Homeಮುಖಪುಟ'ದೇಶದ ಸೌಹಾರ್ದತೆ ದುರ್ಬಲವಾಗಿಲ್ಲ' | ಹೋರಾಟಗಾರ ನದೀಮ್ ಖಾನ್‌ ಬಂಧನ ಪ್ರಕರಣದ ವಿಚಾರಣೆ ವೇಳೆ ದೆಹಲಿ...

‘ದೇಶದ ಸೌಹಾರ್ದತೆ ದುರ್ಬಲವಾಗಿಲ್ಲ’ | ಹೋರಾಟಗಾರ ನದೀಮ್ ಖಾನ್‌ ಬಂಧನ ಪ್ರಕರಣದ ವಿಚಾರಣೆ ವೇಳೆ ದೆಹಲಿ ಪೊಲೀಸರಿಗೆ ಹೈಕೋರ್ಟ್ ತಪರಾಕಿ

- Advertisement -
- Advertisement -

ಮಾನವ ಹಕ್ಕುಗಳ ಹೋರಾಟಗಾರ ನದೀಮ್ ಖಾನ್‌ ಅವರಿಗೆ ದೆಹಲಿ ಹೈಕೋರ್ಟ್ ಬುಧವಾರ ಬಂಧನದಿಂದ ಮಧ್ಯಂತರ ಜಾಮೀನು ನೀಡಿದ್ದು, ಈ ವೇಳೆ ದೆಹಲಿ ಪೊಲೀಸರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಅವರ ಭಾಷಣವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಪೊಲೀಸರು, ‘ದ್ವೇಷಕ್ಕೆ ಉತ್ತೇಜನ ಮತ್ತು ಕ್ರಿಮಿನಲ್ ಪಿತೂರಿ’ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ರಾಷ್ಟ್ರದ ಸೌಹಾರ್ಧತೆ ಅಷ್ಟೊಂದು ದುರ್ಬಲವಾಗಿಲ್ಲ ಎಂದು ಹೇಳಿದೆ. 

ನಾಗರಿಕ ಹಕ್ಕುಗಳ ರಕ್ಷಣೆ ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿಯಾಗಿರುವ ನದೀಂ ಖಾನ್‌ ಅವರನ್ನು ಶುಕ್ರವಾರದವರೆಗೆ ಬಂಧಿಸದಂತೆ ಮಧ್ಯಂತರ ರಕ್ಷಣೆ ನೀಡಿ ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಆದರೆ, ನಾಳೆ ವಿಚಾರಣೆಗೆ ಹಾಜರಾಗುವಂತೆ ಮತ್ತು ತನಿಖೆಗೆ ಸಹಕರಿಸುವಂತೆ ನದೀಂ ಖಾನ್‌ಗೆ ಕೋರ್ಟ್ ಸೂಚಿಸಿದೆ. ಹೋರಾಟಗಾರ ನದೀಮ್ ಖಾನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತನಿಖಾಧಿಕಾರಿಗಳ ಅನುಮತಿಯಿಲ್ಲದೆ ದೆಹಲಿಯನ್ನು ತೊರೆಯದಂತೆ ಅವರಿಗೆ ನಿರ್ದೇಶನ ನೀಡಲಾಗಿದ್ದು, ಜೊತೆಗೆ ನದೀಂ ಖಾನ್‌ ಮತ್ತು ಎಪಿಸಿಆರ್ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿ ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ನೋಟಿಸ್ ಜಾರಿ ಮಾಡಿದ್ದಾರೆ. ದೆಹಲಿ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದುಗೊಳಿಸುವಂತೆ ನದೀಂ ಖಾನ್ ಕೋರಿದ್ದರು.

ದೆಹಲಿ ಪೊಲೀಸರ ಎಫ್ಐಆರ್‌ ಪ್ರಕಾರ, ನವೆಂಬರ್ 21ರಂದು “ರೆಕಾರ್ಡ್ಸ್ ಆಫ್ ಹಿಂದೂಸ್ತಾನ್ ಇನ್ ಮೋದಿ ಸರ್ಕಾರ್” ಎಂಬ ಶೀರ್ಷಿಕೆಯ ವಿಡಿಯೋವನ್ನು ಯೂಟ್ಯೂಬ್‌ ನಲ್ಲಿ ಪೋಸ್ಟ್ ಮಾಡಲಾಗಿತ್ತು. ವಸ್ತು ಪ್ರದರ್ಶನದಲ್ಲಿ ಸ್ಟಾಲ್ ಹಾಕಿದ್ದ ವ್ಯಕ್ತಿಯೊಬ್ಬರು ಬ್ಯಾನರ್‌ನತ್ತ ಸನ್ನೆ ಮಾಡುತ್ತಿದ್ದುದನ್ನು ಈ ವಿಡಿಯೋ ತೋರಿಸಿದೆ.

