Homeಕರ್ನಾಟಕಮತದಾನದ ಹಕ್ಕಿನ ವಿರುದ್ಧ ಹೇಳಿಕೆ | ಮುಸ್ಲಿಮರ ಕ್ಷಮೆ ಕೇಳಿದ ಒಕ್ಕಲಿಗ ಸ್ವಾಮಿ

ಮತದಾನದ ಹಕ್ಕಿನ ವಿರುದ್ಧ ಹೇಳಿಕೆ | ಮುಸ್ಲಿಮರ ಕ್ಷಮೆ ಕೇಳಿದ ಒಕ್ಕಲಿಗ ಸ್ವಾಮಿ

- Advertisement -
- Advertisement -

“ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕು, ಆಗ ಎಲ್ಲವೂ ಸರಿಯಾಗುತ್ತದೆ” ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮಿ ತಮ್ಮ ಹೇಳಿಕೆಗೆ ಮುಸಲ್ಮಾನರಲ್ಲಿ ಕ್ಷಮೆ ಕೇಳಿದ್ದಾರೆ.

ಈ ಬಗ್ಗೆ ಇಂದು (ನ.27) ಅವರು ಪತ್ರಿಕಾ ಪ್ರಕಟನೆ ಹೊರಡಿಸಿದ್ದು, ಬಾಯಿ ತಪ್ಪಿ ನೀಡಿದ ಹೇಳಿಕೆಯನ್ನು ಬೆಳೆಸದಂತೆ ಮತ್ತು ವಿವಾದವನ್ನು ಕೊನೆಗೊಳಿಸುವಂತೆ ಅವರು ಮುಸ್ಲಿಮರಲ್ಲಿ ಕೇಳಿಕೊಂಡಿದ್ದಾರೆ.

ಚಂದ್ರಶೇಖರ್ ಅವರ ಹೇಳಿಕೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. “ಇಂದು ಮುಸ್ಲಿಮರಿಗೆ ಹೀಗೆ ಹೇಳುತ್ತಾರೆ, ಮುಂದಿನ ದಿನಗಳಲ್ಲಿ ಈ ಪಾಳೇಗಾರಿ ಮನಸ್ಥಿತಿಯ ಸ್ವಾಮಿಗಳು ನಮ್ಮ ಮಾತು ಕೇಳುತ್ತಿಲ್ಲ ಎಂದು ಇಲ್ಲಿನ ಹಿಂದುಳಿದ ವರ್ಗಗಳ ಇತರ ಸಮುದಾಯಗಳಿಗೆ ಮತ್ತು ದಲಿತರಿಗೂ ಹೀಗೆ ಹೇಳುತ್ತಾರೆ” ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವಕ್ಫ್ ಕಾಯಿದೆ ವಿರುದ್ಧವಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿಯ ಸಹ ಸಂಘಟನೆಯಾದ ಭಾರತೀಯ ಕಿಸಾನ್ ಸಂಘ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ್ದ ಸ್ವಾಮಿ “ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು. ಮುಸ್ಲಿಂ ಜನಾಂಗಕ್ಕೆ ಮತದಾನದ ಹಕ್ಕೇ ಇಲ್ಲದಂತೆ ಕಾನೂನು ಮಾಡಿದರೆ ಎಲ್ಲವೂ ಸರಿಯಾಗುತ್ತದೆ. ಖಂಡಿತ ಅದನ್ನು ಮಾಡಬೇಕು. ಪಾಕಿಸ್ತಾನದಲ್ಲಿ ಬೇರೆಯವರಿಗೆ ಮತ ಹಾಕುವ ಅಧಿಕಾರವಿಲ್ಲ. ಅದೇ ರೀತಿ ನಮ್ಮ ಭಾರತದಲ್ಲಿಯೂ ಮುಸ್ಲಿಮರಿಗೆ ಮತದಾನ ಮಾಡುವ ಹಕ್ಕಿಲ್ಲದಂತೆ ಮಾಡಿದರೆ ಅವರು ಅವರ ಪಾಡಿಗಿರುತ್ತಾರೆ. ಖಂಡಿತವಾಗಿಯೂ ಎಲ್ಲರೂ ನೆಮ್ಮದಿಯಾಗಿ ಇರಲು ಸಾಧ್ಯ” ಎಂದಿದ್ದರು.

