Homeಮುಖಪುಟಮಾಂಸಾಹಾರ ತ್ಯಜಿಸುವಂತೆ ಪ್ರಿಯಕರನಿಂದ ಕಿರುಕುಳ ಆರೋಪ : ಮಹಿಳಾ ಪೈಲಟ್ ಆತ್ಮಹತ್ಯೆ

ಮಾಂಸಾಹಾರ ತ್ಯಜಿಸುವಂತೆ ಪ್ರಿಯಕರನಿಂದ ಕಿರುಕುಳ ಆರೋಪ : ಮಹಿಳಾ ಪೈಲಟ್ ಆತ್ಮಹತ್ಯೆ

- Advertisement -
- Advertisement -

ಏರ್ ಇಂಡಿಯಾ ವಿಮಾನದ ಮಹಿಳಾ ಪೈಲಟ್ ಒಬ್ಬರು ಮುಂಬೈನ ತನ್ನ ಫ್ಲಾಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದು, ಪ್ರಿಯಕರನ ಕಿರುಕುಳಕ್ಕೆ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ವಾಣಿಜ್ಯ ಪೈಲಟ್ ಸೃಷ್ಟಿ ತುಲಿ ಸಾವನ್ನಪ್ಪಿದವರು. ಈಕೆಯ ಪ್ರಿಯಕರ ಆದಿತ್ಯ ಪಂಡಿತ್ ಎಂಬಾತ ಮಾಂಸಾಹಾರ ತ್ಯಜಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಗಳು ಹೇಳಿವೆ.

ವರದಿಗಳ ಪ್ರಕಾರ, ಉತ್ತರ ಪ್ರದೇಶದ ಗೋರಖ್‌ಪುರ ಮೂಲದ ಸೃಷ್ಟಿ ತುಲಿ, ಮುಂಬೈನ ಮರೋಲ್ ಪ್ರದೇಶದ ಕನಕಿಯಾ ರೈನ್ ಫಾರೆಸ್ಟ್ ಅಪಾರ್ಟ್‌ಮೆಂಟ್‌ನ ತನ್ನ ಫ್ಲಾಟ್‌ನಲ್ಲಿ ಮಂಗಳವಾರ (26) ತಡರಾತ್ರಿ ಡೇಟಾ ಕೇಬಲ್‌ನಿಂದ ನೇಣು ಬಿಗಿದುಕೊಂಡಿದ್ದಾರೆ. ದೆಹಲಿಯಲ್ಲಿ ನೆಲೆಸಿದ್ದ ಆಕೆಯ ಪ್ರಿಯಕರ ಆದಿತ್ಯ ಪಂಡಿತ್ ಜೊತೆ ಜಗಳವಾಡಿದ ನಂತರ ಈ ಘಟನೆ ನಡೆದಿದೆ.

ಪೊಲೀಸರು ಆದಿತ್ಯ ಪಂಡಿತ್‌ನನ್ನು ಬಂಧಿಸಿ ನಾಲ್ಕು ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ. “ಪೊವೈ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಪೈಲಟ್ ಎಂದು ಹೇಳಲಾದ ಸೃಷ್ಟಿ ತುಲಿ ಎಂಬ ಯುವತಿ ನವೆಂಬರ್ 24 ಮತ್ತು 25ರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಆಕೆಯ ಗೆಳೆಯ ಆದಿತ್ಯ ಪಂಡಿತ್‌ನನ್ನು ಬಂಧಿಸಿದ್ದಾರೆ” ಎಂದು ಮುಂಬೈ ಪೊಲೀಸರ ಹೇಳಿಕೆಯನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಸೃಷ್ಟಿ ತುಲಿ ಅವರು ಗೋರಖ್‌ಪುರದ ಮೊದಲ ಮಹಿಳಾ ಪೈಲಟ್ ಆಗಿದ್ದರು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ ಸನ್ಮಾನಿಸಲ್ಪಟ್ಟಿದ್ದರು. ಈ ವಿಚಾರವನ್ನು ಸೃಷ್ಟಿ ತುಲಿಯ ಚಿಕ್ಕಪ್ಪ ವಿವೇಕ್ ತುಲಿ ಇಂಡಿಯಾ ಟುಡೇ ಸಂದರ್ಶನದಲ್ಲಿ ಹೇಳಿದ್ದಾರೆ ಎಂದು ವರದಿಗಳು ವಿವರಿಸಿವೆ.