ಈ ವಿಡಿಯೋದಲ್ಲಿ ನದೀಮ್ ಅವರು, ಅಖ್ಲಾಕ್, ರೋಹಿತ್ ವೇಮುಲಾ, ಪೆಹ್ಲು ಖಾನ್ ಅವರ ಬಗ್ಗೆ ಮಾತನಾಡುತ್ತಿದ್ದರು ಮತ್ತು 2020ರ ಶಾಹೀನ್ ಬಾಗ್ ಪ್ರತಿಭಟನೆಗಳು, ದೆಹಲಿ ಗಲಭೆಗಳನ್ನು ಇಲ್ಲಿ ಉಲ್ಲೇಖಿಸಿದ್ದಾರೆ. ಆ ಮೂಲಕ ನಿರ್ದಿಷ್ಟ ಸಮುದಾಯವನ್ನು ಬಲಿಪಶುಗಳಾಗಿ ಚಿತ್ರಿಸಿ ಜನರನ್ನು ಪ್ರಚೋದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸ್ಟಾಲ್ ಅನ್ನು ಎಪಿಸಿಆರ್ ವತಿಯಿಂದ ಹಾಕಲಾಗಿದ್ದು ವಿಡಿಯೋದಲ್ಲಿ ಮಾತನಾಡುತ್ತಿರುವ ವ್ಯಕ್ತಿ ಖಾನ್ ಎಂದು ಪೊಲೀಸರು ಆರೋಪಿಸಿದ್ದಾರೆ.

ಜಾಮೀನು ನೀಡುವಾಗ ಹೈಕೋರ್ಟ್, “ನಾವು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿದ್ದೇವೆ. ನಮ್ಮ ರಾಷ್ಟ್ರದ ಸೌಹಾರ್ದತೆ ಅಷ್ಟೊಂದು ದುರ್ಬಲವಾಗಿಲ್ಲ. ಇದು ಕೇವಲ ಒಂದು ಪ್ರದರ್ಶನ, ಕೇವಲ ಯಾರಾದರೂ ಕೂಗಿದ ಕೂಡಲೆ ಸೌಹಾರ್ದ ಕೆಡುವುದಿಲ್ಲ. ಜನರನ್ನು ಬುದ್ದಿವಂತರೆಂದು ಪರಿಗಣಿಸಿ… ಸಾಮಾನ್ಯ ಮನುಷ್ಯರು ಅಷ್ಟು ದುರ್ಬಲನಲ್ಲ…” ಎಂದು ಹೇಳಿದೆ.

“ದೇಶವು ನಮ್ಮ ಮೂಲಭೂತ ಹಕ್ಕುಗಳ ಬಗ್ಗೆ ಬಹಳ ಹೆಮ್ಮೆಪಡುತ್ತದೆ. ಆರ್ಟಿಕಲ್ 19 (1) (ಎ) ಅನ್ನು ರಕ್ಷಿಸಬೇಕು. ಇದರಿಂದ ಒಬ್ಬ ಸಾಮಾನ್ಯ ವ್ಯಕ್ತಿ ಪ್ರಚೋದನೆಗೆ ಒಳಗಾಗುತ್ತಾನೆ ಎಂದು ನೀವು ಭಾವಿಸಿದರೆ, ಸಾಮಾನ್ಯ ಮನುಷ್ಯನಿಗೆ ಏನೆಂದು ಅರ್ಥಮಾಡಿಕೊಳ್ಳುವ ಐಕ್ಯೂ ಇಲ್ಲ ಎಂದರ್ಥ. ಅವರಿಗೆ ಇದು ಸರಿ… ನಾವು ಬುದ್ದಿವಂತರು ದಯವಿಟ್ಟು ಸಾಮಾನ್ಯರ ಮೇಲೆ ಸ್ವಲ್ಪ ನಂಬಿಕೆ ಇಡಿ.” ಎಂದು ಕೋರ್ಟ್ ಹೇಳಿದೆ.

ನದೀಂ ಖಾನ್ ಅವರ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್, ವಕೀಲರಾದ ತಾರಾ ನರುಲಾ, ತಮನ್ನಾ ಪಂಕಜ್, ಶಿವಂಗಿ ಶರ್ಮಾ, ಅಹ್ಮದ್ ಇಬ್ರಾಹಿಂ ಮತ್ತು ರೂಪಾಲಿ ಸ್ಯಾಮ್ಯುಯೆಲ್ ಪ್ರತಿನಿಧಿಸಿದರು. ಮುಂದಿನ ಶುಕ್ರವಾರದಂದು ನ್ಯಾಯಾಲಯವು ಈ ಪ್ರಕರಣದ ವಿಚಾರಣೆಗೆ ಸಿದ್ಧವಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ ಗೆಲುವಿಗೆ ಸಂಭ್ರಮಿಸುತ್ತಿರುವುದೂ ಅಲ್ಲ

ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ ಗೆಲುವಿಗೆ ಸಂಭ್ರಮಿಸುತ್ತಿರುವುದೂ ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...