Homeಮುಖಪುಟಯುಪಿ ಪೊಲೀಸರ ಎಫ್ಐಆರ್ ಪ್ರಶ್ನಿಸಿ ಪತ್ರಕರ್ತ ಝುಬೈರ್ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್...

ಯುಪಿ ಪೊಲೀಸರ ಎಫ್ಐಆರ್ ಪ್ರಶ್ನಿಸಿ ಪತ್ರಕರ್ತ ಝುಬೈರ್ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್ ಪೀಠ

- Advertisement -
- Advertisement -

‘ಧಾರ್ಮಿಕ ಗುಂಪುಗಳ ನಡುವೆ ದ್ವೇಷ ಉತ್ತೇಜಿಸಿದ ಆರೋಪ’ದ ಮೇಲೆ ತನ್ನ ವಿರುದ್ದ ದಾಖಲಾಗಿರುವ ಪ್ರಕರಣವನ್ನು ಪ್ರಶ್ನಿಸಿ ಆಲ್ಟ್ ನ್ಯೂಸ್‌ನ ಸಹ ಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಝುಬೈರ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯಿಂದ ಅಲಹಾಬಾದ್ ಹೈಕೋರ್ಟ್ ಪೀಠ ಹಿಂದೆ ಸರಿದಿದೆ ಎಂದು ವರದಿಯಾಗಿದೆ.

ನ್ಯಾಯಮೂರ್ತಿಗಳಾದ ಮಹೇಶ್ ಚಂದ್ರ ತ್ರಿಪಾಠಿ ಮತ್ತು ಪ್ರಶಾಂತ್ ಕುಮಾರ್ ಅವರ ಪೀಠ ಅರ್ಜಿಯ ವಿಚಾರಣೆಯಿಂದ ಸ್ವಯಂ ಹಿಂದೆ ಸರಿದಿದೆ ಎಂದು ವರದಿ ಹೇಳಿದೆ.

ಯತಿ ನರಸಿಂಹಾನಂದ ಸರಸ್ವತಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಉದಿತಾ ತ್ಯಾಗಿ ಅವರ ದೂರಿನ ಆಧಾರದ ಮೇಲೆ ಉತ್ತರ ಪ್ರದೇಶದ ಗಾಝಿಯಾಬಾದ್ ಪೊಲೀಸರು ಝುಬೈರ್ ವಿರುದ್ದ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 152 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಝುಬೈರ್ ಭಾರತದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟು ಮಾಡುವ ಕೃತ್ಯಗಳನ್ನು ಮಾಡಿರುವ ಅಪರಾಧ ಹೊರಿಸಿದ್ದಾರೆ.

ಝುಬೈರ್ ವಿರುದ್ದದ ಪ್ರಕರಣ ಯತಿ ನರಸಿಂಹಾನಂದ ಮಾಡಿದ್ದ ದ್ವೇಷ ಭಾಷಣದ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಾಕಿದ್ದ ಪೋಸ್ಟ್‌ಗೆ ಸಂಬಂಧಿಸಿದೆ.

ಗುರುವಾರ (ಡಿ.3) ನ್ಯಾಯಮೂರ್ತಿಗಳಾದ ಮಹೇಶ್ ಚಂದ್ರ ತ್ರಿಪಾಠಿ ಮತ್ತು ಪ್ರಶಾಂತ್ ಕುಮಾರ್ ಅವರ ಪೀಠವು, ಝುಬೈರ್ ಅರ್ಜಿಯನ್ನು ಕೈಗೆತ್ತಿಕೊಂಡು ಸುಮಾರು 20 ನಿಮಿಷಗಳ ಕಾಲ ವಿಚಾರಣೆ ನಡೆಸಿತು. ಬಳಿಕ ವಿಚಾರಣೆಯಿಂದ ಹಿಂದೆ ಸರಿಯಿತು. ಮತ್ತೊಂದು ಪೀಠದ ಮುಂದೆ ಪ್ರಕರಣವನ್ನು ಪಟ್ಟಿ ಮಾಡುವಂತೆ ನ್ಯಾಯಾಲಯದ ರಿಜಿಸ್ಟ್ರಿಗೆ ಸೂಚಿಸಿತು.

ಈ ವರ್ಷದ ಅಕ್ಟೋಬರ್ 3ರಂದು ಝುಬೈರ್ ಎಕ್ಸ್‌ನಲ್ಲಿ ಮೂರು ಪೋಸ್ಟ್‌ಗಳನ್ನು ಹಾಕಿದ್ದರು. ಈ ಪೈಕಿ ಮೊದಲನೆಯದ್ದು, ದಾಸ್ನಾ ದೇವಿ ದೇವಸ್ಥಾನದ ಅರ್ಚಕ ಯತಿ ನರಸಿಂಹಾನಂದ ಅವರು ಸೆಪ್ಟೆಂಬರ್ 29 ರಂದು ಗಾಝಿಯಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರವಾದಿ ಮುಹಮ್ಮದರ ಬಗ್ಗೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿರುವ ವಿಡಿಯೋವನ್ನು ಒಳಗೊಂಡಿತ್ತು.

