Homeಮುಖಪುಟಉತ್ತರ ಪ್ರದೇಶ | ಮುಸ್ಲಿಂ ವೈದ್ಯೆಗೆ ಮನೆ ಮಾರಿದ್ದಕ್ಕೆ ಹೌಸಿಂಗ್ ಸೊಸೈಟಿ ನಿವಾಸಿಗಳಿಂದ ಪ್ರತಿಭಟನೆ

ಉತ್ತರ ಪ್ರದೇಶ | ಮುಸ್ಲಿಂ ವೈದ್ಯೆಗೆ ಮನೆ ಮಾರಿದ್ದಕ್ಕೆ ಹೌಸಿಂಗ್ ಸೊಸೈಟಿ ನಿವಾಸಿಗಳಿಂದ ಪ್ರತಿಭಟನೆ

- Advertisement -
- Advertisement -

ಹಿಂದೂ ಪ್ರಾಬಲ್ಯದ ಪ್ರದೇಶದಲ್ಲಿ ಮುಸ್ಲಿಂ ವೈದ್ಯೆಗೆ ಮನೆ ಮಾರಾಟ ಮಾಡಿದ್ದಕ್ಕೆ, ಅಲ್ಲಿನ ನಿವಾಸಿಗಳು ಪ್ರತಿಭಟನೆ ನಡೆಸಿದ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಮೊರಾದಾಬಾದ್‌ನ ಟಿಡಿಐ ಹೌಸಿಂಗ್ ಸೊಸೈಟಿಯಲ್ಲಿ ಸುಮಾರು 450 ಹಿಂದೂ ಕುಟುಂಬಗಳು ವಾಸಿಸುತ್ತಿವೆ. ಅಲ್ಲಿ ಯಾವುದೇ ಮುಸ್ಲಿಂ ಮನೆಗಳಿಲ್ಲ. ಇಲ್ಲಿನ ನಿವಾಸಿಯಾಗಿರುವ ಡಾ. ಅಶೋಕ್ ಬಜಾಜ್ ಎಂಬವರು ತನ್ನ ಸಹೋದ್ಯೋಗಿ ಡಾ. ಇಕ್ರಾ ಚೌಧರಿ ಎಂಬವರಿಗೆ ಮನೆ ಮಾರಾಟ ಮಾಡಿದ್ದಾರೆ. ಇದಕ್ಕೆ ಹಿಂದೂ ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿ ಮಂಗಳವಾರ (ಡಿ.3) ತಡರಾತ್ರಿ ಪ್ರತಿಭಟಿಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ಮುಸ್ಲಿಂ ವೈದ್ಯೆಗೆ ಮನೆ ಮಾರಾಟ ಮಾಡಿರುವುದು ಹೌಸಿಂಗ್ ಸೊಸೈಟಿಯ ಜನಸಂಖ್ಯಾ ಬದಲಾವಣೆಗಳಿಗೆ ಕಾರಣವಾಗಬಹುದು ಮತ್ತು ಹಿಂದೂ ಕುಟುಂಬಗಳು ಈ ಪ್ರವೃತ್ತಿಯನ್ನು ಮುಂದುವರಿಸಬಹುದು ಎಂಬ ಭಯವಿದೆ. ಸಾಮಾಜಿಕ ಸಾಮರಸ್ಯ ಹಾಳಾಗಬಹುದು” ಎಂದು ಪ್ರತಿಭಟನಾಕಾರರು ಹೇಳಿದ್ದಾಗಿ ವರದಿ ತಿಳಿಸಿದೆ.

