Homeಮುಖಪುಟಮಹಾರಾಷ್ಟ್ರ | ಚುನಾವಣಾ ಆಯೋಗಕ್ಕೆ ಸವಾಲು : ಗ್ರಾಮಸ್ಥರಿಂದ ಮರು ಮತದಾನ

ಮಹಾರಾಷ್ಟ್ರ | ಚುನಾವಣಾ ಆಯೋಗಕ್ಕೆ ಸವಾಲು : ಗ್ರಾಮಸ್ಥರಿಂದ ಮರು ಮತದಾನ

- Advertisement -
- Advertisement -

ನವೆಂಬರ್ 23ರಂದು ಪ್ರಕಟಗೊಂಡ ವಿಧಾನಸಭಾ ಚುನಾವಣೆಯ ಫಲಿತಾಂಶದ ಅಂಕಿ-ಅಂಶಗಳಿಂದ ಅಸಮಧಾನಗೊಂಡಿರುವ ಮಹಾರಾಷ್ಟ್ರದ ಗ್ರಾಮವೊಂದರ ಜನರು, ತಾವೇ ಖಾಸಗಿಯಾಗಿ ಇಂದು (ಡಿ.3) ಮರು ಮತದಾನ ಆಯೋಜಿಸಿದ್ದಾರೆ.

ಮಹಾರಾಷ್ಟ್ರದ ಸೊಲ್ಲಾಪುರದ ಮಾಲ್ಶಿರಾಸ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮರ್ಕಡವಾಡಿ ಗ್ರಾಮದ ಜನರು ಬ್ಯಾಲೆಟ್ ಪೇಪರ್ (ಮತ ಪತ್ರ) ಬಳಸಿ ಮರು ಮತದಾನ ನಡೆಸಲಿದ್ದಾರೆ.

ಪರಿಶಿಷ್ಟ ಜಾತಿಗೆ (ಎಸ್‌ಟಿ) ಮೀಸಲಾದ ಮಾಲ್ಶಿರಾಸ್ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಎನ್‌ಸಿಪಿ (ಎಸ್‌ಪಿ) ಅಭ್ಯರ್ಥಿ ಉತ್ತಮ್ ಜನ್ಕರ್ ಅವರು ಬಿಜೆಪಿ ಅಭ್ಯರ್ಥಿ ರಾಮ್ ಸತುಪ್ತೆ ವಿರುದ್ದ ಜಯಗಳಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸೋತರೂ ಅವರು ಮರ್ಕಡವಾಡಿ ಗ್ರಾಮದಲ್ಲಿ ಪಡೆದ ಮತಗಳ ಸಂಖ್ಯೆ ಗೆದ್ದ ಅಭ್ಯರ್ಥಿಗಿಂತ ಹೆಚ್ಚಿದೆ. ಇದು ಗ್ರಾಮಸ್ಥರ ಅಸಮಾಧಾನಕ್ಕೆ ಕಾರಣವಾಗಿದೆ.

ಗ್ರಾಮದಲ್ಲಿ ಹೆಚ್ಚಿನ ಮತದಾರರು ಗೆದ್ದ ಎನ್‌ಸಿಪಿ ಅಭ್ಯರ್ಥಿಯ ಬೆಂಬಲಿಗರಿದ್ದೇವೆ. ನಮ್ಮ ಮತಗಳೆಲ್ಲ ಅವರಿಗೇ ಹೋಗಿದೆ. ಹೀಗಿದ್ದರೂ, ಬಿಜೆಪಿ ಅಭ್ಯರ್ಥಿ ಹೆಚ್ಚಿನ ಮತ ಪಡೆಯಲು ಹೇಗೆ ಸಾಧ್ಯ? ಚುನಾವಣಾ ಆಯೋಗದ ಅಂಕಿ-ಅಂಶಗಳು ಸರಿಯಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಗ್ರಾಮಸ್ಥರಾದ ರಂಜೀತ್ ಮರ್ಕಡ್ ಈ ಬಗ್ಗೆ ಹೇಳಿಕೆ ನೀಡಿ “ನವೆಂಬರ್ 20ರಂದು ನಡೆದ ಚುನಾವಣೆಯಲ್ಲಿ ಗ್ರಾಮದ 2000 ಮಂದಿ ಅರ್ಹ ಮತದಾರರ ಪೈಕಿ 1900ಕ್ಕೂ ಹೆಚ್ಚು ಮಂದಿ ಮತ ಚಲಾಯಿಸಿದ್ದರು. ನಮ್ಮ ಗ್ರಾಮದಲ್ಲಿ ಮತದಾರರು ಜನ್ಕರ್ ಮತ್ತು ಮೋಹಿತೆ ಪಾಟೀಲ್ ಕುಟುಂಬವನ್ನು ಬೆಂಬಲಿಸುತ್ತಾ ಬಂದಿದ್ದರು. ಆದರೆ, ಈ ಬಾರಿ ಜನ್ಕರ್‌ಗೆ 843 ಮತಗಳು ಬಂದಿದ್ದರೆ, ಸಾತ್ಪುತೆ 1003 ಮತಗಳನ್ನು ಪಡೆದಿದ್ದಾರೆ. ಚುನಾವಣಾ ಆಯೋಗದ ಅಂಕಿ ಅಂಶದ ಬಗ್ಗೆ ನಂಬಿಕೆ ಇಲ್ಲ. ಆದ್ದರಿಂದ ಡಿಸೆಂಬರ್ 3ರಂದು ಮತಪತ್ರಗಳ ಮೂಲಕ ಮರು ಮತದಾನ ಆಯೋಜಿಸಿ, ಮತ ಹಂಚಿಕೆ ಬಗ್ಗೆ ಪುರಾವೆ ತೋರಿಸಲಿದ್ದೇವೆ” ಎಂದು ಹೇಳಿದ್ದಾರೆ.

