Homeಮುಖಪುಟಚಂದ್ರಬಾಬು ನಾಯ್ಡು ವಿರುದ್ಧದ ಸಿಐಡಿ ತನಿಖೆ ನೇತೃತ್ವ ವಹಿಸಿದ್ದ ಅಧಿಕಾರಿ ಅಮಾನತು

ಚಂದ್ರಬಾಬು ನಾಯ್ಡು ವಿರುದ್ಧದ ಸಿಐಡಿ ತನಿಖೆ ನೇತೃತ್ವ ವಹಿಸಿದ್ದ ಅಧಿಕಾರಿ ಅಮಾನತು

- Advertisement -
- Advertisement -

ಹಿಂದಿನ ವೈಎಸ್‌ಆರ್‌ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ, ಆಂಧ್ರ ಪ್ರದೇಶ ಈಗಿನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮೇಲಿನ ಪ್ರಕರಣಗಳ ತನಿಖೆಯ ಉಸ್ತುವಾರಿ ವಹಿಸಿದ್ದ ಐಪಿಎಸ್ ಅಧಿಕಾರಿ ಎನ್‌. ಸಂಜಯ್ ಅವರನ್ನು ಸರ್ಕಾರ ಮಂಗಳವಾರ (ಡಿ.4) ಅಮಾನತು ಮಾಡಿದೆ.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಸಂಜಯ್‌ ಅವರನ್ನು ನಿಯಮಗಳ ಉಲ್ಲಂಘನೆ ಆರೋಪದ ಮೇಲೆ ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ.

ಸಂಜಯ್ ಅವರು ಜಗನ್‌ ಮೋಹನ್ ರೆಡ್ಡಿ ಸಿಎಂ ಆಗಿದ್ದ ಈ ಹಿಂದಿನ ವೈಎಸ್‌ಆರ್‌ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಆಂಧ್ರ ಪ್ರದೇಶ ಸಿಐಡಿಯ ಮುಖ್ಯಸ್ಥರಾಗಿದ್ದರು. ಆಗ ವಿರೋಧ ಪಕ್ಷದ ನಾಯಕರಾಗಿದ್ದ ಚಂದ್ರಬಾಬು ನಾಯ್ಡು ವಿರುದ್ದದ ಆಂಧ್ರ ಪ್ರದೇಶ ಕೌಶಲ್ಯ ಅಭಿವೃದ್ಧಿ ನಿಗಮದ ಹಗರಣ ಮತ್ತು ಅಮರಾವತಿ ಒಳವರ್ತುಲ ರಸ್ತೆಯ ಜೋಡಣೆ ಹಗರಣದ ತನಿಖೆಯ ಉಸ್ತುವಾರಿ ವಹಿಸಿದ್ದರು. ಸಂಜಯ್ ಅವರ ಉಸ್ತುವಾರಿಯಲ್ಲಿ ನಡೆದ ಸಿಐಡಿ ತನಿಖೆ ಚಂದ್ರಬಾಬು ನಾಯ್ಡು ಜೈಲು ಸೇರುವಂತೆ ಮಾಡಿತ್ತು.

1993ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಸಂಜಯ್ ಅವರು, ರಾಜ್ಯ ವಿಪತ್ತು ನಿರ್ವಹಣೆ ಮತ್ತು ಅಗ್ನಿಶಾಮಕ ಸೇವೆಗಳ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾಗ ಕೆಲವು ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪಗಳಿವೆ.

ಈ ಹಿನ್ನೆಲೆ ಅವರನ್ನು ಅಖಿಲ ಭಾರತ ಸೇವೆಗಳ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು, 1969 ರ ನಿಯಮ 3 (1) ಅಡಿಯಲ್ಲಿ ಅಮಾನತುಗೊಳಿಸಿ ರಾಜ್ಯ ಸರ್ಕಾರದ ಸಾಮಾನ್ಯ ಆಡಳಿತ ಇಲಾಖೆಯು ಆದೇಶ ಹೊರಡಿಸಿದೆ. ಪೊಲೀಸ್ ಪ್ರಧಾನ ಕಚೇರಿ ಬಿಟ್ಟು ತೆರಳದಂತೆ ಸೂಚಿಸಿದೆ.

ಟಿಡಿಪಿ ಚುನಾವಣೆಯಲ್ಲಿ ಗೆಲುವು ಸಾಧಿಸಿ ಚಂದ್ರಬಾಬು ನಾಯ್ಡು ಸಿಎಂ ಆದ ಬೆನ್ನಲ್ಲೇ, ಈ ವರ್ಷದ ಜೂನ್‌ನಲ್ಲಿ ಸಂಜಯ್ ಅವರನ್ನು ಸಿಐಡಿ ಮುಖ್ಯಸ್ಥ ಹುದ್ದೆಯಿಂದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹುದ್ದೆಗೆ ವರ್ಗಾಯಿಸಲಾಗಿತ್ತು.

