ರಾಜಸ್ಥಾನದ ಕೋಟಾದಲ್ಲಿ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಂದು ಭಾಗ ಕುಸಿದಿದೆ. ಕುಸಿದು ಬಿದ್ದ ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಸುರಂಗ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ ಭಾಗವಾಗಿದೆ ಎಂದು ಕೋಟಾ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸುಜಿತ್ ಶಂಕರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ರಾಮಗಂಜ್ ಮಂಡಿಯ ಮೋದಕ್ ಪ್ರದೇಶದಲ್ಲಿ ಶನಿವಾರ ರಾತ್ರಿ ಅದರ ಒಂದು ಭಾಗ ಕುಸಿದಿದೆ ಎಂದು ಅವರು ಹೇಳಿದರು.
ಕಟ್ಟಡ ನಿರ್ಮಾಣ ಸ್ಥಳದಲ್ಲಿ ಕೂಲಿಕಾರರು ಮಾಹಿತಿ ನೀಡಲು ಜಮಾಯಿಸಿದಾಗ ಈ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಶಂಶೇರ್ ಸಿಂಗ್ (33) ಎಂದು ಗುರುತಿಸಲಾಗಿದೆ.
ಘಟನೆಯ ನಂತರ ಪೊಲೀಸರು ಮತ್ತು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಗಾಯಾಳುಗಳನ್ನು ಕೋಟಾದ ಆಸ್ಪತ್ರೆಗೆ ರವಾನಿಸಲಾಗಿದ್ದು, ಮೃತ ವ್ಯಕ್ತಿಯ ಶವವನ್ನು ಶವಾಗಾರದಲ್ಲಿ ಇರಿಸಲಾಗಿದೆ.
ಇದನ್ನೂ ಓದಿ; ಆಂಧ್ರಪ್ರದೇಶ: ವೈಎಸ್‌ಆರ್ ಕಾಂಗ್ರೆಸ್ ಆಡಳಿತದ ವಕ್ಫ್ ಮಂಡಳಿ ಆದೇಶ ರದ್ದುಗೊಳಿಸಿದ ನಾಯ್ಡು ಸರ್ಕಾರ


