2021ರ ಲಖಿಂಪುರ ಖೇರಿ ಹಿಂಸಾಚಾರದ ಪ್ರಕರಣದಲ್ಲಿ ಸಾಕ್ಷಿಗಳಿಗೆ ಬೆದರಿಕೆ ಹಾಕಲಾಗುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರದ ಮಾಜಿ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ಸೂಚಿಸಿದೆ. ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಮಿಶ್ರಾ ಅವರ ಪರವಾಗಿ ಹಾಜರಿದ್ದ ಹಿರಿಯ ವಕೀಲ ಸಿದ್ಧಾರ್ಥ್ ದವೆ ಅವರು ಆರೋಪಗಳನ್ನು ನಿರಾಕರಿಸಿದ ನಂತರ ತಮ್ಮ ನಿಲುವನ್ನು ಸ್ಪಷ್ಟಪಡಿಸುವ ಅಫಿಡವಿಟ್ ಸಲ್ಲಿಸುವಂತೆ ಕೇಳಿದ್ದಾರೆ.
ಆರಂಭದಲ್ಲಿ, ಪ್ರಕರಣದ ದೂರುದಾರರೊಬ್ಬರ ಪರವಾಗಿ ಹಾಜರಾದ ವಕೀಲರು ನ್ಯಾಯಾಲಯಕ್ಕೆ ಈ ಬಗ್ಗೆ ತಿಳಿಸಿದ್ದು, ಮಿಶ್ರಾ ಅವರು ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂದು ಅವರು ಅರ್ಜಿ ಸಲ್ಲಿಸಿದ್ದಾರೆ. ಮಿಶ್ರ ಪರ ವಕೀಲ ದವೆ ಈ ಆರೋಪಗಳನ್ನು ನಿರಾಕರಿಸಿದ್ದು, ಇದು “ಅಂತ್ಯವಿಲ್ಲದ ಪ್ರಕ್ರಿಯೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಈ ಬಗ್ಗೆ ನಾಲ್ಕು ವಾರಗಳಲ್ಲಿ ಆರೋಪಗಳನ್ನು ನಿರಾಕರಿಸಿ ಅಫಿಡವಿಟ್ ಸಲ್ಲಿಸುವಂತೆ ಮಿಶ್ರಾ ಅವರಿಗೆ ಸುಪ್ರೀಂ ಕೋರ್ಟ್ ಹೇಳಿತು. ಜುಲೈ 22 ರಂದು, ನ್ಯಾಯಾಲಯವು ಆಶಿಶ್ ಮಿಶ್ರಾಗೆ ಜಾಮೀನು ನೀಡಿದ್ದು, ದೆಹಲಿ ಅಥವಾ ಲಕ್ನೋಗೆ ಅವರು ಸಂಚಾರ ಮಾಡದಂತೆ ನಿರ್ಬಂಧಿಸಿದೆ. ಫೆಬ್ರವರಿಯಲ್ಲಿ ಸುಪ್ರೀಂ ಕೋರ್ಟ್ ಆಶಿಶ್ ಮಿಶ್ರಾ ಅವರ ಮಧ್ಯಂತರ ಜಾಮೀನನ್ನು ವಿಸ್ತರಿಸಿತ್ತು. ಲಖಿಂಪುರ ಖೇರಿ ಹಿಂಸಾಚಾರದ
ಕಳೆದ ವರ್ಷ ಜನವರಿ 25 ರಂದು, ಘೋರ ಘಟನೆಯ ಪ್ರಕರಣದಲ್ಲಿ ಆಶಿಶ್ ಮಿಶ್ರಾ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಈ ಪ್ರಕರಣದಲ್ಲಿ ನಾಲ್ವರು ರೈತರಾದ ಗುರುವಿಂದರ್ ಸಿಂಗ್, ಕಮಲ್ಜೀತ್ ಸಿಂಗ್, ಗುರುಪ್ರೀತ್ ಸಿಂಗ್ ಮತ್ತು ವಿಚಿತ್ರಾ ಸಿಂಗ್ ಅವರಿಗೆ ಜಾಮೀನು ಮಂಜೂರು ಮಾಡಿದ್ದು, ವಿಚಾರಣೆಯನ್ನು ತ್ವರಿತಗೊಳಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದೆ.
ಅಕ್ಟೋಬರ್ 3, 2021 ರಂದು ಸಂಭವಿಸಿದ ಈ ದುರ್ಘಟನೆಯಲ್ಲಿ ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರು ಕೊಲ್ಲಲ್ಪಟ್ಟರು. ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಭೇಟಿಯನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾಗ ಈ ಹಿಂಸಾಚಾರ ಭುಗಿಲೆದ್ದಿತ್ತು.
ಸ್ಪೋರ್ಟ್ಸ್ ಯುಟಿಲಿಟಿ ವಾಹನದಿಂದ ನಾಲ್ವರು ರೈತರನ್ನು ಅಡಿಗೆ ಹಾಕಿ ಹತ್ಯೆ ಮಾಡಲಾಗಿತ್ತು. ಈ ಘಟನೆಯಿಂದ ಉದ್ರಿಕ್ತಗೊಂಡ ರೈತರ ಗುಂಪು ಒಬ್ಬ ಚಾಲಕ ಮತ್ತು ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಹೊಡೆದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಹಿಂಸಾಚಾರದಲ್ಲಿ ಒಬ್ಬ ಪತ್ರಕರ್ತನೂ ಸಾವನ್ನಪ್ಪಿದ್ದಾರೆ.
ಕಳೆದ ವರ್ಷ ಜನವರಿ 25 ರಂದು ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನಿನ ಅವಧಿಯಲ್ಲಿ ಆಶಿಶ್ ಮಿಶ್ರಾ ಉತ್ತರ ಪ್ರದೇಶ ಅಥವಾ ದೆಹಲಿಯಲ್ಲಿ ಉಳಿಯಬಾರದು ಎಂದು ಹೇಳಿತ್ತು. ಪ್ರಕರಣದಲ್ಲಿ ಸಾಕ್ಷಿಗಳ ಮೇಲೆ ಯಾವುದೇ ಪ್ರಭಾವ ಬೀರುವುದನ್ನು ತಪ್ಪಿಸುವ ಉದ್ದೇಶದಿಂದ ಇದನ್ನು ಮಾಡಲಾಗಿತ್ತು. ನಂತರ, ಸೆಪ್ಟೆಂಬರ್ 26 ರಂದು, ಅವರು ತಮ್ಮ ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ಮತ್ತು ಅವರ ಮಗಳ ಚಿಕಿತ್ಸೆಗಾಗಿ ದೆಹಲಿಗೆ ಭೇಟಿ ನೀಡಲು ಮತ್ತು ಉಳಿಯಲು ಅನುವು ಮಾಡಿಕೊಡಲು ಅವರ ನೀಡಿದ್ದ ಜಾಮೀನಿನ ಷರತ್ತುಗಳನ್ನು ಸುಪ್ರೀಂ ಕೋರ್ಟ್ ಸಡಿಲಗೊಳಿಸಿತ್ತು.
ಇದನ್ನೂ ಓದಿ: ತಮಿಳುನಾಡು: ಎಸ್‌ಸಿ ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹಿಸಿ ದಲಿತ ಸಂಘಟನೆಗಳಿಂದ ಕನ್ಯಾಕುಮಾರಿಯಿಂದ ಚೆನ್ನೈವರೆಗೆ ಪಾದಯಾತ್ರೆ


