Homeಮುಖಪುಟನೋಯ್ಡಾ: 'ದಲಿತ ಪ್ರೇರಣಾ ಸ್ಥಳ'ದಲ್ಲಿ ಪ್ರತಿಭಟನೆ ನಡೆಸುತ್ತಿದ್ದ 160ಕ್ಕೂ ಹೆಚ್ಚು ರೈತರ ಬಂಧನ

ನೋಯ್ಡಾ: ‘ದಲಿತ ಪ್ರೇರಣಾ ಸ್ಥಳ’ದಲ್ಲಿ ಪ್ರತಿಭಟನೆ ನಡೆಸುತ್ತಿದ್ದ 160ಕ್ಕೂ ಹೆಚ್ಚು ರೈತರ ಬಂಧನ

- Advertisement -
- Advertisement -

ಭೂ ಪರಿಹಾರ ಮತ್ತು ಇತರ ಬೇಡಿಕೆಗಳಿಗಾಗಿ ದೆಹಲಿಗೆ ಪಾದಯಾತ್ರೆ ನಡೆಸುತ್ತಿರುವ ರೈತರನ್ನು ನೋಡ್ಯಾದ ‘ದಲಿತ ಪ್ರೇರಣಾ ಸ್ಥಳ’ದಲ್ಲಿ ಬಂಧಿಸಲಾಗಿದೆ. ಭಾರತೀಯ ಕಿಸಾನ್ ಪರಿಷತ್ ಅಧ್ಯಕ್ಷ ಸುಖಬೀರ್ ಖಲೀಫಾ ಸೇರಿದಂತೆ 160 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾದ ಕರೆ ಮೇರೆಗೆ ಸೋಮವಾರ ಉತ್ತರ ಪ್ರದೇಶದ ವಿವಿಧ ಭಾಗಗಳಿಂದ ಜಮಾಯಿಸಿದ ಪ್ರತಿಭಟನಾಕಾರರು ಏಳು ದಿನಗಳಲ್ಲಿ ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ರಾಷ್ಟ್ರ ರಾಜಧಾನಿಗೆ ತಮ್ಮ ಮೆರವಣಿಗೆಯನ್ನು ಪುನರಾರಂಭಿಸುವುದಾಗಿ ಎಚ್ಚರಿಕೆ ನೀಡಿದ್ದರು.

ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್‌ಎಸ್‌ಎಸ್) ಸೆಕ್ಷನ್ 170 ರ ಅಡಿಯಲ್ಲಿ ಮಧ್ಯಾಹ್ನ 1.30 ರ ಸುಮಾರಿಗೆ 160 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಕಮಿಷನರ್ (ಕಾನೂನು ಮತ್ತು ಸುವ್ಯವಸ್ಥೆ) ಶಿವ ಹರಿ ಮೀನಾ ತಿಳಿಸಿದ್ದಾರೆ.

ಈ ನಿಬಂಧನೆಯು, ನಿರೀಕ್ಷಿತ ಅಪರಾಧಗಳನ್ನು ತಡೆಗಟ್ಟಲು ಬಂಧನಗಳನ್ನು ಕೈಗೊಳ್ಳಲು ಪೊಲೀಸರಿಗೆ ಅವಕಾಶ ನೀಡುತ್ತದೆ. ಬಂಧಿತರಲ್ಲಿ ಮಹಿಳೆಯರು ಮತ್ತು ಭಾರತೀಯ ಕಿಸಾನ್ ಯೂನಿಯನ್ (ಪಶ್ಚಿಮ ಉತ್ತರ ಪ್ರದೇಶ) ರಾಜ್ಯ ಅಧ್ಯಕ್ಷರಾದ ಖಲೀಫಾ ಮತ್ತು ಪವನ್ ಖತಾನಾ ಅವರಂತಹ ಹಲವಾರು ರೈತ ಮುಖಂಡರು ಸೇರಿದ್ದಾರೆ.

ಪ್ರತಿಭಟನಾಕಾರರನ್ನು ನೋಯ್ಡಾದ ಲುಕ್ಸರ್ ಜೈಲಿಗೆ ಕರೆದೊಯ್ಯಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಮ್ಮ ಬೇಡಿಕೆಗಳು ಈಡೇರುವವರೆಗೂ ಹೋರಾಟವನ್ನು ಮುಂದುವರೆಸುವುದಾಗಿ ಖಲೀಫಾ ತಿಳಿಸಿರುವುದಾಗಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ರೈತರ ಬಂಧನವನ್ನು ಖಂಡಿಸಿ ನರೇಶ್ ಟಿಕಾಯತ್ ನೇತೃತ್ವದ ಭಾರತೀಯ ಕಿಸಾನ್ ಯೂನಿಯನ್ ಮುಜಾಫರ್‌ನಗರದಲ್ಲಿ ‘ಮಹಾ ಪಂಚಾಯತ್’ ಕರೆದಿದೆ.

ಸರ್ಕಾರ ಸ್ವಾಧೀನಪಡಿಸಿಕೊಂಡಿರುವ ಭೂಮಿಗೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿ ಸೋಮವಾರ ಮಹಾಮಾಯಾ ಮೇಲ್ಸೇತುವೆ ಬಳಿ ರೈತರು ಜಮಾಯಿಸಿ ದೆಹಲಿಗೆ ತೆರಳಿದ್ದರು. ಆದರೆ, ಅವರನ್ನು ದಲಿತ ಪ್ರೇರಣಾ ಸ್ಥಳದ ಬಳಿ ಪೊಲೀಸರು ತಡೆದರು, ನಂತರ ಅವರು ಅಲ್ಲಿ ಧರಣಿ ಕುಳಿತರು.

ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಹೊಂದಿಕೆಯಾಗುವ ಮೆರವಣಿಗೆಯನ್ನು ತಡೆಯಲು ಪೊಲೀಸರು ಬಹು ಪದರಗಳ ಬ್ಯಾರಿಕೇಡ್‌ಗಳನ್ನು ಸ್ಥಾಪಿಸಿ ಭಾರೀ ಭದ್ರತೆಯನ್ನು ನಿಯೋಜಿಸಿದ್ದರಿಂದ ದೆಹಲಿ-ನೋಯ್ಡಾ ಗಡಿಯನ್ನು ದಾಟುವ ಪ್ರಯಾಣಿಕರಿಗೆ ಭಾರಿ ಟ್ರಾಫಿಕ್ ದಟ್ಟಣೆಯು ಅನಾನುಕೂಲತೆಯನ್ನು ಉಂಟುಮಾಡಿತು.

ಇದನ್ನೂ ಓದಿ; ಭೋಪಾಲ್ ಅನಿಲ ದುರಂತದ 40ನೇ ವರ್ಷಾಚರಣೆ: ಸಂತ್ರಸ್ತರು-ಚೇತರಿಸಿಕೊಂಡವರಿಂದ ನ್ಯಾಯಕ್ಕಾಗಿ ಮೆರವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...