Homeಮುಖಪುಟಅಡಕೆ ಆರೋಗ್ಯಕ್ಕೆ ಹಾನಿ: ಕೇಂದ್ರ ಅಧ್ಯಯನ

ಅಡಕೆ ಆರೋಗ್ಯಕ್ಕೆ ಹಾನಿ: ಕೇಂದ್ರ ಅಧ್ಯಯನ

- Advertisement -
- Advertisement -

ನವದೆಹಲಿ: ಅಡಕೆ ಕ್ಯಾನ್ಸರ್‌ಕಾರಕ ಎಂದು ವಿಶ್ವ ಆರೋಗ್ಯ ಸಂಸ್ಥೆ ಅಧ್ಯಯನ ವರದಿ ಪುನರುಚ್ಚರಿಸಿರುವುದು ವಿವಾದಕ್ಕೀಡಾಗಿರುವುದರಿಂದ ಕೇಂದ್ರವು ಅಡಕೆಯ ಆರೋಗ್ಯದಿಂದಾಗುವ ಪರಿಣಾಮಗಳ ಕುರಿತು ಅಧ್ಯಯನ ನಡೆಸಲು ಮುಂದಾಗಿದೆ.

ಮಂಗಳವಾರ ಲೋಕಸಭೆಯಲ್ಲಿ ಕಾಸರಗೋಡು ಸಂಸದ ರಾಜಮೋಹನ್‌ ಉಣ್ಣಿತ್ತಾನ್‌ ಅವರಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವ ಭಗೀರಥ ಚೌಧರಿ ಅವರು ಲಿಖಿತ ಉತ್ತರ ನೀಡಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯಡಿ ಕಾರ‍್ಯ ನಿರ್ವಹಿಸುವ ಇಂಟರ್‌ ನ್ಯಾಷನಲ್‌ ಏಜೆನ್ಸಿ ಫಾರ್‌ ರೀಸರ್ಚ್ ಆನ್‌ ಕ್ಯಾನ್ಸರ್‌ (ಐಎಆರ್‌ಸಿ)  ಪ್ರಕಟಿಸಿದ ಸಂಶೋಧನಾ ಲೇಖನದಲ್ಲಿ ಅಡಕೆಯಿಂದ ಕ್ಯಾನ್ಸರ್‌ ರೋಗಿಗಳ ಸಂಖ್ಯೆ ಹೆಚ್ಚಳವಾಗಿದೆ ಎಂದಿತ್ತು. ಇದರ ಕುರಿತು ವೈಜ್ಞಾನಿಕ ಅಧ್ಯಯನ ನಡೆಯಲಿ ಎಂದು ಅಡಕೆ ಬೆಳೆಗಾರ ಸಂಘಟನೆಗಳು ಒತ್ತಾಯಿಸಿದ್ದವು.

ಅಡಕೆ ಬೆಳೆಗಾರರು ಈಗ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಸರ್ಕಾರಕ್ಕೆ ಅರಿವು ಇದೆ ಎಂದು ಹೇಳಿರುವ ಕೇಂದ್ರ ಕೃಷಿ ಸಚಿವರು, ಅಡಕೆ ಆರೋಗ್ಯದ ಪರಿಣಾಮ ಕುರಿತ ವಿಶ್ವ ಆರೋಗ್ಯ ಸಂಸ್ಥೆ ಉಲ್ಲೇಖಿಸಿರುವ ಕೆಲವು ಸಂಶೋಧನಾ ಪ್ರಬಂಧಗಳು ಸತ್ಯಾಸತ್ಯತೆಯನ್ನು ತಿಳಿಯಲು ಅಧ್ಯಯನ ನಡೆಸುತ್ತೇವೆ ಎಂದಿದ್ದಾರೆ.