ಸಂಜಯ್ ಅವರ ವಿರುದ್ಧದ ಆರೋಪಗಳನ್ನು ತನಿಖೆ ಮಾಡಲು ವಿಜಿಲೆನ್ಸ್ ಮತ್ತು ಎನ್‌ಫೋರ್ಸ್‌ಮೆಂಟ್ (ವಿ ಮತ್ತು ಇ) ಇಲಾಖೆಗೆ ಸರ್ಕಾರ ಆದೇಶಿಸಿದೆ.

ಸಂಜಯ್ ಅವರು ನಿಯೋಜಿತ ಕೆಲಸದಲ್ಲಿ ಯಾವುದೇ ಪ್ರಗತಿ ಮಾಡಿಲ್ಲ. ತನ್ನ ಕಚೇರಿಯನ್ನು ದುರುಪಯೋಗಪಡಿಸಿಕೊಂಡು ಸೌತ್ರಿಕಾ ಟೆಕ್ನಾಲಜೀಸ್ ಮತ್ತು ಇನ್ಫ್ರಾ ಪ್ರೈವೇಟ್ ಲಿಮಿಟೆಡ್‌ ಎಂಬ ಸಂಸ್ಥೆಗಳಿಗೆ 1 ಕೋಟಿ ರೂಪಾಯಿಗಳನ್ನು ಪಾವತಿಸಲು ಅನುಕೂಲವಾಗುವಂತೆ ಕೆಲಸ ಮಾಡಿದ್ದಾರೆ ಎಂದು ವಿ & ಇ ಇಲಾಖೆ ಆರೋಪಿಸಿದೆ.

ಸಂಜಯ್ ಅವರು ಟೆಂಡರ್ ನೀಡುವಾಗ ಬಿಡ್ ವಂಚನೆ ಮಾಡಿದ್ದಾರೆ. ಕಂಪನಿಗಳ ಪರ ಒಲವು ತೋರಿದ್ದಾರೆ. ಟೆಂಡರ್ ಪ್ರಕ್ರಿಯೆಯ ಸಮಗ್ರತೆಯಲ್ಲಿ ರಾಜಿ ಮಾಡಿಕೊಂಡಿದ್ದಾರೆ ಮತ್ತು ಸಾರ್ವಜನಿಕ ನಂಬಿಕೆಗೆ ದ್ರೋಹ ಮಾಡಿದ್ದಾರೆ ಎಂದು ದೂರಿದೆ.

ವಿಜಿಲೆನ್ಸ್ ವರದಿಯು ಕಂಪನಿಯ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲು ಮತ್ತು ಕೇಂದ್ರ ಸೇವಾ ನೀತಿ ನಿಯಮಗಳ ಅಡಿಯಲ್ಲಿ ಸಂಜಯ್ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ವಹಿಸಲು ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಟಿಡಿಪಿ ನೇತೃತ್ವದ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಡಿಜಿಪಿ ಶ್ರೇಣಿಯ ಅಧಿಕಾರಿಗಳಾದ ಪಿ.ಎಸ್.ಆರ್.ಆಂಜನೇಯುಲು ಮತ್ತು ಪಿ.ವಿ.ಸುನೀಲ್ ಕುಮಾರ್, ಹೆಚ್ಚುವರಿ ಡಿಜಿಪಿ ಎನ್.ಸಂಜಯ್, ಐಜಿಪಿಗಳಾದ ಕಂಠಿ ರಾಣಾ ಟಾಟಾ, ಜಿ.ಪಾಲ ರಾಜು ಮತ್ತು ಕೆ.ರಘುರಾಮರೆಡ್ಡಿ ಮತ್ತು ಡಿಐಜಿ ಶ್ರೇಣಿಯ ಅಧಿಕಾರಿಗಳಾದ ಆರ್.ಎನ್. ಅಮ್ಮಿ ರೆಡ್ಡಿ, ಚಿ. ವಿಜಯರಾವ್ ಮತ್ತು ವಿಶಾಲ್ ಗುನ್ನಿ ಅವರನ್ನು ವರ್ಗಾಯಿಸಿದೆ.

ಈ ಕೆಲವು ಅಧಿಕಾರಿಗಳು ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಚಂದ್ರಬಾಬು ನಾಯ್ಡು ಸೇರಿದಂತೆ ಟಿಡಿಪಿ ನಾಯಕರನ್ನು ಗುರಿಯಾಗಿಸಿಕೊಂಡ ಆರೋಪವನ್ನು ಎದುರಿಸಿದ್ದರು.

ಇದನ್ನೂ ಓದಿ : ಮದ್ಯ ನಿಷೇಧ ಕಾನೂನನ್ನು ಪರಿಶೀಲಿಸಲಿರುವ ಬಿಹಾರ ಸಿಎಂ ನಿತೀಶ್ ಕುಮಾರ್ – ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...