Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ...

ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ ಗೆಲುವಿಗೆ ಸಂಭ್ರಮಿಸುತ್ತಿರುವುದೂ ಅಲ್ಲ

- Advertisement -
- Advertisement -

”ಕೇರಳದ ವಯನಾಡ್‌ನಲ್ಲಿ ಇತ್ತಿಚೆಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಗೆಲುವನ್ನು ಆಚರಿಸುತ್ತಿರುವ ಕೇರಳ ಕಾಂಗ್ರೆಸ್‌ನ ಮಾಧ್ಯಮ ಮುಖ್ಯಸ್ಥ ಮೊಹಮ್ಮದ್ ಮುಜಾಹಿದ್ ಇಸ್ಲಾಂ” ಎಂದು ಪ್ರತಿಪಾದಿಸಿ ವ್ಯಕ್ತಿಯೊಬ್ಬ ಹಸುವಿನ ತಲೆಗೆ ಗುಂಡು ಹಾರಿಸಿ ಕೊಲ್ಲುತ್ತಿರುವ ವಿಡಿಯೊವನ್ನು ಬಿಜೆಪಿ ಬೆಂಬಲಿಗರು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಫ್ಯಾಕ್ಟ್‌ಚೆಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ವಿಡಿಯೊವನ್ನು 2023ರ ಮೇ ತಿಂಗಳಲ್ಲಿ ಕೂಡಾ ವೈರಲ್ ಮಾಡಲಾಗಿತ್ತು. ಆಗಿನ ಸಂದೇಶದಲ್ಲಿ ಈ ವಿಡಿಯೊವನ್ನು ರಾಹುಲ್ ಗಾಂಧಿ ಅವರ ಗೆಲುವಿನ ಆಚರಣೆ ಎಂದು ಪ್ರತಿಪಾದಿಸಲಾಗಿತ್ತು. ವಿಡಿಯೊ ಇಂಗ್ಲಿಷ್, ಹಿಂದಿ ಮತ್ತು ಕನ್ನಡ ಭಾಷೆಗಳಲ್ಲಿ ವ್ಯಾಪಕವಾಗಿ ಹರಡಲಾಗುತ್ತಿದೆ. ಅವುಗಳನ್ನು ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್
ಪೇಸ್‌ಬುಕ್‌ನಲ್ಲಿ ವಿಡಿಯೊ ಹರಡುತ್ತಿದ್ದು, ಅವುಗಳನ್ನು ಇಲ್ಲಿ ಕ್ಲಿಕ್ ಮಾಡಿ ನೋಡಬಹುದು

ಫ್ಯಾಕ್ಟ್‌ಚೆಕ್

ವಾಸ್ತವದಲ್ಲಿ ಪ್ರಿಯಾಂಕ ಗಾಂಧಿ ಅವರ ವಯನಾಡು ಗೆಲುವಿಗೂ, ಈ ವಿಡಿಯೊಗೂ ಯಾವುದೆ ಸಂಬಂಧವಿಲ್ಲ. ವರದಿಗಳ ಪ್ರಕಾರ ಈ ವಿಡಿಯೋ ಹೆಚ್ಚಾಗಿ ಮಣಿಪುರದ್ದಾಗಿದ್ದು, 2024ರ ಮೇ ತಿಂಗಳಿನದ್ದಾಗಿದೆ. ವಯನಾಡ್ ಉಪಚುನಾವಣೆ ನವೆಂಬರ್ 13 ರಂದು ನಡೆದಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಸಲಾಯಿತು. ಇದರರ್ಥ ವೈರಲ್ ವೀಡಿಯೊ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಗೆಲುವಿಗಿಂತಲೂ ಆರು ತಿಂಗಳಿಗಿಂತ ಹೆಚ್ಚು ಮುಂಚಿನದ್ದಾಗಿದೆ.

ಈ ವಿಡಿಯೊವನ್ನು 2024ರ ಮೇ 9ರಂದು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಲಾಗಿತ್ತು. ಈ ಪೋಸ್ಟ್‌ನಲ್ಲಿ ವೈರಲ್ ವೀಡಿಯೊದ ಸ್ಕ್ರೀನ್‌ಶಾಟ್ ಹೊಂದಿದೆ. ಚಿತ್ರದ ಶೀರ್ಷಿಕೆಯಲ್ಲಿ, “ಮಣಿಪುರದಲ್ಲಿ ಹಸುವಿನ ಮೇಲೆ ಎರಡು ಬಾರಿ ಗುಂಡು ಹಾರಿಸಿ ಹತ್ಯೆ” ಎಂದು ಬರೆಯಲಾಗಿದೆ.