ಈ ವರದಿಯಲ್ಲಿ ಹುಡಿ ಅಡಕೆ ಮತ್ತು ಗುಟ್ಕಾದಂತಹ ಮಿಶ್ರಣಗಳಿಂದ ಆರೋಗ್ಯದ ಮೇಲಿನ ಪರಿಣಾಮಗಳನ್ನು ಉಲ್ಲೇಖಿಸಿದೆ. ಅದರಲ್ಲಿ ಇತರೆ ಪದಾರ್ಥಗಳ ಜೊತೆ ಅಡಕೆಯನ್ನು ಹೆಸರಿಸಲಾಗಿದೆ. ಅಡಕೆ ಪ್ರತ್ಯೇಕ ಸೇವನೆಯಿಂದ ಆರೋಗ್ಯದ ಮೇಲಿನ ಪರಿಣಾಮದ ಬಗ್ಗೆ ವರದಿಯಲ್ಲಿ ಉಲ್ಲೇಖಿಸಿಲ್ಲಎಂದು ಸಚಿವರು ಮಾಹಿತಿ ನೀಡಿದ್ದಾರೆ.

2023ರ ನವೆಂಬರ್‌ನಲ್ಲಿ ಭಾರತೀಯ ಕೃಷಿ ಸಂಶೋಧನಾ ಮಂಡಳಿ(ಐಸಿಎಆರ್‌), ಕಾಸರಗೋಡಿನ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆ(ಸಿಪಿಸಿಆರ್‌ಐ) ಕೈಗೊಂಡಿರುವ ಅಧ್ಯಯನದ ಪ್ರಕಾರ, ಅಡಕೆಯಲ್ಲಿ ಅರೆಕೋಲಿನ್‌ ಅಂಶ ಇರುವುದನ್ನು ವರದಿಗಳು ಬಹಿರಂಗಪಡಿಸಿವೆ. ಈ ಪ್ರಯೋಗದಲ್ಲಿ ಬಳಸಲಾದ ಅರೆಕೋಲಿನ್‌ ಅಂಶದ ಪ್ರಮಾಣ ಸಾಮಾನ್ಯಕ್ಕಿಂತ ಹೆಚ್ಚು ಎಂದು ಅಧ್ಯಯನದಲ್ಲಿ ತಿಳಿಸಲಾಗಿದೆ. ಆದರೆ ಕಡಿಮೆ ಪ್ರಮಾಣದಲ್ಲಿ ಅರೆಕೋಲಿನ್‌ ಬಳಕೆ ಮಾಡಿದರೆ ಹಾನಿಕಾರದ ಅಂಶವನ್ನು ತಡೆಯುತ್ತದೆ ಎಂಬ ವರದಿ ಇದೆ ಎಂದು ಸಿಪಿಸಿಆರ್‌ಐ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಸಚಿವರು ಉತ್ತರದಲ್ಲಿ ತಿಳಿಸಿದ್ದಾರೆ.

ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯವು ಅಡಕೆಯ ಔಷಧೀಯ ಗುಣಗಳ ಬಗ್ಗೆ ಸಂಶೋಧನೆ ನಡೆಸಲು ಆಸಕ್ತಿ ಹೊಂದಿದೆ. ಅಡಕೆ ಮತ್ತು ಮಾನವನ ಆರೋಗ್ಯದ ವೈಜ್ಞಾನಿಕ ಸಂಶೋಧನೆ ಶೀರ್ಷಿಕೆಯಡಿ ಅಧ್ಯಯನ ಕೈಗೊಳ್ಳಲು ಈಗಾಗಲೇ ಚಿಂತನೆ ನಡೆಸಲಾಗಿದೆ. ಈ ಅಧ್ಯಯನವು ಸುಮಾರು 16 ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಸಂಸ್ಥೆಗಳ ಮೂಲಕ ನಡೆಯಲಿದೆ ಎಂದು ಸಚಿವರು ಲೋಕಸಭೆಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ….ದಲಿತರಿಂದ ದೇವಾಲಯ ಪ್ರವೇಶ: ಪೂಜೆ ಸ್ಥಗಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...