ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಮಂಡಿಸಲು ಉದ್ದೇಶಿಸಿರುವ ವಕ್ಫ್ (ತಿದ್ದುಪಡಿ) ಮಸೂದೆ – 2024 ಅನ್ನು ವಿರೋಧಿಸಿ ತೃಣಮೂಲ ಕಾಂಗ್ರೆಸ್‌ನ ಅಲ್ಪಸಂಖ್ಯಾತರ ಘಟಕವು ನವೆಂಬರ್ 30 ರಂದು ರಾಣಿ ರಾಶ್ಮೋನಿ ರಸ್ತೆಯಲ್ಲಿ ರ‍್ಯಾಲಿಯನ್ನು ನಡೆಸಲಿದೆ. ಪಕ್ಷದ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಪ್ರಸ್ತಾವಿತ ವಕ್ಫ್ (ತಿದ್ದುಪಡಿ) ಮಸೂದೆ-2024ಯ ಕುರಿತು ಪಕ್ಷದ ನಿಲುವನ್ನು ವಿವರಿಸುವ ಸಾಧ್ಯತೆಯಿದೆ ಎಂದು ವರದಿಗಳು ಉಲ್ಲೇಖಿಸಿವೆ. ವಕ್ಫ್ ಮಸೂದೆ ವಿರುದ್ಧ
ಪಕ್ಷದ ಹಿರಿಯ ಮುಖಂಡರಾದ ಫಿರ್ಹಾದ್ ಹಕೀಂ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ, ಇತಾಹಾರ್ ಶಾಸಕ ಮೊಸರಫ್ ಹೊಸೈನ್ ಕೂಡ ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ. “ಕೇಂದ್ರವು ಸಂಸತ್ತಿನಲ್ಲಿ ಪ್ರಜಾಪ್ರಭುತ್ವ ವಿರೋಧಿ ಮಸೂದೆಯನ್ನು ತರಲು ಪ್ರಯತ್ನಿಸುತ್ತಿದೆ. ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಅಲ್ಪಸಂಖ್ಯಾತರ ಘಟಕವೂ ಪ್ರತಿಭಟನಾ ರ‍್ಯಾಲಿ ನಡೆಸಲಿದೆ” ಎಂದು ಟಿಎಂಸಿ ನಾಯಕ ಹಕೀಮ್ ಹೇಳಿದ್ದಾರೆ. ವಕ್ಫ್ ಮಸೂದೆ ವಿರುದ್ಧ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಏತನ್ಮಧ್ಯೆ, ಕೇಂದ್ರದ ಪ್ರಸ್ತಾವಿತ ವಕ್ಫ್ (ತಿದ್ದುಪಡಿ) ಮಸೂದೆ – 2024 ಅನ್ನು ವಿರೋಧಿಸುವ ನಿರ್ಣಯವನ್ನು ಮಮತಾ ಬ್ಯಾನರ್ಜಿ ಸರ್ಕಾರವು ತಂದಿದೆ. ವಕ್ಫ್‌ಗೆ ಸಂಬಂಧಿಸಿದ ಕೇಂದ್ರದ ಮಸೂದೆಯನ್ನು ತೃಣಮೂಲ ಕಾಂಗ್ರೆಸ್ ಈ ಹಿಂದೆ ವಿರೋಧಿಸಿದ್ದು, ಇದು ರಾಜ್ಯ ಸರ್ಕಾರಗಳ ಹಕ್ಕುಗಳನ್ನು ಉಲ್ಲಂಘಿಸುವ ಪ್ರಯತ್ನವಾಗಿದೆ ಎಂದು ವಾದಿಸಿತ್ತು. ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಈ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ವಕ್ಫ್ ವಿಷಯಗಳಲ್ಲಿ ರಾಜ್ಯದ ಸ್ವಾಯತ್ತತೆಯನ್ನು ಉಳಿಸಿಕೊಂಡು ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ಕಾಪಾಡುವುದು ವಿಧಾನಸಭೆಯಲ್ಲಿ ನಿರ್ಣಯವನ್ನು ತರುವುದರ ಹಿಂದಿನ ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ ಎಂದು ತೃಣಮೂಲ ಕಾಂಗ್ರೆಸ್ ಮೂಲಗಳು ತಿಳಿಸಿವೆ. ಪ್ರಾಸಂಗಿಕವಾಗಿ, ತೃಣಮೂಲ ಕಾಂಗ್ರೆಸ್ ಸಂಸದರಾದ ನದಿಮುಲ್ ಹಕ್ ಮತ್ತು ಕಲ್ಯಾಣ್ ಬ್ಯಾನರ್ಜಿ ಇತ್ತೀಚೆಗೆ ಪತ್ರಿಕಾಗೋಷ್ಠಿ ನಡೆಸಿ, ವಕ್ಫ್ (ತಿದ್ದುಪಡಿ) ಮಸೂದೆಯ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಧ್ಯಕ್ಷರು ಅನಿಯಂತ್ರಿತ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ತೃಣಮೂಲ ಕಾಂಗ್ರೆಸ್ ಹೊರತುಪಡಿಸಿ, ಇತರ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಕ್ಫ್ (ತಿದ್ದುಪಡಿ) ಮಸೂದೆ, 2024 ಅನ್ನು ವಿರೋಧಿಸುತ್ತಿವೆ. ಈ ತಿದ್ದುಪಡಿ ಮಸೂದೆಯು ವಕ್ಫ್ ಆಸ್ತಿಗಳ ಮೇಲಿನ ನಿಯಂತ್ರಣವನ್ನು ಕೇಂದ್ರೀಕರಿಸಲು ಪ್ರಯತ್ನಿಸುತ್ತಿ ಮತ್ತು ರಾಜ್ಯಗಳ ಹಕ್ಕುಗಳು ಮತ್ತು ಸಮುದಾಯ ಸ್ವಾಯತ್ತತೆಯನ್ನು ದುರ್ಬಲಗೊಳಿಸುತ್ತದೆ ಎಂದು ಅವರು ಆರೋಪಿಸಿದ್ದಾರೆ.
ಇದನ್ನೂ ಓದಿ: ತಮಿಳುನಾಡು: ಎಸ್‌ಸಿ ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹಿಸಿ ದಲಿತ ಸಂಘಟನೆಗಳಿಂದ ಕನ್ಯಾಕುಮಾರಿಯಿಂದ ಚೆನ್ನೈವರೆಗೆ ಪಾದಯಾತ್ರೆ


