ಎರಡೂವರೆ ವರ್ಷದ ಬಾಲಕಿಯ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೇರಳ ಪೊಲೀಸರು ಸರ್ಕಾರಿ ಹಾಸ್ಟೆಲ್ ಒಂದರ ಮೂವರು ಉಸ್ತುವಾರಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಅಜಿತಾ, ಮಹೇಶ್ವರಿ ಮತ್ತು ಸಿಂಧು ಎಂದು ಗುರುತಿಸಲಾಗಿದೆ. ಇವರ ಮೇಲೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಬಾಲಾಪರಾಧಿ (ಜೆಜೆ) ಕಾಯ್ದೆಯ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.
ಹಾಸಿಗೆ ಒದ್ದೆ ಮಾಡಿದ್ದಕ್ಕಾಗಿ ಮಗುವಿನ ಖಾಸಗಿ ಭಾಗಗಳಲ್ಲಿ ಗಾಯವಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದ ನಂತರ ವೈದ್ಯಕೀಯ ಪರೀಕ್ಷೆಯಲ್ಲಿ ಬೆರಳಿನ ಉಗುರಿನ ಗುರುತುಗಳು ಕಂಡುಬಂದಿವೆ. ಗಾಯವು ಪತ್ತೆಯಾಗುವ ಒಂದು ವಾರದ ಮೊದಲು ಸಂಭವಿಸಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ.
ಮಕ್ಕಳ ಕಲ್ಯಾಣ ಸಮಿತಿಯ ಪ್ರಧಾನ ಕಾರ್ಯದರ್ಶಿ ಅರುಣ್ ಗೋಪಿ ಪ್ರಕಾರ, ಘಟನೆಯ ವಾರದಲ್ಲಿ ಕರ್ತವ್ಯದಲ್ಲಿದ್ದ ಎಲ್ಲಾ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಅವರ ಪೋಷಕರು ನಿಧನರಾದಾಗಿನಿಂದ ಬಾಲಕಿ ಮತ್ತು ಆಕೆಯ ಕಿರಿಯ ಸಹೋದರಿ ಸರ್ಕಾರಿ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದಾರೆ.
ಇದನ್ನೂ ಓದಿ; ತಿರುಪತಿ ಯೂನಿವರ್ಸಿಟಿ ದಲಿತ ಪ್ರಾಧ್ಯಾಪಕರನ್ನು ಥಳಿಸಿದ ಬಜರಂಗದಳದ ಸದಸ್ಯರು: ವರದಿ


