Homeಕರ್ನಾಟಕಬಳ್ಳಾರಿ ಬಾಣಂತಿಯರ ಸಾವು ಪ್ರಕರಣ | ಕರ್ತವ್ಯಲೋಪ; ಡ್ರಗ್ ಕಂಟ್ರೋಲರ್ ಸಸ್ಪೆಂಡ್ - ಸಿದ್ದರಾಮಯ್ಯ

ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ | ಕರ್ತವ್ಯಲೋಪ; ಡ್ರಗ್ ಕಂಟ್ರೋಲರ್ ಸಸ್ಪೆಂಡ್ – ಸಿದ್ದರಾಮಯ್ಯ

- Advertisement -
- Advertisement -

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯಲೋಪ ಎಸಗಿದ್ದಕ್ಕಾಗಿ ಡ್ರಗ್ ಕಂಟ್ರೋಲರ್ ಉಮೇಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಇತ್ತೀಚೆಗೆ ಸಂಭವಿಸಿದ ಬಾಣಂತಿಯರ ಸಾವಿನ ಕುರಿತಾಗಿ ನಡೆದ ಉನ್ನತ ಸಭೆಯ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಿಂಗರ್‌ ಲ್ಯಾಕ್ಟೇಟ್‌ ದ್ರಾವಣ ಪೂರೈಸಿರುವ ಪಶ್ಚಿಮ ಬಂಗಾಳದ ಕಂಪೆನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಕಂಪೆನಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.

“ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸರ್ಕಾರದಿಂದ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಡ್ರಗ್ ಪೂರೈಸಿದ ಕಂಪೆನಿಯಿಂದಲೂ ಪರಿಹಾರವನ್ನು ವಸೂಲು ಮಾಡಿ, ಮೃತರ ಕುಟುಂಬಕ್ಕೆ ನೀಡಲು ಸೂಚನೆ ನೀಡಲಾಗಿದೆ. ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಸಂಭವಿಸಿರುವ ಈ ರೀತಿಯ ಸಾವಿನ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲು ನಿರ್ಧಾರಿಸಲಾಗಿದೆ” ಎಂದು ಸಿಎಂ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಾಣಂತಿಯರ ಸಾವಿನ ಕುತು ತಜ್ಞರ ಸಮಿತಿ ರಚಿಸಿ ಘಟನಾವಳಿಗಳ ಬಗ್ಗೆ ಪ್ರಾಥಮಿಕ ವರದಿ ಪಡೆಯಲಾಗಿದೆ.
ಬಾಣಂತಿಯರಿಗೆ ನೀಡಲಾಗಿರುವ ರಿಂಗರ್‌ ಲ್ಯಾಕ್ಟೇಟ್‌ ದ್ರಾವಣದ ಎಲ್ಲಾ ಬ್ಯಾಚ್‌ಗಳ ಬಳಕೆಯನ್ನು ಹಿಂಪಡೆಯಲಾಗಿದ್ದು, ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಳಸಲಾದ ದ್ರಾವಣ ಪರೀಕ್ಷಿಸಲು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

ತಮಿಳುನಾಡು ಮಾದರಿಯಲ್ಲಿ ಔಷಧಿಗಳ ಖರೀದಿ ಪ್ರಕ್ರಿಯೆ ಹಾಗೂ ಔಷಧ ನಿಯಂತ್ರಣ ಇಲಾಖೆಯನ್ನು ಪುನಾರಚನೆ ಮಾಡುವ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ. ಇನ್ನು ಮುಂದೆ ಈ ರೀತಿಯ ದುರ್ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಯೋಗಾಲಯದ ವರದಿ ಬಂದ ಬಳಿಕ ಘಟನೆಗೆ ಜವಾಬ್ದಾರರಾದ ಪ್ರತಿಯೊಬ್ಬರನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗುತ್ತದೆ. ಡ್ರಗ್‌ ಕಂಟ್ರೋಲರ್‌ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲು ಆದೇಶ ನೀಡಲಾಗಿದೆ. ಔಷಧ ನಿಯಂತ್ರಣ ಕಾಯ್ದೆಯನ್ನು ಇನ್ನಷ್ಟು ಬಿಗಿಗೊಳಿಸುವ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ನವೆಂಬರ್‌ 11ರಿಂದ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ನಾಲ್ವರು ಬಾಣಂತಿಯರ ಸಾವಿನ ಪ್ರಕರಣ ವರದಿಯಾಗಿತ್ತು. ಹಿಮೋಡಯಾಲಿಸಿಸ್‌ ಮತ್ತು ಬಹು ಅಂಗಗಳ ವೈಫಲ್ಯ ಹಾಗೂ ತೀವ್ರತರ ಮೂತ್ರಪಿಂಡದ ಗಾಯದಂತಹ ತೊಂದರೆಗಳ 7 ಪ್ರಕರಣಗಳಲ್ಲಿ , 4ಬಾಣಂತಿಯರು ಸಾವಿಗೀಡಾಗಿದ್ದರು. ಉಳಿದ 3 ರೋಗಿಗಳಲ್ಲಿ 2 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಬಳ್ಳಾರಿ ವಿಮ್ಸ್‌ನಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಅಮೆರಿಕ ದೋಷಾರೋಪಣೆಗೆ ಕೊನೆಗೂ ಪ್ರತಿಕ್ರಿಯಿಸಿದ ಅದಾನಿ | ಪತ್ರಿಕೆಗಳ ವಿರುದ್ಧ ಆಕ್ರೋಶ

ಅಮೆರಿಕ ದೋಷಾರೋಪಣೆಗೆ ಕೊನೆಗೂ ಪ್ರತಿಕ್ರಿಯಿಸಿದ ಅದಾನಿ | ಪತ್ರಿಕೆಗಳ ವಿರುದ್ಧ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...