ಹಲವಾರು ದ್ವೇಷ ಭಾಷಣ ಮಾಡಿರುವ ಆರೋಪಿ, ಬಿಜೆಪಿ ಪರ ದುಷ್ಕರ್ಮಿ ಯತಿ ನರಸಿಂಹಾನಂದ್ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದಿದ್ದಕ್ಕಾಗಿ ಅಂತಾರಾಷ್ಟ್ರೀಯ ಖ್ಯಾತಿಯ ಫ್ಯಾಕ್ಟ್‌ಚೆಕ್ ವೆಬ್‌ಸೈಟ್ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ವಿರುದ್ಧ ಅಕ್ಟೋಬರ್‌ನಲ್ಲಿ ಸಲ್ಲಿಸಲಾದ ಎಫ್‌ಐಆರ್‌ನಲ್ಲಿ, ‘ಭಾರತದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಅಪರಾಧವನ್ನು ಸೇರಿಸಲಾಗಿದೆ’ ಎಂದು ಉತ್ತರ ಪ್ರದೇಶ ಪೊಲೀಸರು ಬುಧವಾರ ಅಲಹಾಬಾದ್ ಹೈಕೋರ್ಟ್‌ಗೆ ತಿಳಿಸಿದ್ದಾರೆ ಎಂದು ಲೈವ್ ಲಾ ವರದಿ ಮಾಡಿದೆ.
ಇತ್ತಿಚೆಗೆ ಪರಿಚಯಿಸಲಾದ ಹೊಸ ಕಾನೂನಾದ ಭಾರತೀಯ ನ್ಯಾಯ ಸಂಹಿತೆಯ 152 ಸೆಕ್ಷನ್ ಅನ್ನು ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 124A ಅಡಿಯಲ್ಲಿ ದೇಶದ್ರೋಹದ ಕಾನೂನಿಗೆ ಹೋಲಿಸಲಾಗುತ್ತದೆ. ಹಿಂದುತ್ವವಾದಿ ಯತಿ ನರಸಿಂಹಾನಂದ್ ಕುರಿತು ಪೋಸ್ಟ್ ಹಾಕುವ ಮೂಲಕ ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸಿದ ಆರೋಪದ ಮೇಲೆ ಜುಬೈರ್ ವಿರುದ್ಧ ಅಕ್ಟೋಬರ್ 7 ರಂದು ಪೊಲೀಸರು ಪ್ರಕರಣ ದಾಖಲಿಸಿದ್ದರು. , ಆದರೆ ಅವುಗಳ ಕಾನೂನು ವ್ಯಾಖ್ಯಾನಗಳು ಮತ್ತು ಪರಿಣಾಮಗಳ ವಿಷಯದಲ್ಲಿ ಅವು ಸಮಾನವಾಗಿರುವುದಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿರುವ ದಾಸ್ನಾ ದೇವಿ ದೇವಸ್ಥಾನದ ಅರ್ಚಕರಾಗಿರುವ ನರಸಿಂಹಾನಂದ ದ್ವೇಷ ಭಾಷಣ ಮಾಡುವ ದುಷ್ಕರ್ಮಿಯಾಗಿದ್ದು, ಅವರ ವಿರುದ್ಧ ಹಲವಾರು ಎಫ್‌ಐಆರ್ ದಾಖಲಾಗಿದೆ. ಅವರು ಸೆಪ್ಟೆಂಬರ್ 29 ರಂದು ಮಾಡಿದ್ದ ಭಾಷಣದಲ್ಲಿ ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಅವರ ಈ ಹೇಳಿಕೆ ದೇಶದ ಹಲವಾರು ನಗರಗಳಲ್ಲಿ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿತ್ತು.
ಈ ಬಗ್ಗೆ ಅಕ್ಟೋಬರ್ 3 ರಂದು, ಜುಬೈರ್ ಅವರು X ನಲ್ಲಿ ಅವರ ಭಾಷಣದ ಉದ್ದೇಶಿತ ವೀಡಿಯೊವನ್ನು ಹಂಚಿಕೊಂಡಿದ್ದರು ಮತ್ತು ಅವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದರು. ಮುಸ್ಲಿಮರನ್ನು ಗುರಿಯಾಗಿಸಿಕೊಂಡು ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ ನರಸಿಂಹಾನಂದರ ವಿರುದ್ಧ ಹಲವಾರು ಎಫ್‌ಐಆರ್‌ಗಳನ್ನು ಕೂಡ ದಾಖಲಿಸಲಾಗಿದೆ.
