ಸಂಘಪರಿವಾರ ಹಿನ್ನೆಲೆಯ ‘ಭಾರತ ವಿಕಾಸ ಸಂಗಮ ಸಂಸ್ಥೆ’ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಭಾಗವಹಿಸುತ್ತಾರೆ ಎಂಬ ಆಹ್ವಾನ ಪತ್ರಿಕೆ ವಿವಾದ ಸೃಷ್ಟಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. “ನಾನು ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ, ನನಗೆ ಅಧಿಕೃತ ಆಹ್ವಾನವೂ ಬಂದಿಲ್ಲ” ಎಂದು ಇಂದು ಹೇಳಿದ್ದಾರೆ.
ಈ ಬಗ್ಗೆ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, “ಭಾರತ ವಿಕಾಸ ಸಂಗಮ ಸಂಸ್ಥೆಯವರು ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವ ಉದ್ಘಾಟನೆಯ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಮುದ್ರಣವಾಗಿರುವದನ್ನು ಗಮನಿಸಿದ್ದೇನೆ. ಈ ಬಗ್ಗೆ ನನಗೆ ಅಧಿಕೃತ ಆಹ್ವಾನ ಬಂದಿಲ್ಲ. ಈ ಕಾರ್ಯಕ್ರಮವನ್ನು ಆಯೋಜಿಸಿರುವ ಸಂಸ್ಥೆಯ ಹಿನ್ನೆಲೆಯ ವಿವರವನ್ನು ತರಿಸಿ ಪರಿಶೀಲಿಸಿದ ನಂತರ ಅದರಲ್ಲಿ ಭಾಗವಹಿಸದೆ ಇರಲು ತೀರ್ಮಾನಿಸಿದ್ದೇನೆ” ಎಂದು ಹೇಳಿದ್ದಾರೆ.
ಭಾರತ ವಿಕಾಸ ಸಂಗಮ ಸಂಸ್ಥೆಯವರು ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವ ಉದ್ಘಾಟನೆಯ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಮುದ್ರಣವಾಗಿರುವದನ್ನು ಗಮನಿಸಿದ್ದೇನೆ.
ಈ ಬಗ್ಗೆ ನನಗೆ ಅಧಿಕೃತ ಆಹ್ವಾನ ಬಂದಿಲ್ಲ.ಈ ಕಾರ್ಯಕ್ರಮವನ್ನು ಆಯೋಜಿಸಿರುವ ಸಂಸ್ಥೆಯ ಹಿನ್ನೆಲೆಯ ವಿವರವನ್ನು ತರಿಸಿ ಪರಿಶೀಲಿಸಿದ ನಂತರ ಅದರಲ್ಲಿ ಭಾಗವಹಿಸದೆ ಇರಲು…
— Siddaramaiah (@siddaramaiah) December 1, 2024
2025ರ ಜನವರಿ ತಿಂಗಳಲ್ಲಿ ಕಲಬುರ್ಗಿಯ ಸೇಡಂನಲ್ಲಿ ಭಾರತ ವಿಕಾಸ ಸಂಗಮ ಎಂಬ ಸಂಸ್ಥೆಯು ‘ಭಾರತೀಯ ಸಂಸ್ಕೃತಿ ಉತ್ಸವ-7’ ಎಂಬ ಕಾರ್ಯಕ್ರಮ ಆಯೋಜಿಸಿದೆ. ಆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂಬ ಮಾಹಿತಿಯೊಂದಿಗೆ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇತ್ತೀಚೆಗೆ ನಡೆದ 75ನೇ ಸಂವಿಧಾನ ದಿನಾಚರಣೆ ಸೇರಿದಂತೆ ಹಲವು ಭಾರಿ ಸಂಘಪರಿವಾರದ ವಿರುದ್ಧ ನೇರ ವಾಗ್ದಾಳಿ ನಡೆಸಿರುವ ಸಿದ್ದರಾಮಯ್ಯ ಅವರು, ಸೈದ್ಧಾಂತಿಕವಾಗಿ ವಿರೋಧಿಸುತ್ತಾರೆ. ಅವರು ಈ ಕಾರ್ಯಕ್ರಮದಲ್ಲಿ ಭಾಗಿಯಾತ್ತಿದ್ದಾರೆ ಎಂಬದು ಸಾಕಷ್ಟು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಕೆಲವರು ಸಿದ್ದರಾಮಯ್ಯ ಅವರು ನೇರವಾಗಿ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದರು.
ವಿವಾದ ತೀವ್ರವಾಗುತ್ತಿದ್ದಂತೆಯೇ, ಊಹಾಪೋಹ ಹಾಗೂ ಚರ್ಚೆಗೆ ಸಿಎಂ ತೆರೆ ಎಳೆದಿದ್ದಾರೆ. ಸಂಘಪರಿವಾರದ ಕಾರ್ಯಕ್ರಮದಲ್ಲಿ ತಾವು ಭಾಗವಹಿಸುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ; ಹೋರಾಟಗಳು ಫ್ರೀಡಂ ಪಾರ್ಕಿಗೆ ಮಾತ್ರ ಸೀಮಿತ; ಆದೇಶ ಹಿಂಪಡೆಯುವಂತೆ ‘ಹೋರಾಟದ ಹಕ್ಕಿಗಾಗಿ ಜನಾಂದೋಲನ’ ಆಗ್ರಹ


