Homeಮುಖಪುಟಕಾಂಗ್ರೆಸ್‌ ಪತ್ರ ಬರೆದರೆ ಅಸ್ಸಾಂನಲ್ಲಿ ಗೋಮಾಂಸ ನಿಷೇಧ: ಮುಖ್ಯಮಂತ್ರಿ ಶರ್ಮಾ

ಕಾಂಗ್ರೆಸ್‌ ಪತ್ರ ಬರೆದರೆ ಅಸ್ಸಾಂನಲ್ಲಿ ಗೋಮಾಂಸ ನಿಷೇಧ: ಮುಖ್ಯಮಂತ್ರಿ ಶರ್ಮಾ

- Advertisement -
- Advertisement -

ಇತ್ತೀಚಿನ ಉಪಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಮತದಾರರಿಗೆ ಗೋಮಾಂಸ ಹಂಚುತ್ತಿದೆ ಎಂಬ ಕಾಂಗ್ರೆಸ್‌ನ ಆರೋಪಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಈ ಬಗ್ಗೆ ಕಾಂಗ್ರೆಸ್‌ ಪತ್ರ ಬರೆದರೆ ಅಸ್ಸಾಂನಲ್ಲಿ ಗೋಮಾಂಸ ನಿಷೇಧಿಸಲು ಸಿದ್ಧ ಎಂದು ಹೇಳಿದ್ದಾರೆ.

ಮುಸ್ಲಿಂ ಪ್ರಾಬಲ್ಯವಿರುವ ಸಮಗುರಿ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲ್ಲಲು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತದಾರರಿಗೆ ಗೋಮಾಂಸ ಹಂಚಿದೆ ಎಂಬ ಕಾಂಗ್ರೆಸ್ ಪಕ್ಷದ ಆರೋಪಕ್ಕೆ ಪ್ರತಿಕ್ರಿಯೆಯಾಗಿ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಈ ಹೇಳಿಕೆ ನೀಡಿದ್ದಾರೆ.

ಇತ್ತೀಚೆಗಷ್ಟೇ ಕಾಂಗ್ರೆಸ್ ಸಂಸದ ರಕಿಬುಲ್ ಹುಸೇನ್ ಕೂಡ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಅಲ್ಪಸಂಖ್ಯಾತ ಮತದಾರರನ್ನು ಬಿಜೆಪಿ ಪರವಾಗಿ ಸೆಳೆಯಲು ಗೋಮಾಂಸ ಕೂಟವನ್ನು ಆಯೋಜಿಸಿದ್ದರು ಎಂದು ಆರೋಪಿಸಿದ್ದಾರೆ.

“ಮತದಾರರಿಗೆ ದನದ ಮಾಂಸ ಕೊಡುವ ಮೂಲಕ ಸಮಗೂರಿಯನ್ನು ಕಾಂಗ್ರೆಸ್ ಗೆಲ್ಲಿಸುತ್ತಿದೆಯೇ ಎಂದು ನನಗೆ ತಿಳಿಯಬೇಕು. ಅವರಿಗೆ ಸಮಗೂರಿ ಚೆನ್ನಾಗಿ ತಿಳಿದಿದೆ. ಅಂದರೆ, ದನದ ಮಾಂಸವನ್ನು ನೀಡುವುದರ ಮೂಲಕ ಸಮಗೂರಿಯನ್ನು ಗೆಲ್ಲಬಹುದೇ” ಎಂದು ಶರ್ಮಾ ಪ್ರಶ್ನಿಸಿದ್ದಾರೆ.

ಅವರು ಅಧಿಕಾರದಲ್ಲಿದ್ದಾಗ ಅಸ್ಸಾಂನಲ್ಲಿ ಏಕೆ ಗೋಮಾಂಸವನ್ನು ನಿಷೇಧಿಸಲಿಲ್ಲ ಎಂದು ಶರ್ಮಾ ಕಾಂಗ್ರೆಸ್‌ಗೆ ಕೇಳಿದರು. ”ಗೋಮಾಂಸ ತಿನ್ನುವುದು ತಪ್ಪು ಎಂದು ರಾಕಿಬುಲ್ ಹುಸೇನ್ ಒಂದು ಒಳ್ಳೆಯ ಮಾತನ್ನು ಹೇಳಿದ್ದಾರೆ, ಅಲ್ಲವೇ?” ಎಂದು ಸಿಎಂ ಪ್ರಶ್ನಿಸಿದರು.

