Homeಕರ್ನಾಟಕಭ್ರಷ್ಟಾಚಾರ ಆರೋಪ; ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ವಿರುದ್ಧ ರಾಜ್ಯಪಾಲರಿಗೆ ದೂರು

ಭ್ರಷ್ಟಾಚಾರ ಆರೋಪ; ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ವಿರುದ್ಧ ರಾಜ್ಯಪಾಲರಿಗೆ ದೂರು

- Advertisement -
- Advertisement -

ಭ್ರಷ್ಟಾಚಾರ, ಸ್ವಜನಪಕ್ಷಪಾತದ ಆರೋಪದ ಮೇಲೆ ಕರ್ನಾಟಕ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿರುದ್ಧ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರಿಗೆ ಸಾಮಾಜಿಕ ಕಾರ್ಯಕರ್ತ ಸಿನೇಶ್‌ ಕಲ್ಲಹಳ್ಳಿ ಸೋಮವಾರ ದೂರು ಸಲ್ಲಿಸಿದ್ದಾರೆ.

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ (ಕೆಐಎಡಿಬಿ) ಇಂಜಿನಿಯರ್ ಬಿ.ಆರ್.ವೀರಭದ್ರಯ್ಯ ಅವರ ‘ಭ್ರಷ್ಟಾಚಾರ’ಕ್ಕೆ ನೆರವು ನೀಡುವ ಮೂಲಕ ಸಚಿವ ಪಾಟೀಲ್ ವ್ಯಾಪಕ ಭ್ರಷ್ಟಾಚಾರವನ್ನು ಪ್ರೋತ್ಸಾಹಿಸುತ್ತಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಮನವಿ ಮಾಡುತ್ತೇನೆ ಎಂದು ದಿನೇಶ್ ರಾಜ್ಯಪಾಲರನ್ನು ಒತ್ತಾಯಿಸಿದ್ದಾರೆ.

ಧಾರವಾಡ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬೆಂಗಳೂರು ಹೊರವಲಯದ ದೇವನಹಳ್ಳಿ ಬಳಿಯ ಮುದ್ದೇನಹಳ್ಳಿ, ಹರಳೂರು ಭಾಗದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಕೆಐಎಡಿಬಿ ಕರೆದ ಟೆಂಡರ್ ಹಾಗೂ ಇತರೆ ಯೋಜನೆಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ದಿನೇಶ್ ಆರೋಪಿಸಿದ್ದಾರೆ.

ನಕಲಿ ಬಿಲ್ ಸೃಷ್ಟಿಸಿ, ಟೆಂಡರ್ ಇಲ್ಲದೇ ನೂರಾರು ಕೋಟಿ ರೂಪಾಯಿಗಳ ಕಾಮಗಾರಿಗಳನ್ನು ಮಂಜೂರು ಮಾಡಲಾಗಿದೆ. ಈ ಎಲ್ಲದರ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಬೇಕು ಎಂದು ಅವರು ಪ್ರತಿಪಾದಿಸಿದರು.

“ಕಿಕ್‌ಬ್ಯಾಕ್ ಮತ್ತು ಕಮಿಷನ್‌ಗಾಗಿ ಆಪಾದಿತ ಕಾಯ್ದೆಗಳನ್ನು ಉಲ್ಲಂಘಿಸಿ ಇ-ಪೋರ್ಟಲ್‌ಗಳಲ್ಲಿ ತರಾತುರಿಯಲ್ಲಿ ಟೆಂಡರ್‌ಗಳನ್ನು ಕರೆಯಲಾಗಿದೆ. ಈ ನಿಟ್ಟಿನಲ್ಲಿ ಸರ್ಕಾರದ ಸುತ್ತೋಲೆಗಳನ್ನು ಕಡೆಗಣಿಸಲಾಗಿದೆ” ಎಂದು ಅವರು ಆರೋಪಿಸಿದರು.

ಪಾರದರ್ಶಕ ಸ್ಪರ್ಧಾತ್ಮಕ ಟೆಂಡರ್ ಪ್ರಕ್ರಿಯೆ ನಡೆಸದೆ ರಾಜ್ಯದ ಬೊಕ್ಕಸಕ್ಕೆ ಭಾರಿ ನಷ್ಟ ಉಂಟು ಮಾಡಿದ್ದು, ಬಿಡ್ಡಿಂಗ್ ನಲ್ಲಿ ಭಾಗವಹಿಸಿದ್ದ ಏಜೆನ್ಸಿಗಳು ಅರ್ಹತೆ ಪಡೆದಿಲ್ಲ ಎಂದರು.

ಅಧಿಕಾರಿಗಳು ಬಿಡ್‌ದಾರರೊಂದಿಗೆ ಶಾಮೀಲಾಗಿ ಹಿನ್ನೆಲೆ ಪರಿಶೀಲನೆಗಳನ್ನು ಖಾತ್ರಿಪಡಿಸಿಕೊಳ್ಳದೆ ಯೋಜನೆಗಳನ್ನು ಅನುಮೋದಿಸಿದ್ದಾರೆ. ಉಲ್ಲೇಖಿಸಿದ ಬೆಲೆಗಿಂತ ಹೆಚ್ಚಿನ ಮೊತ್ತಕ್ಕೆ ಟೆಂಡರ್‌ಗಳನ್ನು ಅನುಮೋದಿಸಿದ್ದಾರೆ ಎಂದು ಅವರು ಆರೋಪಿಸಿದರು.

ಗುತ್ತಿಗೆದಾರರು ಮತ್ತು ಏಜೆನ್ಸಿಗಳು ನೀಡುವ ಭದ್ರತಾ ಠೇವಣಿಗಳ ಬಗ್ಗೆ “ಕಳಪೆ ನಿರ್ವಹಣೆ” ಇದೆ. ಈ ಬಗ್ಗೆ ಕೆಐಎಡಿಬಿ ಮಾಹಿತಿ ಮರೆಮಾಚುತ್ತಿದೆ ಎಂದರು.

ಟೆಂಡರ್‌ಗಳನ್ನು ಹಿರಿಯ ಅಧಿಕಾರಿ ಬಿ.ಆರ್‌ ವೀರಭದ್ರಯ್ಯ ಅವರ ಪಾಲುದಾರರು ನಡೆಸುತ್ತಿರುವ ಏಜೆನ್ಸಿಗಳಿಗೆ ನೀಡಲಾಗಿದೆ ಎಂದು ಅವರು ಆರೋಪಿಸಿದರು.

“ಈ ವಿಷಯದ ಬಗ್ಗೆ ತನಿಖೆ ನಡೆಸಲು ಮತ್ತು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನಗಳನ್ನು ನೀಡುವಂತೆ ನಾನು ಪ್ರಾರ್ಥಿಸುತ್ತೇನೆ. ಈ ಕಂಪನಿಗಳನ್ನು ಕಪ್ಪು ಪಟ್ಟಿಗೆ ಸೇರಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ; ಮುಡಾ ಪ್ರಕರಣ: ‘ಲೋಕಾಯುಕ್ತ ಅಧಿಕಾರಿಗಳು ಆರೋಪಿಗಳಿಗೆ ರಕ್ಷಣೆ ನೀಡುತ್ತಿದ್ದಾರೆ’ ಎಂದು ದೂರಿದ ಅರ್ಜಿದಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...