Homeಮುಖಪುಟವಕ್ಫ್ ಮಸೂದೆಯ ಸಂಸದೀಯ ಸಮಿತಿಯ ವಿಸ್ತರಣೆಗೆ ಕೋರಿದ ಪ್ರತಿಪಕ್ಷಗಳು; ಸ್ಪೀಕರ್‌ಗೆ ಪತ್ರ

ವಕ್ಫ್ ಮಸೂದೆಯ ಸಂಸದೀಯ ಸಮಿತಿಯ ವಿಸ್ತರಣೆಗೆ ಕೋರಿದ ಪ್ರತಿಪಕ್ಷಗಳು; ಸ್ಪೀಕರ್‌ಗೆ ಪತ್ರ

- Advertisement -
- Advertisement -

ವಕ್ಫ್ ತಿದ್ದುಪಡಿ ಮಸೂದೆಯನ್ನು ಕೂಲಂಕಷವಾಗಿ ಪರಿಶೀಲಿಸುತ್ತಿರುವ ಜಂಟಿ ಸಂಸದೀಯ ಸಮಿತಿ(ಜೆಪಿಸಿ)ಯ ವಿರೋಧ ಪಕ್ಷದ ಸದಸ್ಯರು ಸೋಮವಾರ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿ ಸಮಿತಿಯ ಅಧಿಕಾರಾವಧಿಯನ್ನು ಸಮಂಜಸವಾಗಿ ವಿಸ್ತರಿಸುವಂತೆ ಒತ್ತಾಯಿಸಿದ್ದಾರೆ. ಪ್ರತಿಪಕ್ಷಗಳು ಸ್ಪೀಕರ್ ಅವರಿಗೆ ನೀಡಿರುವ ಮನವಿ ಪತ್ರದಲ್ಲಿ, ಸಮಿತಿಯ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಜಗದಾಂಬಿಕಾ ಪಾಲ್ ವಿರುದ್ಧ ದೂರು ದಾಖಲಿಸಿದ್ದು, ನಿರ್ಣಾಯಕ ವಿಷಯದ ಕಲಾಪವನ್ನು ಬುಡಮೇಲು ಮಾಡಿದ್ದಾರೆ ಎಂದು ಆರೋಪಿಸಿವೆ. ವಕ್ಫ್ ಮಸೂದೆಯ

“ಸಮಿತಿಯ ಅಧ್ಯಕ್ಷರು ಸರಿಯಾದ ಪ್ರಕ್ರಿಯೆಗಳನ್ನು ಅನುಸರಿಸುತ್ತಿಲ್ಲ ಎಂದು ನಾವು ಸ್ಪೀಕರ್‌ಗೆ ಮನವಿ ಸಲ್ಲಿಸಿದ್ದೇವೆ. ಅವರು ಆತುರಪಡುತ್ತಿದ್ದು, ಕಲಾಪವನ್ನು ಬುಡಮೇಲು ಮಾಡುತ್ತಿದ್ದಾರೆ” ಎಂದು ಡಿಎಂಕೆ ಸದಸ್ಯ ಎ. ರಾಜಾ ಸ್ಪೀಕರ್ ಅವರನ್ನು ಭೇಟಿಯಾದ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ವಕ್ಫ್ ತಿದ್ದುಪಡಿ ಮಸೂದೆಯು ಅಸ್ತಿತ್ವದಲ್ಲಿರುವ ಕಾನೂನಿಗೆ ಹಲವಾರು ಪ್ರಮುಖ ಬದಲಾವಣೆಗಳನ್ನು ಒಳಗೊಂಡಿರುವ ವಿಸ್ತಾರವಾದ ಶಾಸನವಾಗಿದೆ ಎಂಬುದನ್ನು ಮೊದಲು ಗಮನಿಸಬೇಕು. ಈ ಬದಲಾವಣೆಗಳು ಭಾರತದ ಜನಮುದಾಯದ ದೊಡ್ಡ ವರ್ಗದ ಮೇಲೆ ಪರಿಣಾಮ ಬೀರುತ್ತವೆ. ಆದ್ದರಿಂದ, ವರದಿಯನ್ನು ಅಂತಿಮಗೊಳಿಸಲು ಕೇವಲ ಮೂರು ತಿಂಗಳ ಸಮಯವು ಅಸಮರ್ಪಕವಾಗಿದ್ದು, ಮಾತ್ರವಲ್ಲದೆ ಅನುಚಿತ ಶಿಫಾರಸುಗಳಿಗೆ ಕಾರಣವಾಗಲಿದೆ” ಎಂದು ಪ್ರತಿಪಕ್ಷಗಳು ಪತ್ರದಲ್ಲಿ ತಿಳಿಸಿವೆ.

“ಆದ್ದರಿಂದ ಸೂಕ್ತ ಸಮಾಲೋಚನೆಗಾಗಿ, ಸಮಿತಿಯ ಅಧಿಕಾರಾವಧಿಯನ್ನು ಸಮಂಜಸವಾದ ಸಮಯದವರೆಗೆ ವಿಸ್ತರಿಸಬೇಕು” ಎಂದು ಪತ್ರವು ಸ್ಪೀಕರ್‌ಗೆ ಆಗ್ರಹಿಸಿದೆ. ವಕ್ಫ್ ಮಸೂದೆಯ

