಯನ್ನು ರೂಪಿಸುತ್ತದೆ ಎಂಬುದನ್ನು ಇದು ಜಾಹೀರು ಮಾಡಿದೆ ಎಂದು ಪೀಠ ಹೇಳಿದೆ. “ನಂತರ ನಾವು ಸಮಾಜವಾದ ಮತ್ತು ಜಾತ್ಯತೀತತೆ ಎಂದರೇನು ಮತ್ತು ಅದನ್ನು ಸರ್ಕಾರ ಹೇಗೆ ತೆಗೆದುಕೊಳ್ಳಬೇಕು ಎಂಬುವುದಕ್ಕೆ ಮುಕ್ತವಾಗಿದೆ, ಅದೇ ನೀತಿಯನ್ನು ಹೇಗೆ ಅನುಸರಿಸಬೇಕು ಎಂದು ನಾವು ಹೇಳಿದ್ದೇವೆ” ಎಂದು ನ್ಯಾಯಾಲಯ ಹೇಳಿದೆ.

ಭಾರತದ ಸಂವಿಧಾನದ ಪೀಠಿಕೆಗೆ “ಸಮಾಜವಾದಿ” ಮತ್ತು “ಜಾತ್ಯತೀತ” ಪದಗಳನ್ನು ಸೇರಿಸಿದ ಭಾರತದ ಸಂವಿಧಾನದ 42 ನೇ ತಿದ್ದುಪಡಿಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ನವೆಂಬರ್ 22 ರಂದು, ಈ ಪ್ರಕರಣದಲ್ಲಿ ತನ್ನ ಆದೇಶವನ್ನು ಇಂದು ಪ್ರಕಟಿಸುವುದಾಗಿ ಅದು ಸೂಚಿಸಿತ್ತು.

ಅದೇ ಸಮಯದಲ್ಲಿ, ಜಾತ್ಯತೀತತೆಯು ಸಂವಿಧಾನದ ಮೂಲ ರಚನೆಯ ಭಾಗವಾಗಿದ್ದು, ಈ 42 ನೇ ತಿದ್ದುಪಡಿಯನ್ನು ಸುಪ್ರೀಂ ಕೋರ್ಟ್ ಈ ಹಿಂದೆಯೂ ಪರೀಕ್ಷಿಸಿ ಎತ್ತಿಹಿಡಿದಿದೆ ಎಂದು ಅರ್ಜಿದಾರರಿಗೆ ನೆನಪಿಸಿತ್ತು.

ಜಾತ್ಯತೀತತೆಯು ಸಂವಿಧಾನದ ಪ್ರಮುಖ ಲಕ್ಷಣವಾಗಿದ್ದು, ಭಾರತೀಯ ಸಂವಿಧಾನದ ಪೀಠಿಕೆಯಲ್ಲಿನ “ಸಮಾಜವಾದಿ” ಮತ್ತು “ಜಾತ್ಯತೀತ” ಪದಗಳನ್ನು ಪಾಶ್ಚಿಮಾತ್ಯ ದೃಷ್ಟಿಕೋನದಿಂದ ನೋಡಬೇಕಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಕಳೆದ ತಿಂಗಳು ಹೇಳಿತ್ತು.

ಇದನ್ನೂ ಓದಿ: ಬಿಜೆಪಿ ಸೋಲಿಸಲು ದಲಿತ-ಅಲ್ಪಸಂಖ್ಯಾತರ ಮತಗಳನ್ನು ಒಗ್ಗೂಡಿಸಬೇಕು: ವಿಸಿಕೆ ಅಧ್ಯಕ್ಷ ತೊಳ್ ತಿರುಮಾವಳವನ್ ಕರೆ

ಬಿಜೆಪಿ ಸೋಲಿಸಲು ದಲಿತ-ಅಲ್ಪಸಂಖ್ಯಾತರ ಮತಗಳನ್ನು ಒಗ್ಗೂಡಿಸಬೇಕು: ವಿಸಿಕೆ ಅಧ್ಯಕ್ಷ ತೊಳ್ ತಿರುಮಾವಳವನ್ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...