“ನಾನು ರಕಿಬುಲ್ ಹುಸೇನ್ ಅವರಿಗೆ ಗೋಮಾಂಸವನ್ನು ನಿಷೇಧಿಸಬೇಕು ಎಂದು ಹೇಳಲು ಬಯಸುತ್ತೇನೆ, ಅದು ತಪ್ಪು ಎಂದು ಅವರು ಹೇಳಿದರು. ಅವರು ನನಗೆ ಲಿಖಿತವಾಗಿ ನೀಡಬೇಕಾಗಿದೆ, ಬಿಜೆಪಿ ಅಥವಾ ಕಾಂಗ್ರೆಸ್ ಗೋಮಾಂಸದ ಬಗ್ಗೆ ಮಾತನಾಡಬಾರದು; ಅಸ್ಸಾಂನಲ್ಲಿ ಅದನ್ನು ನಿಷೇಧಿಸಬೇಕು. ನಾವು ಹಾಗೆ ಮಾಡಿದರೆ, ಎಲ್ಲ ಸಮಸ್ಯೆಗಳನ್ನು ಪರಿಹರಿಸಲಾಗುವುದು” ಎಂದು ಶರ್ಮಾ ಹೇಳಿದರು.

ಕಾಂಗ್ರೆಸ್ ಮುಖ್ಯಸ್ಥ ಬುಪೆನ್ ಕುಮಾರ್ ಬೋರಾ ಅವರಿಗೆ ಲಿಖಿತ ಮನವಿಯನ್ನು ಕಳುಹಿಸಿದರೆ ಇಡೀ ಈಶಾನ್ಯ ರಾಜ್ಯದಲ್ಲಿ ಗೋಮಾಂಸವನ್ನು ನಿಷೇಧಿಸಲು ಸಿದ್ಧ ಎಂದು ಶರ್ಮಾ ಹೇಳಿದರು. ವಿರೋಧ ಪಕ್ಷವು ವಿಷಯವನ್ನು ಎತ್ತಿದ್ದಕ್ಕೆ ನನಗೆ ಸಂತೋಷವಾಗಿದೆ ಎಂದರು.

“ನಾನು ಭೂಪೇನ್ ಬೋರಾ ಅವರಿಗೆ ಪತ್ರ ಬರೆದು, ರಕಿಬುಲ್ ಹುಸೇನ್ ಅವರಂತೆ ಗೋಮಾಂಸ ನಿಷೇಧವನ್ನು ಪ್ರತಿಪಾದಿಸುತ್ತೀರಾ ಎಂದು ಕೇಳುತ್ತೇನೆ. ನಾನು ಮುಂದಿನ ವಿಧಾನಸಭೆಯಲ್ಲಿ (ಅದರ ಪ್ರಕಾರ) ಗೋಮಾಂಸವನ್ನು ಸಂಪೂರ್ಣವಾಗಿ ನಿಷೇಧಿಸುತ್ತೇನೆ. ಹಿಂದೂಗಳು, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಎಲ್ಲರೂ ಗೋಮಾಂಸ ತಿನ್ನುವುದನ್ನು ನಿಲ್ಲಿಸಬೇಕು. ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲಾಗುವುದು” ಎಂದು ಅವರು ಹೇಳಿದರು.

ಗಮನಾರ್ಹವಾಗಿ, ಗೋಮಾಂಸ ಸೇವನೆಯು ಅಸ್ಸಾಂನಲ್ಲಿ ಕಾನೂನುಬಾಹಿರವಲ್ಲ. ಆದರೆ 2021 ರ ಅಸ್ಸಾಂ ಗೋಸಂರಕ್ಷಣಾ ಕಾಯಿದೆಯು ಹಿಂದೂಗಳು, ಜೈನರು ಮತ್ತು ಸಿಖ್ಖರು ಬಹುಸಂಖ್ಯಾತರಾಗಿರುವ ಪ್ರದೇಶಗಳಲ್ಲಿ ಮತ್ತು ದೇವಾಲಯ ಅಥವಾ ಸತ್ರದ ಐದು ಕಿಮೀ ವ್ಯಾಪ್ತಿಯೊಳಗೆ ಗೋಹತ್ಯೆ ಮತ್ತು ಗೋಮಾಂಸ ಮಾರಾಟವನ್ನು ನಿಷೇಧಿಸುತ್ತದೆ.