ಈ ಹೇಳಿಕೆ ವಿರುದ್ಧ ರಾಜ್ಯದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ವಿವಾದವು ತೀವ್ರಗೊಳ್ಳುತ್ತಿದ್ದಂತೆ ಬುಧವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ವಕ್ಫ್‌ ಮಂಡಳಿ ರೈತಾಪಿ ಜನಗಳ ಒಕ್ಕಲೆಬ್ಬಿಸಿ ಅವರನ್ನು ಬೀದಿಗೆ ತಳ್ಳುವ ಕೆಲಸ ಮಾಡುತ್ತಿದೆ ಎಂಬ ಸುದ್ದಿಗಳನ್ನು ಮಾಧ್ಯಮಗಳಲ್ಲಿ ಮತ್ತು ದಿನಪತ್ರಿಕೆಗಳಲ್ಲಿ ಗಮನಿಸಿದ್ದೆ. ಹಾಗಾಗಿ ರೈತನನ್ನು ಒಕ್ಕಲೆಬ್ಬಿಸುವ ಯಾವುದೇ ಸಂಸ್ಥೆಯ ನಡೆಯನ್ನಾಗಲಿ ನಾವು ಒಪ್ಪಲಾಗದು. ವಕ್ಫ್‌ ಮಂಡಳಿಗೆ ಅವರು ಹೊಂದಿರುವ ಜಮೀನುಗಳು ಯಾವ ರೀತಿ ಅವರಿಗೆ ಬಂದಿವೆ ಎಂಬುವುದರ ನಿಖರವಾದ ಮಾಹಿತಿಯನ್ನು ಸರ್ಕಾರಕ್ಕೆ ನೀಡಿ ಆ ಜಮೀನುಗಳನ್ನು ಅವರು ಉಳಿಸಿಕೊಳ್ಳುವುದರ ಬಗ್ಗೆ ನಮಗೆ ಯಾವುದೇ ಅಭ್ಯಂತರವಿರುವುದಿಲ್ಲ” ಎಂದು ಹೇಳಿದ್ದಾರೆ.

“ಆದರೆ ತಲ ತಲಾಂತರಗಳಿಂದ ಕೃಷಿ ಮಾಡುತ್ತಿರುವ ನಮ್ಮ ರೈತನನ್ನು ವಕ್ಫ್‌ ಮಂಡಳಿಯ ಹೆಸರೇಳಿ ಜಾಗ ಖಾಲಿ ಮಾಡಿಸುವಂತಿಲ್ಲ. ಮೂಲತಃ ಒಕ್ಕಲಿಗರು ಧರ್ಮ ಸಹಿಷ್ಣುಗಳಾಗಿದ್ದು, ನಾವು ಎಲ್ಲಾ ಧರ್ಮದವರನ್ನು ಇಲ್ಲಿಯವರೆಗೂ ಸಮಾನವಾಗಿಯೇ ಕಂಡಿದ್ದೇವೆ. ನಮ್ಮ ಮಠಕ್ಕೆ ಮುಸ್ಲಿಮರು ಸಹ ಸಂಪರ್ಕವಿಟ್ಟುಕೊಂಡು ಬಂದು ಹೋಗುತ್ತಿರುತ್ತಾರೆ. ನಾನು ಕೂಡಾ ಸಹ ಮುಸ್ಲಿಮರ ಮದುವೆ ಹಾಗೂ ಇತರೆ ಶುಭ ಸಮಾರಂಭಗಳಿಗೆ ಭಾಗಿಯಾಗಿರುತ್ತೇನೆ. ಆದ್ದರಿ೦ದ ಮುಸ್ಲಿಮರ ಬಗ್ಗೆ ಯಾವುದೇ ಅಸಹಿಷ್ಣುತೆ ನನಗೆ ಇಲ್ಲ” ಎಂದು ತಿಳಿಸಿದ್ದಾರೆ.

“ಮುಸಲ್ಮಾನರೂ ಸಹ ಈ ದೇಶದ ಪ್ರಜೆಗಳೇ ಆಗಿದ್ದು, ಅವರಿಗೂ ಎಲ್ಲರಂತೆ ಮತದಾನದ ಹಕ್ಕು ಇರುತ್ತದೆ. ನಿನ್ನೆಯ ದಿನ ನಾನು ಬಾಯಿ ತಪ್ಪಿ ನೀಡಿದ ಹೇಳಿಕೆಯಿಂದ ಮುಸಲ್ಮಾನ ಸಹೋದರರಿಗೆ ಬೇಸರವಾಗಿದ್ದರೆ, ಅದಕ್ಕಾಗಿ ನಾವು ಹೃತ್ಪೂರ್ವಕವಾಗಿ ವಿಷಾದ ವ್ಯಕ್ತಪಡಿಸುತ್ತೇವೆ. ಈ ವಿಷಯವನ್ನು ಬೆಳೆಸದಂತೆ ಇಲ್ಲಿಗೆ ಮುಕ್ತಾಯ ಮಾಡಬೇಕೆಂದು ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇವೆ” ಎಂದು ಕೋರಿದ್ದಾರೆ.

