Homeಕರ್ನಾಟಕಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು: ಚಂದ್ರಶೇಖರ ಸ್ವಾಮಿ ವಿವಾದ

ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು: ಚಂದ್ರಶೇಖರ ಸ್ವಾಮಿ ವಿವಾದ

ಪಾಳೆಗಾರಿ ಸ್ವಾಮಿ ಮುಂದೆ ದಲಿತರಿಗೂ ಹೀಗೆ ಹೇಳುತ್ತಾರೆ ಎಂದು ಆಕ್ರೋಶ

- Advertisement -
- Advertisement -

ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕು, ಆಗ ಎಲ್ಲವೂ ಸರಿಯಾಗುತ್ತದೆ ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮಿ ಅವರು ವಿವಾದಿತ ಹೇಳಿಕೆ ನೀಡಿದ್ದಾರೆ. ಅವರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಇಂದು ಮುಸ್ಲಿಮರಿಗೆ ಹೀಗೆ ಹೇಳುತ್ತಾರೆ, ಮುಂದಿನ ದಿನಗಳಲ್ಲಿ ಈ ಪಾಳೇಗಾರಿ ಮನಸ್ಥಿತಿಯ ಸ್ವಾಮಿಗಳು ನಮ್ಮ ಮಾತು ಕೇಳುತ್ತಿಲ್ಲ ಎಂದು ಇಲ್ಲಿನ ಹಿಂದುಳಿದ ವರ್ಗಗಳ ಇತರ ಸಮುದಾಯಗಳಿಗೆ ಮತ್ತು ದಲಿತರಿಗೂ ಹೀಗೆ ಹೇಳುತ್ತಾರೆ ಎಂದು ಅಭಿಪ್ರಾಯ ವ್ಯಕ್ತವಾಗಿದೆ.

ವಕ್ಫ್ ಕಾಯಿದೆ ವಿರುದ್ಧವಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿಯ ಸಹ ಸಂಘಟನೆಯಾದ ಭಾರತೀಯ ಕಿಸಾನ್ ಸಂಘ ಆಯೋಜಿಸಿದ ಪ್ರತಿಭಟನೆಯಲ್ಲಿ ಭಾಗಿಯಾಗಿ ಅವರು ಮಾತನಾಡುತ್ತಿದ್ದರು. ಪ್ರತಿಭಟನೆಯಲ್ಲಿ ಮಾತನಾಡಿದ ಚಂದ್ರಶೇಖರ ಅವರು, “ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು. ಮುಸ್ಲಿಂ ಜನಾಂಗಕ್ಕೆ ಮತದಾನದ ಹಕ್ಕೇ ಇಲ್ಲದಂತೆ ಕಾನೂನು ಮಾಡಿದರೆ ಎಲ್ಲವೂ ಸರಿಯಾಗುತ್ತದೆ. ಖಂಡಿತ ಅದನ್ನು ಮಾಡಬೇಕು” ಎಂದು ಹೇಳಿದ್ದಾರೆ. ಮುಸ್ಲಿಮರಿಗೆ ಮತದಾನದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಪಾಕಿಸ್ತಾನದಲ್ಲಿ ಬೇರೆಯವರಿಗೆ ಮತ ಹಾಕುವ ಅಧಿಕಾರವಿಲ್ಲ. ಅದೇ ರೀತಿ ನಮ್ಮ ಭಾರತದಲ್ಲಿಯೂ ಮುಸ್ಲಿಮರಿಗೆ ಮತದಾನ ಮಾಡುವ ಹಕ್ಕಿಲ್ಲದಂತೆ ಮಾಡಿದರೆ ಅವರು ಅವರ ಪಾಡಿಗಿರುತ್ತಾರೆ. ಖಂಡಿತವಾಗಿಯೂ ಎಲ್ಲರೂ ನೆಮ್ಮದಿಯಾಗಿ ಇರಲು ಸಾಧ್ಯ” ಎಂದು ಅವರು ಹೇಳಿದ್ದಾರೆ. ಚಂದ್ರಶೇಖರ್ ಅವರ ಈ ಹೇಳಿಕೆ ಸುಳ್ಳಾಗಿದ್ದು, ಪಾಕಿಸ್ತಾನದಲ್ಲಿ ಎಲ್ಲಾ ಸಮುದಾಯಗಳಿಗೆ ಮತದಾನದ ಹಕ್ಕು ಇವೆ. 