ಇದನ್ನೂ ಓದಿ; ಫೆಂಗಲ್ ಚಂಡಮಾರುತ ಪರಿಣಾಮ: ಭಾರೀ ಮಳೆಯಿಂದ ಪುದುಚೇರಿಯಲ್ಲಿ ಜನಜೀವನ ಸ್ಥಗಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸನಾತನ ಧರ್ಮದ ಅನುಯಾಯಿಗಳಿಗೆ ಮಾತ್ರ ದೇವಿ ವಿಗ್ರಹಗಳನ್ನು ಸ್ಪರ್ಶಿಸಲು ಅನುಮತಿ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಅಧಿಕಾರಿ

ಹುಗ್ಲಿ ನದಿಯಲ್ಲಿ ದುರ್ಗಾ ವಿಸರ್ಜನೆಯ ಸಮಯದಲ್ಲಿ ಸನಾತನ ಧರ್ಮದ ಅನುಯಾಯಿಗಳಿಗೆ ಮಾತ್ರ ದೇವಿಯ ವಿಗ್ರಹಗಳನ್ನು ಸ್ಪರ್ಶಿಸಲು ಅನುಮತಿ ನೀಡಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಬುಧವಾರ ಹೇಳಿದ್ದಾರೆ. ಸುರಕ್ಷತಾ ಕಾಳಜಿಗಳು ಮತ್ತು...

ಮಹಾರಾಷ್ಟ್ರ ಸಿಇಒ ಮನವಿಗೆ ಸ್ಪಂದಿಸಿದ ಚುನಾವಣಾ ಆಯೋಗ: ‘ಇಸಿಐನೆಟ್’ ಸಾಫ್ಟ್‌ವೇರ್‌ನಲ್ಲಾಯಿತು 4 ಪ್ರಮುಖ ಬದಲಾವಣೆ!

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತಾಂತ್ರಿಕ ಸಾಫ್ಟ್‌ವೇರ್‌ನ ಅತಿಯಾದ ನಿಯಂತ್ರಣವು ಸ್ಥಳೀಯ ನೋಂದಣಿ ಅಧಿಕಾರಿಗಳ ಶಾಸನಬದ್ಧ ಅಧಿಕಾರವನ್ನೇ ಕಸಿದುಕೊಳ್ಳುತ್ತಿದೆ ಎಂಬ ತೀವ್ರ ಕಳವಳದ ಬೆನ್ನಲ್ಲೇ, ಭಾರತೀಯ ಚುನಾವಣಾ ಆಯೋಗವು ತನ್ನ 'ಇಸಿಐನೆಟ್' (ECINet)...

ಮಸೀದಿಯಲ್ಲಿ ಚುಂಬಿಸಿದ್ದಕ್ಕೆ ಮರಣದಂಡನೆ? ಸೌದಿ ಅಮಾನವೀಯ ತೀರ್ಪಿಗೆ ತೀವ್ರ ಆಕ್ರೋಶ

ಮುಸ್ಲಿಂ ಸಮುದಾಯದ ಪವಿತ್ರ ನಗರವಾದ ಮೆಕ್ಕಾದ ಮಸೀದಿಯೊಂದರಲ್ಲಿ ಅನೈತಿಕ ಕೃತ್ಯ ಎಸಗಿದ್ದಾರೆ ಎಂಬ ಆರೋಪದ ಮೇಲೆ ಸೌದಿ ಅರೇಬಿಯಾ ಇಬ್ಬರು ಬಾಂಗ್ಲಾದೇಶಿ ಪ್ರಜೆಗಳಿಗೆ ಮರಣದಂಡನೆ ವಿಧಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಮರಣದಂಡನೆಗಳು...

ಯೂಸುಫ್ ಪಠಾಣ್‌ಗೆ ವಡೋದರಾದ ವಿವಾದಿತ ನಿವೇಶನ ಹಂಚಿಕೆ ಮಾಡಿದ ಗುಜರಾತ್ ಬಿಜೆಪಿ ಸರ್ಕಾರ : ಟಿಎಂಸಿ ತೊರೆದು ಎನ್‌ಡಿಎ ಬೆಂಬಲಿಸಿದ್ದಕ್ಕೆ ಗಿಫ್ಟ್?

ಲೋಕಸಭಾ ಸಂಸದ ಮತ್ತು ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರಿಗೆ ವಡೋದರಾದಲ್ಲಿರುವ 978 ಚದರ ಮೀಟರ್ ವಿಸ್ತೀರ್ಣದ ವಿವಾದಿತ ನಿವೇಶನವನ್ನು ಹಂಚಿಕೆ ಮಾಡಲು ಗುಜರಾತ್‌ನ ಬಿಜೆಪಿ ಸರ್ಕಾರವು ಅನುಮೋದನೆ ನೀಡಿದೆ. ಈ ಸಂಬಂಧ...