ಪ್ರತಿಭಟನಾಕಾರರಲ್ಲಿ ಒಬ್ಬರಾದ ಪಾಯಲ್ ರಸ್ತೋಗಿ ಮಾತನಾಡಿ, “ಡಾ.ಅಶೋಕ್ ಬಜಾಜ್ ನಮಗೆ ಯಾವುದೇ ಮಾಹಿತಿ ನೀಡದೆ ತನ್ನ ಮನೆಯನ್ನು ಹಿಂದೂಯೇತರರಿಗೆ ಮಾರಿದ್ದಾರೆ. ನಾವು ಇಲ್ಲಿ ಶಾಂತಿಯುತವಾಗಿ ವಾಸಿಸುತ್ತಿದ್ದೇವೆ. ಇಲ್ಲಿ ಹಿಂದೆಂದೂ ಯಾವುದೇ ಸಮಸ್ಯೆ ಇರಲಿಲ್ಲ. ಬಜಾಜ್ ಅವರು ಇಕ್ರಾ ಚೌಧರಿಗೆ ಮನೆ ನೋಂದಣಿ ಮಾಡಿ ಕೊಟ್ಟಿರುವುದನ್ನು ವಾಪಸ್ ಪಡೆಯಬೇಕು. ಈ ಬಗ್ಗೆ ನಾವು ಈಗಾಗಲೇ ಜಿಲ್ಲಾಡಳಿತ ಮತ್ತು ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದೇವೆ ಎಂದು ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವಿವರಿಸಿದೆ.

ಸೊಸೈಟಿಯ ನಿವಾಸಿ ಪಲ್ಲವಿ ಮಾತನಾಡಿ “ನಮಗೆ ಯಾವುದೇ ಸಮುದಾಯದೊಂದಿಗೆ ದ್ವೇಷವಿಲ್ಲ, ವ್ಯವಸ್ಥೆಯು ಬದಲಾಗುವುದನ್ನು ನಾವು ಬಯಸುವುದಿಲ್ಲ. ಸುಮಾರು 15 ವರ್ಷಗಳಿಂದ ಇದು ಹಿಂದೂಗಳ ಪ್ರದೇಶವಾಗಿದೆ. ಇಕ್ರಾ ಚೌಧರಿಗೆ ಮಾರಿರುವ ಮನೆಯನ್ನು ಮತ್ತೆ ಹಿಂದೂ ಹೆಸರಿಗೆ ನೋಂದಣಿ ಮಾಡುವುದು ಮುಖ್ಯ ಎಂದು ನಾವು ಭಯಸುತ್ತೇವೆ. ಇಲ್ಲವಾದರೆ, ಇಲ್ಲಿಂದ ಹಿಂದೂಗಳು ಹೊರ ಹೋಗಬಹುದು. ಎಲ್ಲವೂ ಬದಲಾಗಬಹುದು” ಎಂದಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಹಿಳೆಯರು, ಇತರ ಹಿಂದೂ ಪ್ರದೇಶಗಳಲ್ಲೂ ಮನೆಗಳು ಮುಸ್ಲಿಮರಿಗೆ ಮಾರಾಟವಾಗುವ ಆತಂಕ ವ್ಯಕ್ತಪಡಿಸಿದ್ದಾರೆ. ಒಬ್ಬರು ಮುಸ್ಲಿಮರಿಗೆ ಮನೆ ಮಾರಿದರೆ ಉಳಿದವರು ಕೂಡ ಇದನ್ನೇ ಅನುಸರಿಸಬಹುದು. ಹಾಗಾದರೆ, ಶೀಘ್ರದಲ್ಲೇ ಹಿಂದೂ ಪ್ರದೇಶಗಳ ಸ್ವರೂಪ ಬದಲಾಗಬಹುದು ಎಂದು ಹೇಳಿದ್ದಾರೆ.

ಸೊಸೈಟಿ ನಿವಾಸಿಗಳಿಂದ ದೂರು ಬಂದಿದೆ. ನಾವು ಸಮಸ್ಯೆಯನ್ನು ಶಾಂತಿಯುತವಾಗಿ ಪರಿಹರಿಸಲು ಕೆಲಸ ಮಾಡುತ್ತಿದ್ದೇವೆ. ಸೌಹಾರ್ದತೆ ಕಾಪಾಡಿಕೊಳ್ಳಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಮಾತುಕತೆ ನಡೆಸುತ್ತಿದೆ ಎಂದು ಮೊರಾದಾಬಾದ್ ಜಿಲ್ಲಾಧಿಕಾರಿ ಅನುಜ್ ಕುಮಾರ್ ಸಿಂಗ್ ತಿಳಿಸಿದ್ದಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ಹೇಳಿದೆ.

ಇದನ್ನೂ ಓದಿ : ‘ಯುಪಿ ದರೋಡೆಕೋರರ ಕಾಯಿದೆ’ ಕ್ರೂರವಾಗಿರುವಂತೆ ತೋರುತ್ತಿದೆ – ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...