Homeಮುಖಪುಟಜಾರ್ಖಂಡ್ ವಿಧಾನಸಭೆಗೆ ದಾಖಲೆ ಸಂಖ್ಯೆಯ ಮಹಿಳಾ ಶಾಸಕರು ಆಯ್ಕೆ

ಜಾರ್ಖಂಡ್ ವಿಧಾನಸಭೆಗೆ ದಾಖಲೆ ಸಂಖ್ಯೆಯ ಮಹಿಳಾ ಶಾಸಕರು ಆಯ್ಕೆ

- Advertisement -
- Advertisement -

ಕಳೆದ ವಾರ ಪ್ರಕಟವಾದ ಜಾರ್ಖಂಡ್ ಚುನಾವಣಾ ಫಲಿತಾಂಶದಲ್ಲಿ ಇದುವೆ ಮೊದಲ ಬಾರಿಗೆ ರಾಜ್ಯದ ವಿಧಾನಸಭೆಗೆ ಗರಿಷ್ಠ ಸಂಖ್ಯೆಯ ಮಹಿಳಾ ಶಾಸಕರು ಆಯ್ಕೆಯಾಗಿದ್ದಾರೆ ಎಂದು ವರದಿಯಾಗಿದೆ. ಇಂಡಿಯಾ ಮತ್ತು ಎನ್‌ಡಿಎ ಮೈತ್ರಿಕೂಟಗಳು ಒಟ್ಟಾಗಿ ಕಣಕ್ಕಿಳಿಸಿದ 26 ಮಹಿಳಾ ಅಭ್ಯರ್ಥಿಗಳ ಪೈಕಿ ಹನ್ನೆರಡು ಮಂದಿ ವಿಧಾನಸಭೆಗೆ ಪ್ರವೇಶಿಸಿದ್ದಾರೆ. 2019ರಲ್ಲಿ ರಾಜ್ಯದ ವಿಧಾನಸಭೆಗೆ 10 ಮಂದಿ ಮಹಿಳಾ ಶಾಸಕರು ಆಯ್ಕೆಯಾಗಿದ್ದರು.

24 ವರ್ಷಗಳ ಹಿಂದೆ ರಚನೆಯಾದ ಜಾರ್ಖಂಡ್ ರಾಜ್ಯದ ವಿಧಾನಸಭೆಯಲ್ಲಿ ಪ್ರತಿ ವಿಧಾನಸಭಾ ಚುನಾವಣೆಗೂ ಮಹಿಳಾ ಶಾಸಕರ ಸಂಖ್ಯೆ ಹೆಚ್ಚುತ್ತಿದೆ. 81 ಸ್ಥಾನಗಳಿರುವ ಜಾರ್ಖಂಡ್ ವಿಧಾನಸಭೆಯಲ್ಲಿ 2000 ರಲ್ಲಿ, ರಾಜ್ಯದಲ್ಲಿ ಮೂವರು ಮಹಿಳಾ ಶಾಸಕರು ಆಯ್ಕೆಯಾಗಿದ್ದರು. 2005 ರಲ್ಲಿ ಈ ಸಂಖ್ಯೆ ಎಂಟಕ್ಕೆ ಮತ್ತು 2014 ರಲ್ಲಿ ಸಂಖ್ಯೆ ಒಂಬತ್ತಕ್ಕೆ ಏರಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಚುನಾಯಿತರಾದ 12 ಮಂದಿ ಮಹಿಳಾ ಶಾಸಕರಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ಗರಿಷ್ಠ ಐವರು ಆಯ್ಕೆಯಾಗಿದ್ದರೆ, ನಾಲ್ವರು ಬಿಜೆಪಿ ಟಿಕೆಟ್‌ನಲ್ಲಿ ಆಯ್ಕೆಯಾಗಿದ್ದಾರೆ. ಉಳಿದ ಮೂವರು ಮಹಿಳಾ ಶಾಸಕರು ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಜೆಎಂಎಂ ಪಕ್ಷದಿಂದ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ಪ್ರಮುಖ ಮಹಿಳೆಯರಲ್ಲಿ ಹೇಮಂತ್ ಸೋರೆನ್ ಅವರ ಪತ್ನಿ ಕಲ್ಪನಾ, ಬಿಜೆಪಿಯ ಮಾಜಿ ಸಚಿವ ಡಾ ಲೋಯಿಸ್ ಮರಾಂಡಿ ಮತ್ತು ಸಬಿತಾ ಮಹತೋ ಸೇರಿದ್ದಾರೆ.