ವರದಿಗಳ ಪ್ರಕಾರ, ಗ್ರಾಮಸ್ಥರೇ ಹಣ ಸಂಗ್ರಹಿಸಿ ಎಲ್ಲಾ ಅಭ್ಯರ್ಥಿಗಳ ಭಾವಚಿತ್ರ ಹಾಗೂ ಹೆಸರನ್ನು ಒಳಗೊಂಡ ಮತಪತ್ರ ಮುದ್ರಿಸಿದ್ದಾರೆ. ಮತಪತ್ರದ ಮೂಲಕ ತಮ್ಮ ಹಕ್ಕು ಚಲಾಯಿಸುವಂತೆ ಬ್ಯಾನರ್‌ಗಳನ್ನೂ ಗ್ರಾಮದಲ್ಲಿ ಹಾಕಲಾಗಿದೆ. ಇಡೀ ಪ್ರಕ್ರಿಯೆಯನ್ನು ನಾವು ಅನುಸರಿಸಲಿದ್ದು, ಗ್ರಾಮಸ್ಥರೆಲ್ಲರೂ ಮತ ಚಲಾಯಿಸುವಂತೆ ಕೋರಿದ್ದೇವೆ ಎಂದು ಮತ್ತೋರ್ವ ಗ್ರಾಮಸ್ಥ ಅಮಿತ್ ವಾಘ್ಮೋರೆ ವಿವರಿಸಿದ್ದಾರೆ.

ಗ್ರಾಮಸ್ಥರ ಚುನಾವಣಾ ಪ್ರಕ್ರಿಯೆಯ ಮೇಲ್ವಿಚಾರಣೆ ಮಾಡಲು ಸರ್ಕಾರಿ ಅಧಿಕಾರಿಯನ್ನು ನೇಮಿಸುವಂತೆ ಕೋರಲಾಗಿತ್ತು. ಅದನ್ನು ತಿರಸ್ಕರಿಸಲಾಗಿದೆ ಎಂದು ವರದಿಯಾಗಿದೆ.

ಗ್ರಾಮಸ್ಥರ ನಡೆಗೆ ಸೊಲ್ಲಾಪುರ ಜಿಲ್ಲಾಡಳಿತ ಕಳವಳ ವ್ಯಕ್ತಪಡಿಸಿದ್ದು, ಇಂತಹ ಕ್ರಮಗಳು ಉದ್ವಿಗ್ನತೆಗೆ ಕಾರಣವಾಗಬಹುದು ಎಂದು ಎಚ್ಚರಿಸಿದೆ. ಖಾಸಗಿಯಾಗಿ ಮರು ಮತದಾನ ಮಾಡದಂತೆ ಸೂಚಿಸಿ ಹಲವು ಗ್ರಾಮಸ್ಥರಿಗೆ ಜಿಲ್ಲಾಡಳಿತ ನೋಟಿಸ್ ನೀಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಸೊಲ್ಲಾಪುರ ಎಸ್ಪಿ ಅತುಲ್ ಕುಲಕರ್ಣಿ ಮಾತನಾಡಿ, “ನಾವು ಮುಂಜಾಗ್ರತಾ ಸೂಚನೆಗಳನ್ನು ನೀಡಿದ್ದೇವೆ. ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ಗ್ರಾಮಸ್ಥರೊಂದಿಗೆ ಸಹಕರಿಸಲು ಮನವಿ ಮಾಡಿದ್ದೇವೆ. ಅನಧಿಕೃತ ಮರು ಮತದಾನ ಕೈಬಿಡುವಂತೆ ಜಿಲ್ಲಾಡಳಿತ ಮನವೊಲಿಸುವ ಪ್ರಯತ್ನ ಮಾಡುತ್ತಿದೆ” ಎಂದಿದ್ದಾರೆ.

ಎಚ್ಚರಿಕೆಗಳ ನಡುವೆಯೂ “ನಾವು ಮರು ಮತದಾನ ನಡೆಸಿಯೇ ತೀರುತ್ತೇವೆ” ಎಂದು ಗ್ರಾಮಸ್ಥರು ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ನೂತನ ಶಾಸಕ ಉತ್ತಮ್ ಜನ್ಕರ್, ” ಗ್ರಾಮಸ್ಥರು ದೃಢ ಸಂಕಲ್ಪ ಮಾಡಿದ್ದಾರೆ. ಅವರು ಯಾವುದೇ ಸಮಸ್ಯೆಯಿಲ್ಲದೆ ಚುನಾವಣೆ ನಡೆಸಲಿದ್ದಾರೆ” ಎಂದಿದ್ದಾರೆ.

ಇದನ್ನೂ ಓದಿ : ‘ಶೀಘ್ರದಲ್ಲೇ ಹೊಸ ವಕ್ಫ್ ಬೋರ್ಡ್ ರಚಿಸಲಾಗುವುದು..’; ಆಂಧ್ರಪ್ರದೇಶ ಸರ್ಕಾರದಿಂದ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...