Homeಮುಖಪುಟಸಿಎಪಿಎಫ್‌ ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ 1ಲಕ್ಷ ಹುದ್ದೆಗಳು ಖಾಲಿ - ಕೇಂದ್ರ ಸರ್ಕಾರ

ಸಿಎಪಿಎಫ್‌ ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ 1ಲಕ್ಷ ಹುದ್ದೆಗಳು ಖಾಲಿ – ಕೇಂದ್ರ ಸರ್ಕಾರ

- Advertisement -
- Advertisement -

ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳು (ಸಿಎಪಿಎಫ್) ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ 1 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿಯಿವೆ ಎಂದು ಕೇಂದ್ರ ಸರ್ಕಾರ ಬುಧವಾರ ಹೇಳಿದೆ. ಜೊತೆಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್‌ಪಿಎಫ್‌)ಯಲ್ಲಿ ಅತಿ ಹೆಚ್ಚು ಅಂದರೆ 33,730 ಹುದ್ದೆಗಳು ಖಾಲಿಯಿವೆ ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರೈ ಸದನದಲ್ಲಿ ಬಹಿರಂಗಪಡಿಸಿದ್ದಾರೆ.

ಗೃಹ ಸಚಿವಾಲಯವು ಸಿದ್ಧಪಡಿಸಿದ ಮಾಹಿತಿಯ ಪ್ರಕಾರ, 2024ರ ಅಕ್ಟೋಬರ್ 30ರ ವರೆಗೆ ಸಿಎಪಿಎಫ್ ಮತ್ತು ಅಸ್ಸಾಂ ರೈಫಲ್ಸ್‌ನ ಒಟ್ಟು ಪೋಸ್ಟ್ ಸಾಮರ್ಥ್ಯ 9,48,204 ಆಗಿತ್ತು. ಸಿಎಪಿಎಫ್‌ ಮತ್ತು ಅಸ್ಸಾಂ

ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವ ನಿತ್ಯಾನಂದ ರೈ, ಖಾಲಿ ಇರುವ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಪ್ರತಿಪಾದಿಸಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಸಿಎಪಿಎಫ್ ಮತ್ತು ಅಸ್ಸಾಂ ರೈಫಲ್ಸ್ ನಲ್ಲಿ 71,231 ಹೊಸ ಹುದ್ದೆಗಳನ್ನು ಸೃಷ್ಟಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಸಿಎಪಿಎಫ್‌ ಮತ್ತು ಅಸ್ಸಾಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಿಎಪಿಎಫ್ ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ನಿವೃತ್ತಿ, ರಾಜೀನಾಮೆಗಳು, ಬಡ್ತಿಗಳು, ಸಾವುಗಳು, ಹೊಸ ಬೆಟಾಲಿಯನ್ ಸ್ಥಾಪನೆ ಮತ್ತು ಹೊಸ ಹುದ್ದೆಗಳ ಸೃಷ್ಟಿಯಿಂದಾಗಿ ಖಾಲಿ ಹುದ್ದೆಗಳು ಉದ್ಭವಿಸುತ್ತವೆ ಎಂದು ಕೇಂದ್ರ ಸಚಿವ ಪ್ರತಿಪಾದಿಸಿದ್ದಾರೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದು ನಿರಂತರ ಪ್ರಕ್ರಿಯೆ ಎಂದು ಅವರು ಪ್ರತಿಪಾದಿಸಿದರು.

ಅಕ್ಟೋಬರ್ 30ರ ಮಾಹಿತಿಯಂತೆ, ಸಿಎಪಿಎಫ್‌ ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ 1,00,204 ಹುದ್ದೆಗಳು ಖಾಲಿ ಇವೆ ಎಂದು ಅಂಕಿ ಅಂಶಗಳು ಹೇಳಿವೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆಗಳಲ್ಲಿ 33,730 ಹುದ್ದೆಗಳು; ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್‌ನಲ್ಲಿ 31,782; ಗಡಿ ಭದ್ರತಾ ಪಡೆಯಲ್ಲಿ 12,808; ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್‌ನಲ್ಲಿ 9,861; ಸಶಸ್ತ್ರ ಸೀಮಾ ಬಲ್‌ನಲ್ಲಿ 8,646 ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ 3,377 ಹುದ್ದೆಗಳು ಖಾಲಿಯಿದ್ದವು.