ಈ ಹಿಂದೆಯೂ ಚಂದ್ರಶೇಖರ ಅವರು ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಾಗಿದ್ದರು. “ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ಇಬ್ಭಾಗವಾಗಬೇಕು. ಹಾಗಾದರೆ ಮಾತ್ರ ಉತ್ತರ ಕರ್ನಾಟಕ ಅಭಿವೃದ್ಧಿ ಸಾಧ್ಯ” ಎಂದು ಹೇಳಿಕೆ ನೀಡಿದ್ದರು.

ಚಂದ್ರಶೇಖರ ಅವರ ನಿನ್ನೆಯ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇವೆಲ್ಲಾ ಉತ್ತರ ಪ್ರದೇಶದಿಂದ ಆಮದಾಗಿರುವ ಮಾತುಗಳಾಗಿವೆ. ಮೋದಿ ಮತ್ತು ಅಮಿತ್ ಶಾ ಅವರನ್ನು ಮೆಚ್ಚಿಸಲು ಈ ಸ್ವಾಮಿಗಳು ನೋಡುತ್ತಿದ್ದಾರೆ. ಇಂದು ಮುಸ್ಲಿಮರಿಗೆ ಹೀಗೆ ಹೇಳುತ್ತಾರೆ, ಮುಂದಿನ ದಿನಗಳಲ್ಲಿ ಈ ಪಾಳೇಗಾರಿ ಸ್ವಾಮಿಗಳು ನಮ್ಮ ಮಾತು ಕೇಳುತ್ತಿಲ್ಲ ಎಂದು ಇಲ್ಲಿನ ಹಿಂದುಳಿದ ಇತರ ವರ್ಗಗಳು, ಮಹಿಳೆಯರಿಗೆ ಮತ್ತು ದಲಿತರಿಗೂ ಹೀಗೆ ಎನ್ನುತ್ತಾರೆ” ಎಂದು ದಲಿತ ಹೋರಾಟಗಾರರೊಬ್ಬರು ಹೇಳಿದ್ದರು.

“ಈ ಹಿಂದೆ ಉತ್ತರದಲ್ಲಿ ಈ ರೀತಿಯಾಗಿ ಸ್ವಾಮಿಗಳು ಕೋಮು ಉದ್ರೇಕಕಾರಿ ಹೇಳಿಕೆಗಳನ್ನು ನೀಡುತ್ತಿದ್ದರು. ಅವರನ್ನು ರಾಜಕೀಯ ನಾಯಕರು ಬಳಸಿಕೊಂಡು ಅವರಿಗೆ ಅಧಿಕಾರ ನೀಡಿದ್ದರು. ಇದೀಗ ಅಧಿಕಾರಕ್ಕಾಗಿ ದಕ್ಷಿಣದ ಸ್ವಾಮಿಜಿಗಳು ಕೂಡಾ ಅದೇ ದಾರಿಯಲ್ಲಿ ಮೋದಿ ಮತ್ತು ಅಮಿತ್ ಶಾ ಅವರನ್ನು ಮೆಚ್ಚಿಸಲು ನೋಡುತ್ತಿದ್ದಾರೆ. ಆದರೆ ಇದು ಕರ್ನಾಟಕವಾಗಿದ್ದು, ಇಲ್ಲಿನ ಸಂಸ್ಕೃತಿ ಮತ್ತು ಪರಂಪರೆ ಅವರನ್ನು ಒಪ್ಪುವುದಿಲ್ಲ” ಎಂದು ದಲಿತ ಹಕ್ಕುಗಳ ಹೋರಾಟಗಾರ ರವಿಕುಮಾರ್ ಅವರು ಹೇಳಿದ್ದರು.

ಉದಯ್ ಕುಮಾರ್ ಎಂಬ ಟ್ವಿಟರ್‌ ಬಳಕೆದಾರರೊಬ್ಬರು “ಖಾವಿದಾರಿ ಸ್ವಾಮಿಗಳಿಗೆ ಮಾತಾಡುವ ಹಕ್ಕು ಇಲ್ಲದಂತೆ ಮಾಡಬೇಕು. ಇಂದು ಮುಸ್ಲಿಮರಿಗೆ ಹೇಳುತ್ತಾರೆ. ನಾಳೆ ದಲಿತರಿಗೆ ಹೇಳುತ್ತಾರೆ. ಇವರು ಮನುವಾದಿಗಳು” ಎಂದು ಟೀಕಿಸಿದ್ದರು.  ಮತದಾನದ ಹಕ್ಕಿನ

ಇದನ್ನೂ ಓದಿ: ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು: ಚಂದ್ರಶೇಖರ ಸ್ವಾಮಿ ವಿವಾದ

ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು: ಚಂದ್ರಶೇಖರ ಸ್ವಾಮಿ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...