ಝುಬೈರ್ ಪೋಸ್ಟ್ ಮಾಡಿದ್ದ ವಿಡಿಯೋದಲ್ಲಿ , ದ್ವೇಷ ಭಾಷಣದಲ್ಲಿ ಕುಖ್ಯಾತಿ ಪಡೆದಿರುವ ಯತಿ ನರಸಿಂಹಾನಂದ, ಪ್ರವಾದಿ ಮುಹಮ್ಮದರ ಪ್ರತಿಕೃತಿಯನ್ನು ಸುಡುವಂತೆ ಕರೆ ಕೊಟ್ಟಿದ್ದ ದೃಶ್ಯವಿತ್ತು. ಯತಿ ನರಸಿಂಹಾನಂದನ ಪ್ರವಾದಿ ವಿರುದ್ದದ ಕರೆ ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಆಕ್ರೋಶಕ್ಕೆ ಕಾರಣವಾಗಿತ್ತು. ನರಸಿಂಹಾನಂದನ ವಿರುದ್ದ ಕಠಿಣ ಕ್ರಮಕ್ಕೆ ಮುಸ್ಲಿಮರು ಒತ್ತಾಯಿಸಿದ್ದರು.

ಎರಡನೇ ಪೋಸ್ಟ್‌ನಲ್ಲಿ ಝುಬೈರ್ ಅವರು “ಯತಿ ನರಸಿಂಹಾನಂದನನ್ನು ಬೆಂಬಲಿಸುವವರಿಗೆ, ಯತಿ ನರಸಿಂಹಾನಂದ ಸರಸ್ವತಿ ಮಹಾರಾಜ್ ಅವರು ರಾಜಕೀಯದಲ್ಲಿರುವ ಮಹಿಳೆಯರ ಬಗ್ಗೆ, ವಿಶೇಷವಾಗಿ ರಾಜಕೀಯದಲ್ಲಿರುವ ಬಿಜೆಪಿ ಮಹಿಳಾ ನಾಯಕರ ಬಗ್ಗೆ (2021) ಕೆಟ್ಟ ಹೇಳಿಕೆಗಳನ್ನು ನೀಡಿರುವ ವಿಡಿಯೋ ಇಲ್ಲಿದೆ” ಎಂದು ಬರೆದುಕೊಂಡಿದ್ದರು. ಜೊತೆಗೆ ನರಸಿಂಹಾನಂದ ಮಹಿಳಾ ರಾಜಕಾರಣಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ವಿಡಿಯೋ ಹಂಚಿಕೊಂಡಿದ್ದರು. 2022 ರಲ್ಲಿ ಪೃಥ್ವಿರಾಜ್ ಚವಾಣ್ ಕುರಿತು ನರಸಿಂಹಾನಂದ ನೀಡಿದ್ದ ಅವಹೇಳನಕಾರಿ ಹೇಳಿಕೆಯ ವಿಡಿಯೋ ಕೂಡ ಅದರ ಜೊತೆಗೆ ಇತ್ತು.

ಯತಿ ನರಸಿಂಹಾನಂದ ಅವರ ಹಳೆಯ ಕೋಮುದ್ವೇಷದ, ಮಹಿಳಾ ವಿರೋಧಿ ಹೇಳಿಕೆಗಳ ವಿಡಿಯೋಗಳನ್ನು ಹಂಚಿಕೊಂಡಿದ್ದಕ್ಕೆ ಝುಬೈರ್ ವಿರುದ್ದ ನರಸಿಂಹಾನಂದ ಟ್ರಸ್ಟ್‌ನ ಉದಿತಾ ತ್ಯಾಗಿ ದೂರು ದಾಖಲಿಸಿದ್ದರು. ಮುಸ್ಲಿಮರನ್ನು ನರಸಿಂಹಾನಂದ ವಿರುದ್ದ ಎತ್ತಿಕಟ್ಟಿ ಹಿಂಸಾಚಾರವನ್ನು ಪ್ರಚೋದಿಸುವ ಸಲುವಾಗಿ ಝುಬೈರ್ ಹಳೆಯ ವಿಡಿಯೋಗಳನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.