ಯತಿ ನರಸಿಮಹಾನಂದ ಸರಸ್ವತಿ ಫೌಂಡೇಶನ್‌ನ ಪ್ರಧಾನ ಕಾರ್ಯದರ್ಶಿ ಉದಿತಾ ತ್ಯಾಗಿ ಅವರು ಗಾಜಿಯಾಬಾದ್‌ನ ಕವಿನಗರ ಪೊಲೀಸರಿಗೆ ದೂರು ಸಲ್ಲಿಸಿದ್ದು, ಮುಸ್ಲಿಮರನ್ನು ಹಿಂಸಾಚಾರಕ್ಕೆ ಪ್ರಚೋದಿಸುವ ಉದ್ದೇಶದಿಂದ ಜುಬೈರ್ ನರಸಿಂಹಾನಂದ ಅವರ ಹಳೆಯ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಎಫ್‌ಐಆರ್ ದಾಖಲಾದ ನಂತರ, ಜುಬೈರ್ ಬಂಧನದಿಂದ ರಕ್ಷಣೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ಬಾರ್ ಮತ್ತು ಬೆಂಚ್ ತಿಳಿಸಿದೆ.
ನವೆಂಬರ್ 25 ರಂದು, ನ್ಯಾಯಾಲಯವು ಪ್ರಕರಣದ ತನಿಖಾಧಿಕಾರಿಗೆ ಮುಂದಿನ ವಿಚಾರಣೆಯ ವೇಳೆಗೆ ಜುಬೈರ್ ವಿರುದ್ಧದ ಶಿಕ್ಷೆಯ ಸೆಕ್ಷನ್‌ಗಳನ್ನು ವಿವರಿಸುವ ಅಫಿಡವಿಟ್ ಸಲ್ಲಿಸುವಂತೆ ಸೂಚಿಸಿತು. ಬುಧವಾರ ಸಲ್ಲಿಸಿದ ಅಫಿಡವಿಟ್‌ನಲ್ಲಿ, ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 152 ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 66 ರ ಸೇರಿ ಎರಡು ಹೊಸ ಸೆಕ್ಷನ್‌ಗಳನ್ನು ಎಫ್‌ಐಆರ್‌ಗೆ ಸೇರಿಸಲಾಗಿದೆ ಎಂದು ತನಿಖಾಧಿಕಾರಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ನ್ಯಾಯಾಲಯವು ಎಫ್‌ಐಆರ್ ಸೇರ್ಪಡೆಗೆ ಅನುಮತಿ ನೀಡಿದ್ದು, ಡಿಸೆಂಬರ್ 3 ರಂದು ವಿಚಾರಣೆಗೆ ಪ್ರಕರಣವನ್ನು ಪಟ್ಟಿ ಮಾಡಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.
ನರಸಿಂಹಾನಂದ ಅವರು ಪದೇ ಪದೇ ನೀಡುವ ಕೋಮುವಾದಿ ಹೇಳಿಕೆಗಳು, ಮಹಿಳೆಯರು ಮತ್ತು ಹಿರಿಯ ರಾಜಕಾರಣಿಗಳ ಬಗ್ಗೆ ಅವರು ನೀಡುವ ಅವಹೇಳನಕಾರಿ ಹೇಳಿಕೆಗಳ ಬಗ್ಗೆ ಗಮನ ಸೆಳೆಯಲು ತಾನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾಗಿ ಜುಬೇರ್ ನ್ಯಾಯಾಲಯದಲ್ಲಿ ಸಲ್ಲಿಸಿದ ಅರ್ಜಿಯಲ್ಲಿ ಹೇಳಿದ್ದಾರೆ. ತನ್ನ ವಿರುದ್ಧ ದಾಖಲಾದ ಎಫ್‌ಐಆರ್ ನರಸಿಂಹಾನಂದರ ಕ್ರಿಮಿನಲ್ ಚಟುವಟಿಕೆಗಳನ್ನು ಬಹಿರಂಗಪಡಿಸದಂತೆ ತಡೆಯುವ “ದುರುದ್ದೇಶಪೂರಿತ ಪ್ರಯತ್ನ” ಎಂದು ಅವರು ನ್ಯಾಯಾಲಯಕ್ಕೆ ಹೇಳಿದ್ದಾರೆ ಎಂದು ಬಾರ್ ಆಂಡ್ ಬೆಂಚ್ ವರದಿ ಮಾಡಿದೆ.
ಇದನ್ನೂ ಓದಿ: ಮತದಾನದ ಹಕ್ಕಿನ ವಿರುದ್ಧ ಹೇಳಿಕೆ | ಮುಸ್ಲಿಮರ ಕ್ಷಮೆ ಕೇಳಿದ ಒಕ್ಕಲಿಗ ಸ್ವಾಮಿ
ಮತದಾನದ ಹಕ್ಕಿನ ವಿರುದ್ಧ ಹೇಳಿಕೆ | ಮುಸ್ಲಿಮರ ಕ್ಷಮೆ ಕೇಳಿದ ಒಕ್ಕಲಿಗ ಸ್ವಾಮಿ