ಸ್ಪೀಕರ್ ಅವರನ್ನು ಭೇಟಿಯಾದವರಲ್ಲಿ ಡಿಎಂಕೆ ನಾಯಕರಾದ ರಾಜಾ ಮತ್ತು ಎಂ. ಅಬ್ದುಲ್ಲಾ, ಕಾಂಗ್ರೆಸ್ ಸದಸ್ಯರಾದ ಸೈಯದ್ ನಾಸೀರ್ ಹುಸೇನ್, ಮೊಹಮ್ಮದ್ ಜಾವೇದ್ ಮತ್ತು ಇಮ್ರಾನ್ ಮಸೂದ್, ತೃಣಮೂಲ ಸದಸ್ಯರಾದ ಕಲ್ಯಾಣ್ ಬ್ಯಾನರ್ಜಿ ಮತ್ತು ಎಂ. ನಾದಿಮುಲ್ ಹಕ್, ಎಎಪಿ ಸದಸ್ಯ ಸಂಜಯ್ ಸಿಂಗ್, ಎಸ್‌ಪಿ ಸದಸ್ಯ ಮೊಹಿಬ್ಬುಲ್ಲಾ ಮತ್ತು ಎಐಎಂಐಎಂ ಸದಸ್ಯ ಅಸಾದುದ್ದೀನ್ ಓವೈಸಿ ಅವರು ಇದ್ದರು.

“ಸಮಿತಿಯ ಅಧ್ಯಕ್ಷರು ಜಂಟಿ ಸಂಸದೀಯ ಸಮಿತಿಯ ಸರಿಯಾದ ಪ್ರಕ್ರಿಯೆಯನ್ನು ಅನುಸರಿಸುತ್ತಿಲ್ಲ ಮತ್ತು ನವೆಂಬರ್ 29 ರಂದು ಸಂಸತ್ತಿನಲ್ಲಿ ವರದಿಯನ್ನು ಮಂಡಿಸಬೇಕು ಎಂದು ಸ್ವಯಂ ಪ್ರೇರಿತವಾಗಿ ಘೋಷಿಸಿದ್ದಾರೆ. ಪ್ರಸ್ತಾವಿತ ಮಸೂದೆಯ ಭಿನ್ನಮತದ ಟಿಪ್ಪಣಿಗಳು ಮತ್ತು ಪ್ರತಿ ಷರತ್ತಿನ ಮೇಲೆ ಮತ ಚಲಾಯಿಸುವುದು ಸೇರಿದಂತೆ ಹಲವು ಕಾರ್ಯವಿಧಾನಗಳಿವೆ. ಇವೆಲ್ಲವೂ ಆಗಬೇಕು” ಎಂದು ಎ. ರಾಜಾ ಹೇಳಿದ್ದಾರೆ.

ಸಂಸದೀಯ ಸಮಿತಿಯು 25 ಸಭೆಗಳನ್ನು ನಡೆಸಿದ್ದು, ಅದರಲ್ಲಿ ಹಲವಾರು ಅಪ್ರಸ್ತುತ ಸಂಸ್ಥೆಗಳ ಪುರಾವೆಗಳನ್ನು ಒಳಗೊಂಡಿದೆ ಎಂದು ಅವರು ಹೇಳಿದ್ದಾರೆ, ಆದರೆ ಬಿಹಾರ, ದೆಹಲಿ ಮತ್ತು ಉತ್ತರ ಪ್ರದೇಶದಂತಹ ವಿವಿಧ ರಾಜ್ಯ ಸರ್ಕಾರಗಳ ಪ್ರಸ್ತುತಿಗಳು ಬಾಕಿ ಉಳಿದಿವೆ ಎಂದು ಅವರು ತಿಳಿಸಿದ್ದಾರೆ.

ಸಂಸದೀಯ ಸಮಿತಿಯಿಂದ ವರದಿಯನ್ನು ನಿರೀಕ್ಷಿಸಿ ಪ್ರಸ್ತುತ ಪ್ರಾರಂಭವಾಗಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ತನ್ನ ಶಾಸಕಾಂಗ ಕಾರ್ಯಸೂಚಿಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯನ್ನು ಪಟ್ಟಿ ಮಾಡಿದೆ.

ವಕ್ಫ್ ಮಂಡಳಿಗಳ ಕಾರ್ಯನಿರ್ವಹಣೆಯಲ್ಲಿ ಹೆಚ್ಚಿನ ಹೊಣೆಗಾರಿಕೆ ಮತ್ತು ಪಾರದರ್ಶಕತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ‘ವಕ್ಫ್ ಕಾಯಿದೆ-1995’ ಅನ್ನು ತಿದ್ದುಪಡಿ ಮಾಡಲು ಈ ಮಸೂದೆಯು ಪ್ರಯತ್ನಿಸುತ್ತಿದೆ. ಆದರೆ ಭಾರತದಾದ್ಯಂತ ಈ ಮಸೂದೆಗೆ ವಿರೋಧ ವ್ಯಕ್ತವಾಗಿದ್ದು, ಕೇಂದ್ರ ಸರ್ಕಾರವು ವಕ್ಭ್‌ ಆಸ್ತಿಗಳನ್ನು ಕಬಳಿಸಿ, ಮುಸ್ಲಿಮರಿಗೆ ಅನ್ಯಾಯ ಎಸಗಲು ಇದನ್ನು ಮಾಡುತ್ತಿದೆ ಎಂದು ಆರೋಪಿಸಲಾಗಿದೆ. ಈಗಾಗಲೆ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ| ಪೊಲೀಸ್ ಕಸ್ಟಡಿಯಲ್ಲಿ ಇಬ್ಬರು ಮಹಿಳೆಯರಿಗೆ ಚಿತ್ರಹಿಂಸೆ ಪ್ರಕರಣ; ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್‌ ಆದೇಶ 

ಪಶ್ಚಿಮ ಬಂಗಾಳ| ಪೊಲೀಸ್ ಕಸ್ಟಡಿಯಲ್ಲಿ ಇಬ್ಬರು ಮಹಿಳೆಯರಿಗೆ ಚಿತ್ರಹಿಂಸೆ ಪ್ರಕರಣ; ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...