Homeಕರ್ನಾಟಕಪೇಜಾವರ ಸ್ವಾಮಿ ನಡೆ ಮತೀಯವಾದಿ ನಾಯಕರಂತಿದೆ : ಬಿ.ಕೆ ಹರಿಪ್ರಸಾದ್

ಪೇಜಾವರ ಸ್ವಾಮಿ ನಡೆ ಮತೀಯವಾದಿ ನಾಯಕರಂತಿದೆ : ಬಿ.ಕೆ ಹರಿಪ್ರಸಾದ್

- Advertisement -
- Advertisement -

“ನಮ್ಮನ್ನೂ ಗೌರವಿಸುವ ಸಂವಿಧಾನ ಬರಲಿ” ಎಂದು ಹೇಳಿಕೆ ಕೊಟ್ಟು, ನಂತರ “ನಾನು ಸಂವಿಧಾನ ವಿರುದ್ದ ಮಾತಾನಾಡಿಯೇ ಇಲ್ಲ” ಎಂದಿರುವ ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮಿ ವಿರುದ್ದ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಕಿಡಿಕಾರಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಹರಿಪ್ರಸಾದ್, “ಸಂವಿಧಾನ ಬದಲಾವಣೆಯ ಮುಂಚೂಣಿಯ ನಾಯಕರಂತೆ ವರ್ತಿಸುತ್ತಿದ್ದ ಪೇಜಾವರರು, ತಮ್ಮ ಹೇಳಿಕೆಗಳು ಹಾಗೂ ನಡವಳಿಕೆಗಳಿಂದ ಪ್ರಜ್ಞಾವಂತ ಸಮಾಜ ತಿರುಗಿ ಬಿದ್ದಿರುವುದನ್ನ ನೋಡಿ “ನಾನು ಸಂವಿಧಾನ ವಿರೋಧಿ ಹೇಳಿಕೆಯೇ ನೀಡಿಲ್ಲ” ಎಂದು ತಾವೇ ಆಡಿದ ಮಾತುಗಳನ್ನು ತಿರುಚಿಕೊಳ್ಳುತ್ತಿರುವುದು ವಿಪರ್ಯಾಸ” ಎಂದಿದ್ದಾರೆ.

ಸಮಾಜ ದಾರಿ ತಪ್ಪಿದರೆ ತಿದ್ದುವ ಹಾಗೂ ಧರ್ಮದೊಳಗಿನ ಸಹಬಾಳ್ವೆಯ ತಿರುಳನ್ನು ತಿಳಿ ಹೇಳುವ ಸ್ವಾಮೀಜಿಗಳೇ ಸಮಾಜವನ್ನು ದಾರಿತಪ್ಪಿಸುತ್ತಿರುವುದು ಸ್ವಾಸ್ಥ್ಯ ಸಮಾಜವನ್ನು ಒಡೆಯುವ ಹುನ್ನಾರ ಮಾತ್ರವಲ್ಲ ಪೇಜಾವವರ ನಡೆಗಳು ಮತೀಯವಾದಿ ಸಂಘಟನೆ ನಾಯಕರಂತೆ ಕಾಣುತ್ತಿದೆ ಎಂದು ಹೇಳಿದ್ದಾರೆ.

ಸಂವಿಧಾನದಡಿಯಲ್ಲಿ ಚುನಾಯಿತ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿಯ ಮಾಧ್ಯಮ ವಕ್ತಾರರಂತೆ “ಅಲ್ಪಸಂಖ್ಯಾತರನ್ನು ಓಲೈಕೆ ಮಾಡುತ್ತಿದ್ದಾರೆ” ಎಂದು ಬಹಿರಂಗ ಹೇಳಿಕೆ ನೀಡುವುದು ಪೇಜಾವರರು ಬಿಜೆಪಿ ಪಕ್ಷದ ನಿಷ್ಟೆಯನ್ನು ಪದೇ ಪದೇ ಸಾಬೀತು ಮಾಡುತ್ತಿರುವಂತಿದೆ. ಆಧಾರ ಇಲ್ಲದೇ ಒಂದು ಸರ್ಕಾರದ ಮೇಲೆ ಗಂಭೀರ ಆರೋಪಗಳನ್ನು ಮಾಡುವುದು ಯತಿಗಳಾದಂತವರಿಗೆ ತರವಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಸಂವಿಧಾನದ ವಿರೋಧಿ ನಿಲುವುಗಳಿಂದ ದಲಿತರು, ಬಹುಜನ ಶೋಷಿತ ಸಮುದಾಯಗಳ ಆಕ್ರೋಶವನ್ನು ಎದುರಿಸಲಾಗದೆ ಪೇಜಾವರರು ಅಲ್ಪಸಂಖ್ಯಾತರ ವಿರುದ್ಧ ಮಾತಾಡುವ ಮೂಲಕ ಚರ್ಚೆಯನ್ನೇ ದಾರಿ ತಪ್ಪಿಸುತ್ತಿದ್ದಾರೆ. ಸಂವಿಧಾನ ಮೂಲಕವೇ ಆಯ್ಕೆಯಾಗಿ ಸಂವಿಧಾನ ಬದಲಾವಣೆಯ ಹೇಳಿಕೆ ನೀಡಿದ ಬಿಜೆಪಿಯ ನಾಯಕರಿಗೆ ಸಾರ್ವಜನಿಕ ಜೀವನದಲ್ಲಿ ಯೋಗ್ಯತೆಯೇ ಇಲ್ಲ ಎಂದು ಜನರು ತಕ್ಕ ಉತ್ತರ ನೀಡಿದ್ದಾರೆ. ಅಂತಹ ದುರ್ದೈವ ಪೇಜಾವರರು ಬರ ಮಾಡಿಕೊಳ್ಳದೇ ಇರಲಿ ಎಂದಿದ್ದಾರೆ.

ಸಂವಿಧಾನದ ವಿರುದ್ಧ ತಮಗಿರುವ ಅಸಹನೆ, ಆಕ್ರೋಶವನ್ನು ಸಾಬೀತು ಮಾಡುತ್ತಿರುವ ಪೇಜಾವರರು, ಇದೇ ಸಂವಿಧಾನದಡಿಯಲ್ಲಿ ರಕ್ಷಣೆ ಪಡೆಯುತ್ತಿರುವುದನ್ನು ಮರೆಯಬಾರದು. ತಮಗೆ ಗೌರವ ನೀಡುವ ಸಂವಿಧಾನ ಬರಲಿ ಎಂದ ರಾಜ್ಯದ ಸಂವಿಧಾನದ ರಕ್ಷಕರಾಗಿರುವ ರಾಜ್ಯಪಾಲರಿಗೆ ಮನವಿ ನೀಡುವುದು ಅತ್ಯಂತ ಖಂಡನೀಯ. ಕೂಡಲೇ ರಾಜ್ಯಪಾಲರು ಸಂವಿಧಾನ ವಿರೋಧಿ ಮನಸ್ಥಿತಿ ಸ್ವಾಮೀಜಿಗಳ ಮೇಲೆ ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯಿಸುತ್ತೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಬಿಜೆಪಿ ನಾಯಕ ನಳಿನ್ ಕುಮಾರ್ ಕಟೀಲ್ ವಿರುದ್ಧದ ಚುನಾವಣಾ ಬಾಂಡ್ ‘ಸುಲಿಗೆ’ ಎಫ್‌ಐಆರ್ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...