Homeಮುಖಪುಟಸಂಭಾಲ್ ಹಿಂಸಾಚಾರದಲ್ಲಿ ಅಧಿಕಾರಿಗಳ ಪಾತ್ರದ ಶಂಕೆ : ಎಸ್‌ಐಟಿ ತನಿಖೆ ಕೋರಿ ಹೈಕೋರ್ಟ್‌ಗೆ ಅರ್ಜಿ

ಸಂಭಾಲ್ ಹಿಂಸಾಚಾರದಲ್ಲಿ ಅಧಿಕಾರಿಗಳ ಪಾತ್ರದ ಶಂಕೆ : ಎಸ್‌ಐಟಿ ತನಿಖೆ ಕೋರಿ ಹೈಕೋರ್ಟ್‌ಗೆ ಅರ್ಜಿ

- Advertisement -
- Advertisement -

ಉತ್ತರ ಪ್ರದೇಶದ ಸಂಭಾಲ್‌ನ ಶಾಹಿ ಜಾಮಾ ಮಸೀದಿ ಆವರಣದಲ್ಲಿ ಸಮೀಕ್ಷೆಗೆ ಆದೇಶಿಸಿದ ನಂತರ ಉಂಟಾದ ಹಿಂಸಾಚಾರದಲ್ಲಿ ‘ಸರ್ಕಾರಿ ಅಧಿಕಾರಿಗಳ ಪಾತ್ರ’ವಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಈ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸುವಂತೆ ಕೋರಿ ಅಲಾಹಾಬಾದ್ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಡಾ. ಆನಂದ್ ಪ್ರಕಾಶ್ ತಿವಾರಿ ಎಂಬವರು ಸಲ್ಲಿಸಿರುವ ಅರ್ಜಿಯಲ್ಲಿ ನಗರ ಪೊಲೀಸ್ ಆಯುಕ್ತ, ಪೊಲೀಸ್ ಅಧೀಕ್ಷಕ (ಎಸ್‌ಪಿ), ಜಿಲ್ಲಾಧಿಕಾರಿ (ಡಿಸಿ), ಉಪ ವಿಭಾಗಾಧಿಕಾರಿ ಸೇರಿದಂತೆ ವಿವಿಧ ಅಧಿಕಾರಿಗಳ ಪಾತ್ರ ಮತ್ತು ಅವರು ಕೈಗೊಂಡ ಕ್ರಮಗಳ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಎಸ್‌ಐಟಿ ರಚಿಸಬೇಕು ಎಂದು ಕೋರಲಾಗಿದೆ.

ಘಟನೆಯಲ್ಲಿ ರಾಜ್ಯದ ಅಧಿಕಾರಿಗಳ ಪಾತ್ರ ಮತ್ತು ಲೋಪಗಳನ್ನು ಪರಿಶೀಲಿಸಿ ನಿರ್ದಿಷ್ಟ ಸಮಯದೊಳಗೆ ವರದಿ ಸಲ್ಲಿಸಬೇಕಿದ್ದು, ಇದಕ್ಕಾಗಿ ಉತ್ತರ ಪ್ರದೇಶ ಸರ್ಕಾರದ ವ್ಯಾಪ್ತಿಯಲ್ಲಿ ಇಲ್ಲದ ಸ್ವತಂತ್ರವಾಗಿರುವ ಕೇಂದ್ರ ತನಿಖಾ ಸಂಸ್ಥೆಗಳ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸುವಂತೆ ಅರ್ಜಿದಾರರು ಮನವಿ ಮಾಡಿದ್ದಾರೆ.

ಸಂಭಾಲ್‌ನಲ್ಲಿ ಶಾಹಿ ಜಾಮಾ ಮಸೀದಿಯ ಎರಡನೇ ಸಮೀಕ್ಷೆ ನಡೆಸದಂತೆ ಆಗ್ರಹಿಸಿ ನ. 24ರಂದು ನಡೆದ ಪ್ರತಿಭಟನೆ ಘರ್ಷಣೆಗೆ ತಿರುಗಿ ನಾಲ್ವರು ಮೃತಪಟ್ಟಿದ್ದರು.

ನ್ಯಾಯಾಂಗ ಆಯೋಗ ರಚಿಸಿದ ರಾಜ್ಯಪಾಲರು

ಸಂಭಾಲ್ ಹಿಂಸಾಚಾರದ ಕುರಿತು ತನಿಖೆಗಾಗಿ ಮೂವರು ಸದಸ್ಯರ ನ್ಯಾಯಾಂಗ ಆಯೋಗ ರಚಿಸಿದ್ದಾಗಿ ಉತ್ತರ ಪ್ರದೇಶ ರಾಜ್ಯಪಾಲರಾದ ಆನಂದಿಬೆನ್‌ ಪಟೇಲ್ ಘೋಷಿಸಿದ್ದಾರೆ. ನವೆಂಬರ್ 28ರಂದು ಈ ಕುರಿತು ಅಧಿಸೂಚನೆ ಪ್ರಕಟಿಸಲಾಗಿದೆ. ಅಧಿಸೂಚನೆ ಪ್ರಕಟಗೊಂಡ ಎರಡು ತಿಂಗಳ ಒಳಗಾಗಿ ತನಿಖೆ ಪೂರ್ಣಗೊಳಿಸಬೇಕು. ಸರ್ಕಾರದ ಅನುಮೋದನೆಯೊಂದಿಗೆ ತನಿಖಾ ಅವಧಿಯನ್ನು ವಿಸ್ತರಿಸಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅಲಹಾಬಾದ್ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ದೇವೇಂದ್ರ ಕುಮಾರ್ ಅರೋರಾ ನ್ಯಾಯಾಂಗ ಆಯೋಗದ ನೇತೃತ್ವ ವಹಿಸಲಿದ್ದಾರೆ. ನಿವೃತ್ತ ಐಎಎಸ್ ಅಧಿಕಾರಿ ಅಮಿತ್ ಮೋಹನ್ ಪ್ರಸಾದ್, ನಿವೃತ್ತ ಐಪಿಎಸ್ ಅಧಿಕಾರಿ ಅರವಿಂದ್ ಕುಮಾರ್ ಜೈನ್ ಆಯೋಗದ ಸದಸ್ಯರಾಗಿದ್ದಾರೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ : ಉತ್ತರಕಾಶಿ ಮಸೀದಿ ವಿವಾದ : ಹಿಂದುತ್ವ ಗುಂಪಿನ ‘ಮಹಾಪಂಚಾಯತ್‌’ಗೆ ಅನುಮತಿ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...