Homeಮುಖಪುಟಸರಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಲೈಂಗಿಕ ದೌರ್ಜನ್ಯ: ಆಂತರಿಕ ದೂರು ಸಮಿತಿ ರಚಿಸಿ: ಸುಪ್ರೀಂ ಕೋರ್ಟ್‌

ಸರಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಲೈಂಗಿಕ ದೌರ್ಜನ್ಯ: ಆಂತರಿಕ ದೂರು ಸಮಿತಿ ರಚಿಸಿ: ಸುಪ್ರೀಂ ಕೋರ್ಟ್‌

- Advertisement -
- Advertisement -

ನವದೆಹಲಿ: ಸರಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಕಾಯ್ದೆ-2013 ಅನ್ನು ಸಮರ್ಪಕವಾಗಿ ಜಾರಿಗೆ ತರುವ ನಿಟ್ಟಿನಲ್ಲಿ ಸರಕಾರಿ ಇಲಾಖೆಗಳಲ್ಲಿ ಆಂತರಿಕ ದೂರು ಸಮಿತಿ ರಚಿಸುವಂತೆ ಎಲ್ಲ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಈ ಆಂತರಿಕ ದೂರು ಸಮಿತಿ ರಚಿಸುವ ಸಂಬಂಧ ಕೆಲವು ನಿರ್ದೇಶನಗಳನ್ನು ನೀಡಿರುವ ನ್ಯಾಯಾಧೀಶರಾದ ಬಿ.ವಿ.ನಾಗರತ್ನ ಮತ್ತು ಎನ್. ಕೋಟೀಶ್ವರ್  ಸಿಂಗ್‌ ಅವರಿದ್ದ ವಿಭಾಗೀಯ ಪೀಠ ಈ ಕಾಯ್ದೆಯನ್ನು ದೇಶದೆಲ್ಲೆಡೆ ಏಕರೂಪದಲ್ಲಿ ಜಾರಿಗೊಳಿಸಬೇಕು ಎಂದು ಹೇಳಿದೆ.

ಡಿ.31ರ ಪೂರ್ವದಲ್ಲಿ ಎಲ್ಲಾ ರಾಜ್ಯಗಳು ಪ್ರತಿ ಜಿಲ್ಲೆಗೆ  ಈ ಆಂತರಿಕ ದೂರು ಸಮಿತಿಗೆ ಸಂಬಂಧಿಸಿ ಒಬ್ಬ ಅಧಿಕಾರಿಯನ್ನು ನೇಮಕಾತಿ ಮಾಡಿರಬೇಕು. ಆ ಅಧಿಕಾರಿಯು ಸ್ಥಳೀಯ ದೂರು ಸಮಿತಿಯನ್ನು ಜ.31ಕ್ಕೆ ಮೊದಲು ರಚನೆ ಮಾಡಿರಬೇಕು, ತಾಲ್ಲೂಕು ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿರಬೇಕು ಎಂದು ಸೂಚನೆ ನೀಡಲಾಗಿದೆ.

ಸರಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಆಂತರಿಕ ದೂರು ಸಮಿತಿಯನ್ನು ರಚಿಸಲಾಗಿದೆಯೇ ಎಂಬ ಕುರಿತು ಆಯಾ ಜಿಲ್ಲಾಧಿಕಾರಿಗಳು ವರದಿ ಸಲ್ಲಿಸಬೇಕು ಎಂದು ನ್ಯಾಯಾಲಯವು ನಿರ್ದೇಶಿಸಿದೆ.

ಈ ಸುಪ್ರೀಂ ಕೋರ್ಟಿನ ಸೂಚನೆಗಳ ಪಾಲನೆಗೆ  ಮಾ.31ರವರೆಗೆ ಸಮಯವನ್ನು ನಿಗಧಿಪಡಿಸಿದೆ. ಸೂಚನೆಗಳನ್ನು ಜಾರಿಗೆ ತರುವ ಕುರಿತು ಸರಕಾರದ ಮುಖ್ಯ ಕಾರ್ಯದರ್ಶಿ ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದೆ.

ಮಹಿಳೆಯರ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದ ಆರೋಪಗಳನ್ನು ತನಿಖೆ ಮಾಡಲು ಸಮಿತಿಗಳನ್ನು ಎಲ್ಲ ಸಚಿವಾಲಯ ಹಾಗೂ ಇಲಾಖೆಗಳಲ್ಲಿ ರಚಿಸಲಾಗಿದೆಯೇ ಎಂಬುದನ್ನು ಕಾಲಮಿತಿಯಲ್ಲಿ ಪರಿಶೀಲಿಸುವಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ 2023ರ ಮೇ ನಲ್ಲಿ ನ್ಯಾಯಾಲಯ ಸೂಚಿಸಿತ್ತು. ಇದರ ಜಾರಿಗೆ ಸಂಬಂಧಿಸಿದ ಒಂದು ಅರ್ಜಿಯ ವಿಚಾರಣೆ ನಡೆಸಿದ ಪೀಠವು ಈ ಸೂಚನೆಗಳನ್ನು ನೀಡಿದೆ.

2031ರ ಕಾಯ್ದೆಯ ಜಾರಿಯ ವಿಚಾರದಲ್ಲಿ ದೀರ್ಘ್‌ಕಾಲ ಗಂಭೀರ ಲೋಪಗಳು ಉಳಿದಿವೆ ಎಂದು ಸುಪ್ರೀಂ ಕೋರ್ಟ್ ಆತಂಕ ವ್ಯಕ್ತಪಡಿಸಿದೆ.

ಇದನ್ನೂ ಓದಿ…ಕದನ ವಿರಾಮ ಮುರಿದ ಇಸ್ರೇಲ್‌ : ಲೆಬನಾನ್‌ ಮೇಲೆ ದಾಳಿ ; 11 ಜನರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...