‘ಒಬ್ಬರೇ ಭೇಟಿಯಾಗಿದ್ದು ಯಾಕೆ?’ : ಎಪ್‌ಸ್ಟೀನ್ ಜೊತೆಗಿನ ಸಚಿವ ಹರ್ದೀಪ್ ಸಿಂಗ್ ಪುರಿ ಪೋಟೋ ಹಂಚಿಕೊಂಡು ಪ್ರತಿಪಕ್ಷ ನಾಯಕರ ಪ್ರಶ್ನೆ, ಉತ್ತರ ನೀಡಲು ಆಗ್ರಹ

ಕಾಂಗ್ರೆಸ್, ಟಿಎಂಸಿ ಮತ್ತು ಎನ್‌ಸಿಪಿ (ಎಸ್‌ಪಿ) ಸೇರಿದಂತೆ ವಿರೋಧ ಪಕ್ಷದ ನಾಯಕರು, ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೀನ್ ಅನ್ನು ಭೇಟಿಯಾಗಿರುವ ಫೋಟೋ...

ಸಿಎಂಆರ್‌ಎಲ್-ಎಕ್ಸಾಲಾಜಿಕ್ ಪ್ರಕರಣ: ಪಿಣರಾಯಿ ವಿಜಯನ್ ವಿರುದ್ಧದ ತನಿಖೆಗೆ 7 ದಿನಗಳ ತಡೆ ನೀಡಿದ ಸುಪ್ರೀಂ ಕೋರ್ಟ್: ಹೈಕೋರ್ಟ್‌ನಲ್ಲಿ ಮೇಲ್ಮನವಿಗೆ ಅವಕಾಶ

ಖಾಸಗಿ ಕಂಪನಿಯಿಂದ ಅಕ್ರಮ ಹಣಕಾಸು ವ್ಯವಹಾರ ನಡೆಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ 'ಸಿಎಂಆರ್‌ಎಲ್-ಎಕ್ಸಾಲಾಜಿಕ್' ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಅವರ ಪುತ್ರಿ ವೀಣಾ ಟಿ. ಹಾಗೂ ಅಳಿಯ, ಮಾಜಿ ಸಚಿವ...

ನ್ಯಾಯಾಂಗ ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಸಿಜೆಪಿಯ ಸೌರವ್ – ಅಶುತೋಷ್

ಪ್ರತಿಭಟನಾ ಸ್ಥಳವಲ್ಲ ಎಂದು ಅಧಿಸೂಚನೆ ಹೊರಡಿಸಲಾಗಿರುವ ಜಂತರ್ ಮಂತರ್‌ನಲ್ಲಿ ರಾಷ್ಟ್ರಧವಜ ಹಾರಿಸಿ ಬಂಧನಕ್ಕೊಳಗಾಗಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಮುಖಂಡರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ, ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (ಎಸ್‌ಇಎಂ)...

ಆಂಧ್ರ ಪ್ರದೇಶ ಮುನ್ಸಿಪಲ್ ಚುನಾವಣೆ: ವೈಎಸ್‌ಆರ್‌ಸಿಪಿ ಅರ್ಜಿ ಪರಿಶೀಲಿಸಿ ನಾಳೆಯೊಳಗೆ ತೀರ್ಮಾನಿಸಿ; ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ನಿರ್ದೇಶನ!

ಆಂಧ್ರಪ್ರದೇಶದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ವೇಳೆ ವ್ಯಾಪಕ ಹಿಂಸಾಚಾರ ನಡೆಸಿ, ತಮ್ಮ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸದಂತೆ ತಡೆಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ನೇತೃತ್ವದ ಪ್ರಮುಖ...

ಸಿಜೆಪಿ ನಾಯಕರು – ನೇಹಾ ಬೋರಾ ಅರ್ಜಿಗಳ ತುರ್ತು ವಿಚಾರಣೆಗೆ ಒಪ್ಪಿದ ದೆಹಲಿ ಹೈಕೋರ್ಟ್‌

ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (ಎಸ್‌ಇಎಂ) ತಮ್ಮ ನ್ಯಾಯಾಂಗ ಬಂಧನವನ್ನು ವಿಸ್ತರಿಸಿರುವುದನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಮುಖಂಡರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಸಲ್ಲಿಸಿರುವ ಅರ್ಜಿಯನ್ನು ಬುಧವಾರ (ಅ.21) ವಿಚಾರಣೆ...

ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಜೆಎನ್‌ಯು : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಬಿಟ್ಟ ವಿದ್ಯಾರ್ಥಿಗಳು

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘದ (JNUSU) ಸದಸ್ಯರು ಮಂಗಳವಾರ (ಅಕ್ಟೋಬರ್ 20) ತಮ್ಮ 17 ದಿನಗಳ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ. ವಿದ್ಯಾರ್ಥಿ ಪ್ರತಿನಿಧಿಗಳು ಮತ್ತು ವಿಶ್ವವಿದ್ಯಾಲಯದ ಡೀನ್ ನೇತೃತ್ವದ ಸಮಿತಿಯ ನಡುವೆ...