7 ಮೇ 2024 ರಂದು ಫ್ರೀ ಪ್ರೆಸ್ ಜರ್ನಲ್ ಈ ಘಟನೆಯ ವರದಿ ಮಾಡಿದೆ. ವರದಿಯಲ್ಲಿ, ಘಟನೆಯು ಮಣಿಪುರದಲ್ಲಿ ನಡೆದಿದೆ ಎಂದು ಉಲ್ಲೇಖಿಸಿದೆ. ಕೆಲವು ಸಾಮಾಜಿಕ ಮಾಧ್ಯಮ ಬಳಕೆದಾದರರು, ಹಸುವಿಗೆ ಗುಂಡು ಹಾರಿಸಿದ ವ್ಯಕ್ತಿ “ಕ್ರಿಶ್ಚಿಯನ್ ಕುಕಿ ಬಂಡುಕೋರ” ಎಂದು ಹೇಳಿದ್ದಾರೆ.

ಫ್ಯಾಕ್ಟ್‌ಚೆಕ್

ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದಲ್ಲಿ ಮೈತೇಯಿ ಸಮುದಾಯಕ್ಕೆ ಸೇರಿದ ಸಾಕು ಪ್ರಾಣಿಗಳನ್ನು ಕಳ್ಳತನ ಮಾಡಿ ಕ್ರೂರವಾಗಿ ಕೊಲ್ಲಲಾಗುತ್ತಿದ್ದು, ಈ ಮೂಲಕ ಕುಕಿ ಬಂಡುಕೋರರು ತಮ್ಮ ದ್ವೇಷ ತೀರಿಸಿಕೊಳ್ಳುತ್ತಿದ್ದಾರೆ ಎಂದು ಪ್ರತಿಪಾದಿಸಲಾಗಿದೆ.

ಅಷ್ಟೆ ಅಲ್ಲದೆ, ಮೇ 7 ರಂದು, ಪೇಟಾ ಇಂಡಿಯಾ ಕೂಡಾ ಘಟನೆಗೆ ಪ್ರತಿಕ್ರಿಯಿಸಿದ್ದು, ವೀಡಿಯೊದಲ್ಲಿರುವ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಲು ಮತ್ತು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಮಣಿಪುರ ಪೊಲೀಸರ ಸೈಬರ್ ಕ್ರೈಮ್ ಸೆಲ್‌ನೊಂದಿಗೆ ತಂಡವು ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿತ್ತು.

ಅಷ್ಟೆ ಅಲ್ಲದೆ, ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ದೀಪ್ತಿ ಮೇರಿ ವರ್ಗೀಸ್ ಅವರು ಕೇರಳ ಕಾಂಗ್ರೆಸ್‌ನ ಮಾಧ್ಯಮ ಮುಖ್ಯಸ್ಥೆ ಎಂದು ಸ್ವತಃ ಖಚಿತಪಡಿಸಿದ್ದಾರೆ. ಜೊತೆಗೆ ಅವರ ತಂಡದಲ್ಲಿ ಮೊಹಮ್ಮದ್ ಮುಜಾಹಿದ್ ಇಸ್ಲಾಂ ಎಂದು ಯಾರೂ ಇರಲಿಲ್ಲ ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಹೇಳಬೇಕಾದರೆ, ಈ ವಿಡಿಯೊ ಕೇರಳದ್ದಲ್ಲ, ಜೊತೆಗೆ ರಾಹುಲ್ ಅಥವಾ ಪ್ರಿಯಾಂಕಾ ಗಾಂಧಿ ಅವರ ಗೆಲುವು ಸಂಭ್ರಮಿಸಲು ಹಸುವಿಗೆ ಗುಂಡು ಹಾರಿಸಿದ್ದೂ ಅಲ್ಲ. ಅಷ್ಟೆ ಅಲ್ಲದೆ, ವ್ಯಕ್ತಿಯು ಮುಸ್ಲಿಂ ಕೂಡಾ ಅಲ್ಲ. ಬಿಜೆಪಿಯ ಬೆಂಬಲಿಗರು ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ವಿಚಾರ ಸುಳ್ಳಾಗಿದೆ.

ಇದನ್ನೂ ಓದಿ: ಕನಿಮೋಳಿ, ಪೆರಿಯಾರ್ ಪ್ರತಿಮೆ ಕುರಿತು ವಿವಾದಾತ್ಮಕ ಹೇಳಿಕೆ; ತಮಿಳುನಾಡು ಬಿಜೆಪಿ ನಾಯಕನಿಗೆ 6 ತಿಂಗಳ ಜೈಲು ಶಿಕ್ಷೆ

ಕನಿಮೋಳಿ, ಪೆರಿಯಾರ್ ಪ್ರತಿಮೆ ಕುರಿತು ವಿವಾದಾತ್ಮಕ ಹೇಳಿಕೆ; ತಮಿಳುನಾಡು ಬಿಜೆಪಿ ನಾಯಕನಿಗೆ 6 ತಿಂಗಳ ಜೈಲು ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...