ಈ ಹಿಂದೆಯೂ ಚಂದ್ರಶೇಖರ ಅವರು ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಾಗಿದ್ದರು. “ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ಇಬ್ಭಾಗವಾಗಬೇಕು. ಹಾಗಾದರೆ ಮಾತ್ರ ಉತ್ತರ ಕರ್ನಾಟಕ ಅಭಿವೃದ್ಧಿ ಸಾಧ್ಯ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಚಂದ್ರಶೇಖರ ಅವರ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಇವೆಲ್ಲಾ ಉತ್ತರ ಪ್ರದೇಶದಿಂದ ಆಮದಾಗಿರುವ ಮಾತುಗಳಾಗಿವೆ, ಮೋದಿ ಮತ್ತು ಅಮಿತ್ ಶಾ ಅವರನ್ನು ಮೆಚ್ಚಿಸಲು ಈ ಸ್ವಾಮಿಗಳು ನೋಡುತ್ತಿದ್ದಾರೆ. ಇಂದು ಮುಸ್ಲಿಮರಿಗೆ ಹೀಗೆ ಹೇಳುತ್ತಾರೆ, ಮುಂದಿನ ದಿನಗಳಲ್ಲಿ ಈ ಪಾಳೇಗಾರಿ ಸ್ವಾಮಿಗಳು ನಮ್ಮ ಮಾತು ಕೇಳುತ್ತಿಲ್ಲ ಎಂದು ಇಲ್ಲಿನ ಹಿಂದುಳಿದ ಇತರ ವರ್ಗಗಳು, ಮಹಿಳೆಯರಿಗೆ ಮತ್ತು ದಲಿತರಿಗೂ ಹೀಗೆ ಹೇಳುತ್ತಾರೆ ಎಂದು ದಲಿತ ಹೋರಾಟಗಾರರೊಬ್ಬರು ಹೇಳಿದ್ದಾರೆ.

“ಈ ಹಿಂದೆ ಉತ್ತರದಲ್ಲಿ ಈ ರೀತಿಯಾಗಿ ಸ್ವಾಮಿಗಳು ಕೋಮು ಉದ್ರೇಕಕಾರಿ ಹೇಳಿಕೆಗಳನ್ನು ನೀಡುತ್ತಿದ್ದರು. ಅವರನ್ನು ರಾಜಕೀಯ ನಾಯಕರು ಬಳಸಿಕೊಂಡು ಅವರಿಗೆ ಅಧಿಕಾರ ನೀಡಿದ್ದರು. ಇದೀಗ ಅಧಿಕಾರಕ್ಕಾಗಿ ದಕ್ಷಿಣದ ಸ್ವಾಮಿಜಿಗಳು ಕೂಡಾ ಅದೇ ದಾರಿಯಲ್ಲಿ ಮೋದಿ ಮತ್ತು ಅಮಿತ್ ಶಾ ಅವರನ್ನು ಮೆಚ್ಚಿಸಲು ನೋಡುತ್ತಿದ್ದಾರೆ. ಆದರೆ ಇದು ಕರ್ನಾಟಕವಾಗಿದ್ದು, ಇಲ್ಲಿನ ಸಂಸ್ಕೃತಿ ಮತ್ತು ಪರಂಪರೆ ಅವರನ್ನು ಒಪ್ಪುವುದಿಲ್ಲ” ಎಂದು ದಲಿತ ಹಕ್ಕುಗಳ ಹೋರಾಟಗಾರ ರವಿಕುಮಾರ್ ಅವರು ಹೇಳಿದ್ದಾರೆ.

ಉದಯ್ ಕುಮಾರ್ ಎಂಬ ಟ್ವಿಟರ್‌ ಬಳಕೆದಾರರೊಬ್ಬರು “ಖಾವಿದಾರಿ ಸ್ವಾಮಿಗಳಿಗೆ ಮಾತಾಡುವ ಹಕ್ಕು ಇಲ್ಲದಂತೆ ಮಾಡಬೇಕು. ಇಂದು ಮುಸ್ಲಿಂಮರಿಗೆ ಹೇಳುತ್ತಾರೆ. ನಾಳೆ ದಲಿತರಿಗೆ ಹೇಳುತ್ತಾರೆ. ಇವರು ಮನುವಾದಿಗಳು” ಎಂದು ಕೆಲವರು ಟೀಕಿಸಿದ್ದಾರೆ.

ಇದನ್ನೂ ಓದಿ: ಶಾಸಕರು, ಸಂಸದರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚಿಕೆ : ಸರ್ಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಶಾಸಕರು, ಸಂಸದರಿಗೆ ಆದ್ಯತೆ ಮೇರೆಗೆ ನಿವೇಶನ ಹಂಚಿಕೆ : ಸರ್ಕಾರದ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...