ಸೃಷ್ಟಿ ಕಳೆದ ವರ್ಷ ಜೂನ್‌ನಿಂದ ಕೆಲಸದ ನಿಮಿತ್ತ ಮುಂಬೈನಲ್ಲಿ ನೆಲೆಸಿದ್ದರು. ಎರಡು ವರ್ಷಗಳ ಹಿಂದೆ ದೆಹಲಿಯಲ್ಲಿ ಕಮರ್ಷಿಯಲ್ ಪೈಲಟ್ ಕೋರ್ಸ್ ಓದುತ್ತಿದ್ದಾಗ ಆಕೆ ಮತ್ತು ಆದಿತ್ಯ ಪಂಡಿತ್ ಭೇಟಿಯಾಗಿದ್ದರು. ಅಲ್ಲಿಂದ ಅವರಿಬ್ಬರ ನಡುವೆ ಪ್ರೀತಿಯಾಗಿತ್ತು ಎಂದು ಪೊವೈ ಪೊಲೀಸ್ ಠಾಣೆಯ ಅಧಿಕಾರಿಯನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.

ಆತ್ಮಹತ್ಯೆಗೂ ಮುನ್ನ ತುಲಿ ಮತ್ತು ಪಂಡಿತ್ ನಡುವೆ ಜಗಳ ನಡೆದಿತ್ತು. ಬಳಿಕ ಪಂಡಿತ್ ಕಾರಿನಲ್ಲಿ ದೆಹಲಿಗೆ ಹೊರಟಿದ್ದರು. ಪ್ರಯಾಣದ ಮಧ್ಯೆ ಪಂಡಿತ್‌ಗೆ ಕರೆ ಮಾಡಿದ್ದ ತುಲಿ, ತಾನು ಜೀವನವನ್ನು ಕೊನೆಗೊಳಿಸುವುದಾಗಿ ಹೇಳಿದ್ದಾರೆ. ತಕ್ಷಣ ಕಾರು ತಿರುಗಿಸಿದ ಪಂಡಿತ್ ಮುಂಬೈಗೆ ಆಗಮಿಸಿದ್ದಾರೆ. ಈ ವೇಳೆ ತುಲಿ ಅವರ ಮನೆಯ ಬಾಗಿಲು ಲಾಕ್ ಆಗಿತ್ತು. ಬಳಿಕ ಕೀ ಮಾಡುವವರ ಸಹಾಯದಿಂದ ಬಾಗಿಲು ತೆರೆಯಲಾಯಿತು. ಈ ವೇಳೆ ತುಲಿ ಡೇಟಾ ಕೇಬಲ್‌ನಿಂದ ನೇಣು ಬಿಗಿದುಕೊಂಡಿರುವುದು ಕಂಡು ಬಂದಿದೆ. ತಕ್ಷಣ ಆಕೆಯನ್ನು ಇಳಿಸಿ ಸೆವೆನ್ ಹಿಲ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಆಕೆ ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಮನೆಯಲ್ಲಿ ಯಾವುದೇ ಆತ್ಮಹತ್ಯಾ ಪತ್ರ ಕಂಡು ಬಂದಿಲ್ಲ ಎಂದು ಕೆಲ ವರದಿಗಳು ವಿವರಿಸಿವೆ.

ಆಹಾರ ಪದ್ದತಿಯನ್ನು ಬದಲಾಯಿಸುವಂತೆ ಆದಿತ್ಯ ಪಂಡಿತ್ ಸೃಷ್ಟಿ ತುಲಿಗೆ ಒತ್ತಡ ಹೇರುತ್ತಿದ್ದ. ಸಾರ್ವಜನಿಕವಾಗಿ ಅವಮಾನಿಸುತ್ತಿದ್ದ. ಆತನ ಕಿರುಕುಳಕ್ಕೆ ಬೇಸತ್ತು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿನ ಬಳಿಕ ಪಂಡಿತ್ ಸಾಕ್ಷ್ಯ ನಾಶ ಮಾಡಿದ್ದಾನೆ ಎಂದು ಆರೋಪಿಸಿ ಸೃಷ್ಟಿ ತುಲಿಯ ಚಿಕ್ಕಪ್ಪ ಪೊಲೀಸರಿಗೆ ದೂರು ನೀಡಿದ್ದಾರೆ.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ಇದನ್ನೂ ಓದಿ : ಮಧ್ಯಪ್ರದೇಶ | ದಲಿತ ವ್ಯಕ್ತಿಯನ್ನು ಥಳಿಸಿ ಕೊಂದ ಗ್ರಾಮ ಪಂಚಾಯತ್ ಅಧ್ಯಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...