Homeಮುಖಪುಟಬೆಂಗಳೂರು | 2016ರ ಕಸ್ಟಡಿ ಸಾವು ಪ್ರಕರಣ; ನಾಲ್ವರು ಪೊಲೀಸರಿಗೆ 7 ವರ್ಷಗಳ ಜೈಲು ಶಿಕ್ಷೆ

ಬೆಂಗಳೂರು | 2016ರ ಕಸ್ಟಡಿ ಸಾವು ಪ್ರಕರಣ; ನಾಲ್ವರು ಪೊಲೀಸರಿಗೆ 7 ವರ್ಷಗಳ ಜೈಲು ಶಿಕ್ಷೆ

- Advertisement -
- Advertisement -

ಬೆಂಗಳೂರಿನಲ್ಲಿ 2016ರ ಮಾರ್ಚ್‌ನಲ್ಲಿ ವರದಿಯಾದ ಕಸ್ಟಡಿ ಸಾವಿನ ಪ್ರಕರಣದಲ್ಲಿ ಹೆಡ್ ಕಾನ್‌ಸ್ಟೆಬಲ್ ಮತ್ತು ಮೂವರು ಕಾನ್‌ಸ್ಟೆಬಲ್‌ಗಳು ತಪ್ಪಿತಸ್ಥರೆಂದು 51ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸೋಮವಾರ (ನವೆಂಬರ್ 25) ತೀರ್ಪು ನೀಡಿದೆ. ನ್ಯಾಯಾಲಯವು ಅವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ತಲಾ ₹50,000 ದಂಡ ವಿಧಿಸಿದೆ. 2016ರ ಕಸ್ಟಡಿ ಸಾವು

ಜೆಬಿ ನಗರದಲ್ಲಿನ ಉದ್ಯಮಿಯೊಬ್ಬರ ಕಳ್ಳತನಕ್ಕೆ ಸಂಬಂಧಿಸಿ ಅವರ ಮನೆಗೆಲಸದ ವ್ಯಕ್ತಿಯನ್ನು ಆರೋಪಿ ಎಂದು ಶಂಕಿಸಲಾಗಿತ್ತು. ಶಿಕ್ಷೆಗೊಳಗಾದ ಪೊಲೀಸ್ ಸಿಬ್ಬಂದಿಯಲ್ಲಿ ಹೆಡ್ ಕಾನ್‌ಸ್ಟೆಬಲ್ ಏಜಾಜ್ ಖಾನ್, ಈ ಹಿಂದೆ ಜೆ.ಬಿ.ನಗರ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಪ್ರಸ್ತುತ ಅವರು ಹಲಸೂರು ಸಂಚಾರ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದಾರೆ; ಮತ್ತು ಕಾನ್‌ಸ್ಟೆಬಲ್‌ಗಳಾದ ರಾಮಮೂರ್ತಿನಗರ ಠಾಣೆಯ ಕೇಶವ ಮೂರ್ತಿ, ಇಂದಿರಾನಗರ ಸಂಚಾರ ಠಾಣೆಯ ಮೋಹನ್ ರಾಮ್ ಮತ್ತು ಇಂದಿರಾನಗರ ಪೊಲೀಸ್ ಠಾಣೆಯ ಸಿದ್ದಪ್ಪ ಸೇರಿದ್ದಾರೆ. 2016ರ ಕಸ್ಟಡಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಳ್ಳತನ ಪ್ರಕರಣದಲ್ಲಿ ಪೊಲೀಸರು 42 ವರ್ಷದ ಮಹೇಂದ್ರ ಸಿಂಗ್ ರಾಥೋಡ್ ಎಂಬ ಮನೆಕೆಲಸಗಾರರನ್ನು ಬಂಧಿಸಿದ್ದರು. ಪ್ರಕರಣದ ವಿಚಾರಣೆಯ ವೇಳೆ ಪೊಲೀಸರು ಕಸ್ಟಡಿಯಲ್ಲಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು. ಹಲ್ಲೆಯ ಗಾಯದಿಂದ ಅವರು ನಂತರ ಸಾವನ್ನಪ್ಪಿದ್ದರು.

