Homeಮುಖಪುಟಚಲಿಸುತ್ತಿದ್ದ 108 ಆಂಬ್ಯುಲೆನ್ಸ್‌ನಲ್ಲಿ ಬಾಲಕಿಯ ಅತ್ಯಾಚಾರ

ಚಲಿಸುತ್ತಿದ್ದ 108 ಆಂಬ್ಯುಲೆನ್ಸ್‌ನಲ್ಲಿ ಬಾಲಕಿಯ ಅತ್ಯಾಚಾರ

- Advertisement -
- Advertisement -

ಚಲಿಸುತ್ತಿದ್ದ 108 ಆಂಬ್ಯುಲೆನ್ಸ್‌ನಲ್ಲಿ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ಮಧ್ಯ ಪ್ರದೇಶದ ಮೌಗಂಜ್ ಜಿಲ್ಲೆಯಲ್ಲಿ ನಡೆದಿದೆ.

ನವೆಂಬರ್ 22ರಂದು ಅಪರಾಧ ನಡೆದಿದ್ದು, ಆಂಬ್ಯುಲೆನ್ಸ್‌ ಚಾಲಕ ಸೇರಿದಂತೆ ಪ್ರಕರಣದ ನಾಲ್ವರು ಆರೋಪಿಗಳ ಪೈಕಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ತಾಯಂದಿರು, ಅನಾರೋಗ್ಯದ ಶಿಶುಗಳು ಮತ್ತು ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ತುರ್ತು ಆರೋಗ್ಯ ಸೇವೆಯನ್ನು ಒದಗಿಸುವ, ಮಧ್ಯ ಪ್ರದೇಶ ರಾಜ್ಯ ಸರ್ಕಾರದ ಅಧೀನಲ್ಲಿರುವ ಆಂಬ್ಯುಲೆನ್ಸ್‌ನಲ್ಲಿ ಅತ್ಯಾಚಾರ ನಡೆದಿದೆ. ಈ ಆಂಬ್ಯುಲೆನ್ಸ್‌ ಅನ್ನು ಸರ್ಕಾರಿ-ಖಾಸಗಿ ಪಾಲುದಾರಿಕೆ (ಪಿಪಿಪಿ) ವ್ಯವಸ್ಥೆಯಲ್ಲಿ ನಿರ್ವಹಣೆ ಮಾಡಲಾಗುತ್ತಿದೆ.

ನವೆಂಬರ್ 22ರಂದು ಸಂತ್ರಸ್ತ ಬಾಲಕಿ, ಸಹೋದರಿ ಮತ್ತು ಆಕೆಯ ಪತಿಯೊಂದಿಗೆ (ಭಾವ) ಆಂಬ್ಯುಲೆನ್ಸ್‌ನಲ್ಲಿ ಪ್ರಯಾಣಿಸುತ್ತಿದ್ದಳು. ಈ ಮೂವರ ಜೊತೆ ಚಾಲಕ ಮತ್ತು ಆತನ ಸಹಾಯಕ ಆಂಬ್ಯುಲೆನ್ಸ್‌ನಲ್ಲಿ ಇದ್ದರು. ಅವರಲ್ಲಿ ಯಾರೂ ರೋಗಿಗಳಾಗಿರಲಿಲ್ಲ.

ಆಂಬ್ಯುಲೆನ್ಸ್‌ ಸಾಗುತ್ತಿದ್ದಾಗ ದಾರಿ ಮಧ್ಯೆ ಬಾಲಕಿಯ ಸಹೋದರಿ ಮತ್ತು ಆಕೆಯ ಗಂಡ ನೀರು ತರುವ ನೆಪದಲ್ಲಿ ಕೆಳಗೆ ಇಳಿದಿದ್ದಾರೆ. ಈ ವೇಳೆ ಅವರಿಗಾಗಿ ಕಾಯುವ ಬದಲು ಚಾಲಕ ಆಂಬ್ಯುಲೆನ್ಸ್‌ ಅನ್ನು ವೇಗವಾಗಿ ಚಲಾಯಿಸಿದ್ದಾನೆ. ಈ ವೇಳೆ ಚಾಲಕನ ಸಹಾಯಕ ರಾಜೇಶ್ ಕೇವತ್ ಎಂಬಾತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ.

ದುಷ್ಕೃತ್ಯದ ಬಳಿಕ ರಾತ್ರಿಯಿಡೀ ಬಾಲಕಿಯನ್ನು ತಮ್ಮ ಜೊತೆ ಒತ್ತೆಯಾಳಾಗಿಟ್ಟುಕೊಂಡಿದ್ದ ಆರೋಪಿಗಳು, ಮರುದಿನ ಬೆಳಿಗ್ಗೆ ಆಕೆಯನ್ನು ರಸ್ತೆಬದಿ ಬಿಟ್ಟು ಹೋಗಿದ್ದಾರೆ. ನಂತರ ಬಾಲಕಿ ನಡೆದಿರುವ ವಿಷಯವನ್ನು ತಾಯಿಗೆ ತಿಳಿಸಿದ್ದು, ಅವರು ನ.25ರಂದು ದೂರು ದಾಖಲಿಸಿದ್ದಾರೆ.

ಬಾಲಕಿಯ ಮೇಲೆ ಅತ್ಯಾಚಾರವೆಸಗಲು ಸಹಕಾರ ನೀಡಿದ ಆರೋಪ ಹೊತ್ತಿರುವ ಬಾಲಕಿಯ ಸಹೋದರಿ ಮತ್ತು ಆಕೆಯ ಪತಿಯನ್ನು ಬಂಧಿಸಲು ಹುಡುಕಾಟ ಆರಂಭಿಸಲಾಗಿದೆ ಎಂದು ರೇವಾ ವಲಯದ ಡಿಐಜಿಪಿ ಸಾಕೇತ್ ಪಾಂಡೆ ತಿಳಿಸಿದ್ದಾರೆ.

ಆರೋಪಿಗಳ ವಿರುದ್ದ ಪೋಕ್ಸೋ ಮತ್ತು ಬಿಎನ್‌ಎಸ್‌ ಕಾಯ್ದೆಯ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ಸಾಕೇತ್ ಪಾಂಡೆ ಹೇಳಿದ್ದಾರೆ.

ಇದನ್ನೂ ಓದಿ : ಗಂಭೀರ ಸಮಸ್ಯೆಗಳೊಂದಿಗೆ ಶಿಶು ಜನನ : ನಾಲ್ವರು ವೈದ್ಯರ ವಿರುದ್ಧ ಪ್ರಕರಣ, ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...