Homeಮುಖಪುಟಮಧ್ಯಪ್ರದೇಶ| ದಲಿತ ಕುಟುಂಬದ ಸದಸ್ಯರನ್ನು ಥಳಿಸಿದ ಬಿಜೆಪಿ ಬೂತ್ ಅಧ್ಯಕ್ಷ; ಪ್ರಕರಣ ದಾಖಲು

ಮಧ್ಯಪ್ರದೇಶ| ದಲಿತ ಕುಟುಂಬದ ಸದಸ್ಯರನ್ನು ಥಳಿಸಿದ ಬಿಜೆಪಿ ಬೂತ್ ಅಧ್ಯಕ್ಷ; ಪ್ರಕರಣ ದಾಖಲು

- Advertisement -
- Advertisement -

ಸೋಮವಾರ ರಾತ್ರಿ ಜಬಲ್‌ಪುರದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಕುಟುಂಬದ ಸದಸ್ಯರನ್ನು ಥಳಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಬಿಜೆಪಿ ಸ್ವಯಂಸೇವಕ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಹಿಂದೆ ಬಿಜೆಪಿ ಸ್ವಯಂಸೇವಕರ ದೂರಿನ ಮೇರೆಗೆ ದಲಿತ ಕುಟುಂಬದ ವಿರುದ್ಧ ಪ್ರಕರಣ ದಾಖಲಾಗಿತ್ತು ಎನ್ನಲಾಗಿದೆ.

ಪರಿಶಿಷ್ಟ ಜಾತಿಯ ಕುಟುಂಬಗಳು ತಮ್ಮ ಮನೆಯ ಹೊರಗೆ ಸ್ನಾನಗೃಹವನ್ನು ನಿರ್ಮಿಸುತ್ತಿರುವುದನ್ನು ಬಿಜೆಪಿ ಸ್ವಯಂಸೇವಕನ ಕುಟುಂಬ ವಿರೋಧಿಸಿದಾಗ ವಾಗ್ವಾದ ನಡೆಯಿತು. ಘರ್ಷಣೆಯ ಸಂದರ್ಭದಲ್ಲಿ ಪರಿಶಿಷ್ಟ ಜಾತಿಯ ಕುಟುಂಬದ ಸದಸ್ಯರನ್ನು ಶೂ ಮತ್ತು ಚಪ್ಪಲಿಯಿಂದ ಥಳಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋ ಪ್ರಸಾರವಾದ ನಂತರ ಪೊಲೀಸರು ಆರೋಪಿ ಬಿಜೆಪಿ ಮುಖಂಡ ಮತ್ತು ಆತನ ಪೋಷಕರ ವಿರುದ್ಧ ತಡರಾತ್ರಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಮನಗರ ಶಹನಾಳ ನಿವಾಸಿಗಳಾದ ಅನಿಲ್ ಝರಿಯಾ ಮತ್ತು ವರ್ಷಾ ಝರಿಯಾ ಅವರ ಕುಟುಂಬವು ಮೂರು ದಶಕಗಳಿಂದ ಗುತ್ತಿಗೆ ಭೂಮಿಯಲ್ಲಿ ವಾಸಿಸುತ್ತಿದೆ. ಅವರು ತಮ್ಮ ಮನೆಯ ಹೊರಗೆ ಸ್ನಾನಗೃಹವನ್ನು ನಿರ್ಮಿಸುತ್ತಿದ್ದರು. ಇದನ್ನು ವಿರೋಧಿಸಿದ ಬಿಜೆಪಿ ಬೂತ್ ಅಧ್ಯಕ್ಷ ಅಮಿತ್ ದ್ವಿವೇದಿ ಅವರ ಪೋಷಕರು ಮತ್ತು ಸಂಗಡಿಗರೊಂದಿಗೆ ಅವರ ಮನೆಗೆ ಬಂದು ತಮ್ಮ ಮಕ್ಕಳನ್ನು ವಾಹನಗಳಲ್ಲಿ ಹಾಕಲು ಪ್ರಯತ್ನಿಸಿದರು ಎಂದು ಸಂತ್ರಸ್ತರು ಹೇಳಿದ್ದಾರೆ.

ವಾಗ್ವಾದದ ಬಳಿಕ ದಲಿತ ಕುಟುಂಬದ ಮೇಲೆ ಹಲ್ಲೆ ಮಾಡಲು ಆರಂಭಿಸಿದರು. ಈ ವೇಳೆ ಬಿಜೆಪಿ ಕಾರ್ಯಕರ್ತ, ಆತನ ತಾಯಿ ಹಾಗೂ ಇತರರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಶೂಗಳಿಂದ ಹೊಡೆದು, ಮಹಿಳೆಯೊಬ್ಬಳನ್ನು ರಸ್ತೆಯಲ್ಲಿ ಕೂದಲು ಹಿಡಿದು ಎಳೆದೊಯ್ದಿದ್ದಾರೆ.

ಘಟನೆ ಬಳಿಕ ಬಿಜೆಪಿ ಕಾರ್ಯಕರ್ತ ತಿಲವಾರ ಠಾಣೆಗೆ ತೆರಳಿ ದೂರು ನೀಡಿದ್ದರು. ಅದರ ಆಧಾರದ ಮೇಲೆ ಪೊಲೀಸರು ಪರಿಶಿಷ್ಟ ಜಾತಿಗೆ ಸೇರಿದವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನಂತರ, ಇತರ ಕುಟುಂಬವು ಘಟನೆಯ ವೀಡಿಯೊದೊಂದಿಗೆ ನ್ಯಾಯಕ್ಕಾಗಿ ಎಸ್‌ಪಿ ಕಚೇರಿಯನ್ನು ಸಂಪರ್ಕಿಸಿತು. ತಡರಾತ್ರಿ ತಿಲವಾರ ಪೊಲೀಸರು ಬಿಜೆಪಿ ಮುಖಂಡ ಹಾಗೂ ಆತನ ಪೋಷಕರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಆರೋಪಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಲವಾರ ಪೊಲೀಸ್ ಠಾಣೆ ಪ್ರಭಾರಿ ಬ್ರಿಜೇಶ್ ಮಿಶ್ರಾ ತಿಳಿಸಿದ್ದಾರೆ. ಘಟನೆಯ ವರದಿಯನ್ನು ಸಂತ್ರಸ್ತೆಯ ಸಹೋದರ ಸಲ್ಲಿಸಿದ್ದು, ಆರೋಪಿಯು ತನ್ನ ಸಹೋದರನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಹೇಳಿಕೆ ನೀಡಿದ್ದು, ತನ್ನ ಕುಟುಂಬದೊಂದಿಗೆ ಅವರು ಗ್ರಾಮ ತೊರೆದು ಸಂಬಂಧಿಕರ ಮನೆಗೆ ತೆರಳಿದ್ದಾರೆ.

ಇದನ್ನೂ ಓದಿ; ತಮಿಳುನಾಡು: ಎಸ್‌ಸಿ ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹಿಸಿ ದಲಿತ ಸಂಘಟನೆಗಳಿಂದ ಕನ್ಯಾಕುಮಾರಿಯಿಂದ ಚೆನ್ನೈವರೆಗೆ ಪಾದಯಾತ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...