ಆಯ್ಕೆಯಾದ 12 ಮಹಿಳೆಯರ ಪೈಕಿ ಕಾಂಗ್ರೆಸ್‌ನ ನಿಸಾತ್ ಆಲಂ ಗರಿಷ್ಠ 86,000 ಮತಗಳ ಅಂತರದಿಂದ ಪಾಕುರ್ ಕ್ಷೇತ್ರವನ್ನು ಗೆದ್ದ ಕೀರ್ತಿಗೆ ಪಾತ್ರರಾಗಿದ್ದಾರೆ. ಟೆಂಡರ್ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪ್ರಸ್ತುತ ಜೈಲು ಸೇರಿರುವ ಮಾಜಿ ಸಚಿವ ಅಲಂಗೀರ್ ಆಲಂ ಅವರ ಪತ್ನಿ ನಿಸಾತ್ ಆಲಂ ಅವರು ತಮ್ಮ ಪತಿ ಪ್ರತಿನಿಧಿಸಿದ್ದ ಕ್ಷೇತ್ರದಲ್ಲಿ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಮತ್ತೊಬ್ಬ ಮಹಿಳಾ ಶಾಸಕರಾದ ಕಾಂಗ್ರೆಸ್ ನಾಯಕ ಸಮ್ರೇಶ್ ಸಿಂಗ್ ಅವರ ಸೊಸೆ ಶ್ವೇತಾ ಸಿಂಗ್ ಕೂಡ ಬೊಕಾರೊದಿಂದ ಬಿಜೆಪಿಯ ಬಿರಾಂಚಿ ನಾರಾಯಣ್ ಅವರನ್ನು 7,207 ಮತಗಳಿಂದ ಸೋಲಿಸುವ ಮೂಲಕ ಆಯ್ಕೆಯಾಗಿದ್ದಾರೆ.

ಮಹಿಳಾ ಶಾಸಕರ ಪೈಕಿ ಪ್ರಮುಖ ವ್ಯಕ್ತಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಪತ್ನಿ ಕಲ್ಪನಾ ಸೊರೆನ್ ಅವರು 17,142 ಮತಗಳ ಅಂತರದಿಂದ ಬಿಜೆಪಿಯ ಮುನಿಯಾ ದೇವಿ ಅವರನ್ನು ಸೋಲಿಸುವ ಮೂಲಕ ಸತತ ಎರಡನೇ ಅವಧಿಗೆ ಜಾರ್ಖಂಡ್ ವಿಧಾನಸಭೆಗೆ ಪ್ರವೇಶಿಸಿದ್ದಾರೆ.

ಮಾಜಿ ಸಚಿವೆ ದೀಪಿಕಾ ಪಾಂಡೆ ಸಿಂಗ್ ಅವರು ಮಹ್ಗಾಮ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯ ಅಶೋಕ್ ಕುಮಾರ್ ಅವರನ್ನು 18,645 ಅಂತರದಿಂದ ಸೋಲಿಸುವ ಮೂಲಕ ಮತ್ತೊಮ್ಮೆ ಆಯ್ಕೆಯಾಗಿದ್ದಾರೆ.

ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿಯಿಂದ ಟಿಕೆಟ್ ನಿರಾಕರಿಸಿದ ನಂತರ ಜೆಎಂಎಂಗೆ ಪಕ್ಷಾಂತರವಾದ ಬಿಜೆಪಿಯ ಮಾಜಿ ಸಚಿವ ಲೂಯಿಸ್ ಮರಾಂಡಿ ಕೂಡ ಜಾಮಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಅದೇ ರೀತಿ, ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದ ಶಿಲ್ಪಿ ನೇಹಾ ಟಿರ್ಕಿ ಎರಡನೇ ಬಾರಿಗೆ ಮರ್ದಾರ್ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.

ಈ ನಡುವೆ ಪ್ರಮಾಣ ವಚನ ಸಮಾರಂಭಕ್ಕೆ ಪ್ರಧಾನಿಯನ್ನು ಆಹ್ವಾನಿಸಲು ಮುಖ್ಯಮಂತ್ರಿ ಹೇಮಂತ್ ಸೊರೇನ್ ಮತ್ತು ಅವರ ಪತ್ನಿ ಕಲ್ಪನಾ ಸೋರೆನ್ ಅವರು ದೆಹಲಿಗೆ ಪ್ರಯಾಣಿಸಿದ್ದಾರೆ. ಇದೇ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಗಣ್ಯರನ್ನು ಗುರುವಾರ ನಡೆಯುವ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ| ಪೊಲೀಸ್ ಕಸ್ಟಡಿಯಲ್ಲಿ ಇಬ್ಬರು ಮಹಿಳೆಯರಿಗೆ ಚಿತ್ರಹಿಂಸೆ ಪ್ರಕರಣ; ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್‌ ಆದೇಶ

ಪಶ್ಚಿಮ ಬಂಗಾಳ| ಪೊಲೀಸ್ ಕಸ್ಟಡಿಯಲ್ಲಿ ಇಬ್ಬರು ಮಹಿಳೆಯರಿಗೆ ಚಿತ್ರಹಿಂಸೆ ಪ್ರಕರಣ; ಎಸ್‌ಐಟಿ ತನಿಖೆಗೆ ಸುಪ್ರೀಂಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...