ಉದಿತಾ ತ್ಯಾಗಿ ದೂರು ಸ್ವೀಕರಿಸಿದ ಪೊಲೀಸರು, ಬಿಎನ್‌ಎಸ್‌ ಸೆಕ್ಷನ್‌ಗಳಾದ 196 (ಧಾರ್ಮಿಕ ಆಧಾರದ ಮೇಲೆ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 228 (ಸುಳ್ಳು ಪುರಾವೆಗಳನ್ನು ಸೃಷ್ಟಿಸುವುದು), 299 (ಧಾರ್ಮಿಕ ಭಾವನೆಗಳನ್ನು ಅತಿರೇಕಗೊಳಿಸುವುದು), 356 (3) (ಮಾನನಷ್ಟ), ಮತ್ತು 351 (2) (ಅಪರಾಧ ಬೆದರಿಕೆ) ಅಡಿಯಲ್ಲಿ ಝುಬೈರ್ ವಿರುದ್ದ ಎಫ್‌ಐಆರ್ ದಾಖಲಿಸಿದ್ದರು.

ಎಫ್ಐಆರ್ ಪ್ರಶ್ನಿಸಿ ಮತ್ತು ಬಂಧನದಿಂದ ರಕ್ಷಣೆ ಕೋರಿ ಝುಬೈರ್ ಅಲಹಾಬಾದ್ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಝುಬೈರ್ ವಿರುದ್ಧದ ಆರೋಪಗಳನ್ನು ನಿರ್ದಿಷ್ಟಪಡಿಸಿ ಅಫಿಡವಿಟ್ ಸಲ್ಲಿಸುವಂತೆ ತನಿಖಾಧಿಕಾರಿಗೆ ಸೂಚಿಸಿತ್ತು. ಅದರಂತೆ ನವೆಂಬರ್ 27 ರಂದು ತನಿಖಾಧಿಕಾರಿ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದ್ದರು. ಆ ಅಫಿಡವಿಟ್‌ನಲ್ಲಿ ಐಟಿ ಕಾಯ್ದೆಯ ಸೆಕ್ಷನ್ 66 (ಕಂಪ್ಯೂಟರ್ ಸಂಬಂಧಿತ ಅಪರಾಧಗಳು) ಮತ್ತು ಬಿಎನ್‌ಎಸ್‌ ಸೆಕ್ಷನ್ 152 (ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಕೃತ್ಯ) ಅಡಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದರು.

ನರಸಿಂಹಾನಂದರ ಹೇಳಿಕೆಗಳ ಬಗ್ಗೆ ಅಧಿಕಾರಿಗಳಿಗೆ ತಿಳಿಸಲು ಮತ್ತು ಕಾನೂನು ಕ್ರಮಕ್ಕೆ ಸಲಹೆ ನೀಡುವ ಉದ್ದೇಶದಿಂದ ಹಳೆಯ ವಿಡಿಯೋಗಳನ್ನು ಪೋಸ್ಟ್ ಮಾಡಿದ್ದೆ ಎಂದು ಝುಬೈರ್ ನ್ಯಾಯಾಲಯದಲ್ಲಿ ವಾದಿಸಿದ್ದರು. ನನ್ನ ಪೋಸ್ಟ್ ಹಿಂಸಾಚಾರ ಉತ್ತೇಜಿಸಲು ಸಾಧ್ಯವಿಲ್ಲ ಎಂದಿದ್ದರು. ನರಸಿಂಹಾನಂದರ ಹೇಳಿಕೆಯ ವಿಡಿಯೋ ಸಾರ್ವಜನಿಕ ವೇದಿಕೆಗಳಲ್ಲಿ ಇರುವುದರಿಂದ, ಅದನ್ನು ಹಂಚಿಕೊಳ್ಳುವುದರಿಂದ ಮಾನನಷ್ಟವಾಗುವುದಿಲ್ಲ ಎಂದು ಹೇಳಿದ್ದರು.

ಯತಿ ನರಸಿಂಹಾನಂದರ ಆಪಾದಿತ ಕ್ರಿಮಿನಲ್ ಚಟುವಟಿಕೆಗಳನ್ನು ಬಹಿರಂಗಪಡಿಸಿದ್ದಕ್ಕಾಗಿ ನನ್ನ ಮೇಲೆ ಎಫ್‌ಐಆರ್ ಹಾಕಿ ಧ್ವನಿ ಅಡಗಿಸಲು ದುರುದ್ದೇಶಪೂರಿತ ಪ್ರಯತ್ನ ಮಾಡಲಾಗಿದೆ ಎಂದು ಝುಬೈರ್ ಆರೋಪಿಸಿದ್ದರು.

ಇದನ್ನೂ ಓದಿ : ಸರಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಲೈಂಗಿಕ ದೌರ್ಜನ್ಯ: ಆಂತರಿಕ ದೂರು ಸಮಿತಿ ರಚಿಸಿ: ಸುಪ್ರೀಂ ಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...