ಸಂತ್ರಸ್ತ ವ್ಯಕ್ತಿಯು ಮೂಲತಃ ಬಿಹಾರ ಮೂಲದವರಾಗಿದ್ದು, 12 ವರ್ಷಗಳಿಂದ ಎಚ್‌ಎಎಲ್ 2ನೇ ಹಂತದಲ್ಲಿರುವ ಉದ್ಯಮಿಯ ಮನೆಯಲ್ಲಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ಅವರು ₹3.5 ಲಕ್ಷ ದೋಚಿದ್ದಾರೆ ಎಂದು ಆರೋಪಿಸಲಾಗಿತ್ತು. ಸ್ಟೇಷನ್‌ನಲ್ಲಿನ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಮಹೇಂದ್ರ ಅವರು ಸ್ಟೇಷನ್‌ ಒಳಗೆ ನಡೆದುಕೊಂಡು ಹೋಗುತ್ತಿರುವುದು ದಾಖಲಾಗಿತ್ತು. ಆದರೆ ಸಂಜೆಯ ಹೊತ್ತಿಗೆ ಅವರು ಕುಸಿದುಬಿದ್ದಿದ್ದರು ಮತ್ತು ಹತ್ತಿರದ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿತ್ತು.

ಮೃತರ ಕುಟುಂಬಕ್ಕೆ ಪರಿಹಾರವಾಗಿ ₹ 2 ಲಕ್ಷ (ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ವಿಧಿಸಿರುವ ದಂಡ) ಪಾವತಿಸುವಂತೆಯೂ ನ್ಯಾಯಾಲಯ ಸೂಚಿಸಿದೆ. ರಾಜ್ಯ ಸರ್ಕಾರದಿಂದ ಪರಿಹಾರವನ್ನು ನಿರ್ಧರಿಸಲು ಜಿಲ್ಲಾ ಕಾನೂನು ಘಟಕದ ಶಿಫಾರಸನ್ನೂ ಕೋರಿದೆ.

ಮಹೇಂದ್ರ ಅವರನ್ನು ಠಾಣೆಗೆ ಕರೆತಂದಾಗ ಪೊಲೀಸ್ ಇನ್ಸ್‌ಪೆಕ್ಟರ್ ಅವರು ಕ್ರಿಕೆಟ್ ಪಂದ್ಯವೊಂದರ ಭದ್ರತಾ ಕರ್ತವ್ಯದ ಮೇಲೆ ಹೋಗಿದ್ದರು. ಈ ವೇಳೆ ಆರೋಪಿ ಮಹೇಂದ್ರ ಅವರ ವಿರುದ್ಧ ಲಾಠಿ ಮತ್ತು ರೋಲರ್‌ನಿಂದ ಹಲ್ಲೆ ನಡೆಸಲಾಗಿತ್ತು. ಇದು ಅವರ ಸಾವಿಗೆ ಕಾರಣ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಕೃಷ್ಣವೇಣಿ ಹೇಳಿದ್ದಾರೆ.

ಕಸ್ಟಡಿಯಲ್ ಸಾವು ಕರ್ತವ್ಯಲೋಪಕ್ಕಾಗಿ ಅಂದಿನ ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಸಬ್ ಇನ್‌ಸ್ಪೆಕ್ಟರ್ ಸೇರಿದಂತೆ ಆರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಆರಂಭದಲ್ಲಿ, ಅಸ್ವಾಭಾವಿಕ ಸಾವು ಎಂದು ಪ್ರಕರಣವನ್ನು ದಾಖಲಿಸಲಾಯಿತಾದರೂ, ಸಿಐಡಿ ತನಿಖೆಯ ನಂತರ ಆರೋಪಿಗಳ ವಿರುದ್ಧ ಕೊಲೆಗೆ ಸಮಾನವಲ್ಲದ ಅಪರಾಧದ ನರಹತ್ಯೆಯ ಆರೋಪಗಳನ್ನು ಹೊರಿಸಲಾಗಿತ್ತು.

ಇದನ್ನೂ ಓದಿ: ದ್ವೇಷ ಭಾಷಣ ಮಾಡುವ ದುಷ್ಕರ್ಮಿಯ ಬಗ್ಗೆ ಟ್ವೀಟ್ | ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೇರ್ ವಿರುದ್ಧ ‘ದೇಶದ್ರೋಹ ಸಮಾನ’ ಪ್ರಕರಣ

ದ್ವೇಷ ಭಾಷಣ ಮಾಡುವ ದುಷ್ಕರ್ಮಿಯ ಬಗ್ಗೆ ಟ್ವೀಟ್ | ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೇರ್ ವಿರುದ್ಧ ‘ದೇಶದ್ರೋಹ ಸಮಾನ’ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...