ಮಂಗಳವಾರ ಸದನಕ್ಕೆ ಮಾಹಿತಿ ನೀಡಿದ್ದ ಕೇಂದ್ರ ಸರ್ಕಾರ, ದೇಶಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ವೈದ್ಯಕೀಯ ಇಂಟರ್ನ್‌ಗಳ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ತಿಳಿಸಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಪ್ರತಾಪ್ರಾವ್ ಜಾಧವ್ ನೀಡಿರುವ ಲಿಖಿತ ಉತ್ತರದಲ್ಲಿ, ದೇಶಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಆತ್ಮಹತ್ಯೆಯಿಂದ ಸಾವನ್ನಪ್ಪಿದ ವೈದ್ಯಕೀಯ ಇಂಟರ್ನ್‌ಗಳ ಅಂಕಿ ಅಂಶವನ್ನು “ಕೇಂದ್ರೀಕೃತವಾಗಿ ನಿರ್ವಹಿಸಲಾಗಿಲ್ಲ” ಎಂದು ಹೇಳಿದ್ದಾರೆ.

ಅದಾಗ್ಯೂ, ಮಾನಸಿಕ ಆರೋಗ್ಯ ಸವಾಲುಗಳನ್ನು ಎದುರಿಸಲು ಮತ್ತು ವಿದ್ಯಾರ್ಥಿಗಳ ಯೋಗಕ್ಷೇಮವನ್ನು ಉತ್ತೇಜಿಸಲು ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ವಿವಿಧ ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಸಚಿವರು ಹೇಳಿದ್ದಾರೆ.

ವೈದ್ಯಕೀಯ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮವನ್ನು ಪರಿಹರಿಸಲು ಫೆಬ್ರವರಿ 2024 ರಲ್ಲಿ NMC ಯ ರ ್ಯಾಗಿಂಗ್ ವಿರೋಧಿ ಸಮಿತಿಯು 15 ಸದಸ್ಯರ ರಾಷ್ಟ್ರೀಯ ಕಾರ್ಯಪಡೆ (NTF)ಯನ್ನು ಸ್ಥಾಪಿಸಿದೆ ಎಂದು ಅವರು ಹೇಳಿದ್ದಾರೆ.

NTF ಕೇಂದ್ರೀಕೃತ ವರದಿಯು ಆತ್ಮಹತ್ಯೆಗಳ ಮೇಲ್ವಿಚಾರಣೆಗಾಗಿ ದೃಢವಾದ ಕಾರ್ಯವಿಧಾನವನ್ನು ಅಭಿವೃದ್ಧಿಪಡಿಸುವುದು, ಬೆಂಬಲಿತ ವಾತಾವರಣವನ್ನು ಬೆಳೆಸುವುದು ಮತ್ತು ವ್ಯವಸ್ಥಿತ ಸಮಸ್ಯೆಗಳನ್ನು ಪರಿಹರಿಸುವುದು ಸೇರಿದಂತೆ ಹಲವು ವ್ಯವಸ್ಥೆಗಳನ್ನು ಸ್ಥಾಪಿಸಲು ಶಿಫಾರಸು ಮಾಡಿದೆ.

ನೊಂದ ವಿದ್ಯಾರ್ಥಿಗಳು ಮಾನಸಿಕ ಆರೋಗ್ಯ ಮತ್ತು ರ್ಯಾಗಿಂಗ್‌ಗೆ ಸಂಬಂಧಿಸಿದ ದೂರುಗಳನ್ನು ಎನ್‌ಎಂಸಿ ವೆಬ್‌ಸೈಟ್ ಮತ್ತು ಕೇಂದ್ರೀಕೃತ ಸಾರ್ವಜನಿಕ ಕುಂದುಕೊರತೆ ಪರಿಹಾರ ಮತ್ತು ಮಾನಿಟರಿಂಗ್ ಸಿಸ್ಟಮ್ (ಸಿಪಿಜಿಆರ್‌ಎಂಎಸ್) ನಂತಹ ಪೋರ್ಟಲ್‌ಗಳಲ್ಲಿ ಸಲ್ಲಿಸಬಹುದು ಎಂದು ಸಚಿವರು ಹೇಳಿದ್ದಾರೆ. ಮಾನಸಿಕ ಆರೋಗ್ಯ ಸವಾಲುಗಳನ್ನು ಎದುರಿಸಲು, ಸರ್ಕಾರವು ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮವನ್ನು (NMHP) ಸಹ ಜಾರಿಗೊಳಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ವೈದ್ಯಕೀಯ ಇಂಟರ್ನ್‌ಗಳ ಬಗ್ಗೆ ಯಾವುದೇ ಮಾಹಿತಿ ಇಲ್ಲ – ಕೇಂದ್ರ ಸರ್ಕಾರ

ಸರ್ಕಾರಿ ಆಸ್ಪತ್ರೆಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ವೈದ್ಯಕೀಯ ಇಂಟರ್ನ್‌ಗಳ ಬಗ್ಗೆ ಯಾವುದೇ ಮಾಹಿತಿ ಇಲ್ಲ – ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...