ಸಂಸತ್ತಿನಲ್ಲಿ ಇಂದು ಹಲವಾರು ‘ಇಂಡಿಯಾ’ ಬ್ಲಾಕ್ ಪಕ್ಷಗಳ ನಾಯಕರು, ‘ಮೋದಿ ಅದಾನಿ ಏಕ್ ಹೈ’ ಮತ್ತು ‘ಅದಾನಿ ಸೇಫ್ ಹೈ’ ಎಂಬ ಸ್ಟಿಕ್ಕರ್‌ಗಳುಳ್ಳ ಕಪ್ಪು ಜಾಕೆಟ್‌ಗಳನ್ನು ಧರಿಸಿದ್ದರು. ಅದಾನಿ ಸಮಸ್ಯೆಯ ಬಗ್ಗೆ ಜಂಟಿ ಸಂಸದೀಯ ತನಿಖೆಗೆ ಒತ್ತಾಯಿಸಲು ಸಂಸತ್ತಿನ ಆವರಣದಲ್ಲಿ ಘೋಷಣೆಗಳನ್ನು ಕೂಗಿದರು.
ತಮ್ಮ ಟ್ರೇಡ್ ಮಾರ್ಕ್ ಆಗಿರುವ ಬಿಳಿ ಟೀ ಶರ್ಟ್ ಮೇಲೆ ಸ್ಟಿಕ್ಕರ್ ಅಂಟಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರು ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ವಿರುದ್ಧ ತನಿಖೆ ನಡೆಸಲು ಸಾಧ್ಯವಿಲ್ಲ. ಏಕೆಂದರೆ, ಅದು ಅವರ ವಿರುದ್ಧವೇ ತನಿಖೆ ನಡೆಸುವಂತೆ ಮಾಡುತ್ತದೆ ಎಂದು ಹೇಳಿದ್ದಾರೆ.
ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಕಾಂಗ್ರೆಸ್ ಸಂಸದರು, ಆರ್‌ಜೆಡಿ ಮತ್ತು ಎಡಪಕ್ಷಗಳಂತಹ ಹಲವಾರು ವಿರೋಧ ಪಕ್ಷಗಳ ಸಂಸದರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಲಂಚ ಮತ್ತು ವಂಚನೆ ಆರೋಪದ ಮೇಲೆ ಅಮೆರಿಕ ನ್ಯಾಯಾಲಯದಲ್ಲಿ ಅದಾನಿ ವಿರುದ್ಧದ ದೋಷಾರೋಪಣೆಯ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಯಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ಈ ವಿಷಯದ ಬಗ್ಗೆ ಸದನದಲ್ಲಿ ಮಾತನಾಡಬೇಕು ಎಂದು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಇಬ್ಬರೂ ಒತ್ತಾಯಿಸಿದರು.
ಲೋಕಸಭೆಯ ಸಚಿವಾಲಯದ ಸಲಹೆಯಂತೆ ಸಂಸತ್ತಿನ ಮಕರ ದ್ವಾರದ ಮೆಟ್ಟಿಲುಗಳ ಮುಂದೆ ಪ್ರತಿಭಟನೆ ನಡೆಸಲಾಯಿತು. ಸಂಶತ್ತಿಗೆ ಹೋಗುವ ಮೆಟ್ಟಿಲುಗಳ ಮೇಲೆ ಅಲ್ಲ. ಸ್ಪೀಕರ್ ಓಂ ಬಿರ್ಲಾ ಅವರು ಈ ವಿಷಯವನ್ನು ಸದಸ್ಯರ ಗಮನಕ್ಕೆ ತಂದರು.
ಸ್ವಲ್ಪ ಸಮಯದ ನಂತರ, ಪ್ರತಿಭಟನಾ ನಿರತ ಸಂಸದರು ಸಂವಿದಾನ ಸದನದ ಮುಂದೆ ಸರತಿ ಸಾಲಿನಲ್ಲಿ ನಿಂತು ಮೋದಿ ಮತ್ತು ಅದಾನಿ ವಿರುದ್ಧ ಘೋಷಣೆಗಳನ್ನು ಕೂಗಿದರು.
ಸಂಸತ್ತಿನ ಗೇಟ್‌ಗಳ ಮುಂದೆ ಪ್ರತಿಭಟನೆ ನಡೆಸದಂತೆ ಸಂಸದರಿಗೆ ಲೋಕಸಭೆ ಸೆಕ್ರೆಟರಿಯೇಟ್ ಮಂಗಳವಾರ ಸಲಹೆ ನೀಡಿದ್ದು, ಸಂಚಾರಕ್ಕೆ ಅಡ್ಡಿಯು ಅವರ ಸುರಕ್ಷತೆ ಮತ್ತು ಭದ್ರತೆಯ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಿದೆ.
ಮಂಗಳವಾರ ಮತ್ತು ಬುಧವಾರ ಮಕರ ದ್ವಾರದ ಮೆಟ್ಟಿಲುಗಳ ಮೇಲೆ ವಿರೋಧ ಪಕ್ಷದ ಸಂಸದರು ಪ್ರತಿಭಟನೆ ನಡೆಸಿದ್ದರು.
ಯುಎಸ್ ನ್ಯಾಯಾಲಯದಲ್ಲಿ ಅದಾನಿ ಮತ್ತು ಇತರ ಕಂಪನಿಯ ಅಧಿಕಾರಿಗಳ ವಿರುದ್ಧ ದೋಷಾರೋಪಣೆ ಮಾಡಿದ ನಂತರ ಕಾಂಗ್ರೆಸ್ ಮತ್ತು ಇತರ ಕೆಲವು ವಿರೋಧ ಪಕ್ಷಗಳು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಗೆ ಒತ್ತಾಯಿಸುತ್ತಿವೆ.
ಇದನ್ನೂ ಓದಿ; ಹೋಟೆಲ್, ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಸೇವನೆ ಮೇಲೆ ಸಂಪೂರ್ಣ ನಿಷೇಧ: ಅಸ್ಸಾಂ ಸಿಎಂ ಘೋಷಣೆ


