Homeಮುಖಪುಟಜಗನ್ ಆದೇಶದ ಮೇರೆಗೆ ಸಂಸ್ಥೆಯ ಸ್ವಾಧೀನ; ವೈಎಸ್‌ಆರ್‌ಸಿಪಿ ನಾಯಕರ ವಿರುದ್ಧ ಎಫ್‌ಐಆರ್

ಜಗನ್ ಆದೇಶದ ಮೇರೆಗೆ ಸಂಸ್ಥೆಯ ಸ್ವಾಧೀನ; ವೈಎಸ್‌ಆರ್‌ಸಿಪಿ ನಾಯಕರ ವಿರುದ್ಧ ಎಫ್‌ಐಆರ್

- Advertisement -
- Advertisement -

ಮಾಜಿ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಇಚ್ಛೆಯ ಮೇರೆಗೆ ಕಂಪನಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಕಾಕಿನಾಡ ಸೀಪೋರ್ಟ್ಸ್ ಲಿಮಿಟೆಡ್‌ನ ಅಧ್ಯಕ್ಷರು ನೀಡಿದ ದೂರಿನ ಆಧಾರದ ಮೇಲೆ ಆಂಧ್ರಪ್ರದೇಶದ ಅಪರಾಧ ತನಿಖಾ ಇಲಾಖೆಯು ಮೂವರ ವಿರುದ್ಧ ಎಫ್‌ಐಆರ್‌ ದಾಖಲಿಸಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಜಗನ್ ಆದೇಶದ

ಎಫ್‌ಐಆರ್‌ನಲ್ಲಿ ಹೆಸರಿಸಲಾದ ಮೂವರಲ್ಲಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸಂಸದ ವಿ. ವಿಜಯಸಾಯಿ ರೆಡ್ಡಿ, ವೈ.ವಿ. ವಿಕ್ರಾಂತ್ ರೆಡ್ಡಿ ಮತ್ತು ಅರಬಿಂದೋ ಫಾರ್ಮಾದ ನಿರ್ದೇಶಕ ಪಿ. ಶರತ್ ಚಂದ್ರ ರೆಡ್ಡಿ ಇದ್ದಾರೆ. ವೈ.ವಿ. ವಿಕ್ರಾಂತ್ ರೆಡ್ಡಿ ಅವರು ಪಕ್ಷದ ಸಂಸದ ವೈ.ವಿ. ಸುಬ್ಬಾ ರೆಡ್ಡಿ ಅವರ ಪುತ್ರನಾಗಿದ್ದು, ಪಿ. ಶರತ್ ಚಂದ್ರ ರೆಡ್ಡಿ ಅವರು ವಿ. ವಿಜಯಸಾಯಿ ರೆಡ್ಡಿ ಅವರ ಅಳಿಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜೊತೆಗೆ, ಎರಡು ಕಂಪನಿಗಳಾದ PKF ಶ್ರೀಧರ್ ಆಂಡ್ ಸಂತಾನಂ LLP ಮತ್ತು ಅರಬಿಂದೋ ರಿಯಾಲ್ಟಿ ಆಂಡ್ ಇನ್ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್ ಹೆಸರನ್ನು ಕೂಡಾ ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ. ಜಗನ್ ಆದೇಶದ

ಈ ಬಗ್ಗೆ ಕಾಕಿನಾಡ ಸೀಪೋರ್ಟ್ಸ್ ಲಿಮಿಟೆಡ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಕರ್ನಾಟಿ ವೆಂಕಟೇಶ್ವರ ರಾವ್ ಅವರು ಸೋಮವಾರ ದೂರು ದಾಖಲಿಸಿದ್ದರು. 2,500 ಕೋಟಿ ಮೌಲ್ಯದ ಕಾಕಿನಾಡ ಸೀಪೋರ್ಟ್ಸ್ ಲಿಮಿಟೆಡ್‌ನ 40% ರಷ್ಟು ಶೇರುಗಳನ್ನು ಬಲವಂತವಾಗಿ ಮತ್ತು ಬೆದರಿಕೆಯ ಮೂಲಕ 494 ಕೋಟಿ ರೂಪಾಯಿಗಳಿಗೆ ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ವೆಂಕಟೇಶ್ವರ ರಾವ್ ಆರೋಪಿಸಿದ್ದಾರೆ.

400 ಕೋಟಿ ಮೌಲ್ಯದ ಕಾಕಿನಾಡ ವಿಶೇಷ ಆರ್ಥಿಕ ವಲಯದ 49%ರಷ್ಟು ಜಾಗವನ್ನು 12 ಕೋಟಿ ರೂ.ಗೆ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಈ ಒಪ್ಪಂದಕ್ಕೆ ಬಹುರಾಷ್ಟ್ರೀಯ ಸಂಸ್ಥೆಯು 400 ಕೋಟಿ ನೀಡಲು ಮುಂದಾಗಿತ್ತು.

“ಈ ಸಂಪೂರ್ಣ ಕಾರ್ಯಾಚರಣೆಯನ್ನು ಕೆಎಸ್‌ಪಿಎಲ್ ಮತ್ತು ಕಾಕಿನಾಡ ಎಸ್‌ಇಜೆಡ್‌ನಲ್ಲಿನ ನನ್ನ ಷೇರುಗಳನ್ನು ಕಸಿದುಕೊಳ್ಳಲು ಮತ್ತು ಷೇರುಗಳನ್ನು ಅರಬಿಂದೋ ಗ್ರೂಪ್‌ಗೆ ವರ್ಗಾಯಿಸಲು ಯೋಜಿಸಿ ನಡೆಸಲಾಗಿದೆ” ಎಂದು ವೆಂಕಟೇಶ್ವರ ರಾವ್ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ಅದಾಗ್ಯೂ, ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ ಕಾಕಣಿ ಗೋವರ್ಧನ್ ರೆಡ್ಡಿ ಅವರು ಈ ಆರೋಪಗಳನ್ನು ರಾಜಕೀಯ ಸೇಡಿನ ಆರೋಪ ಎಂದು ಬಣ್ಣಿಸಿದ್ದಾರೆ. “ಇದು ರಾಜಕೀಯ ದ್ವೇಷದ ಭಾಗವಾಗಿದೆ ಎಂಬುದು ಸ್ಪಷ್ಟವಾಗಿದೆ… ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಆಡುತ್ತಿರುವ ಆಟದ ಭಾಗವಾಗಿ ಇದನ್ನು ಮಾಡಲಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ಆಂಧ್ರಪ್ರದೇಶದಲ್ಲಿ ಜೂನ್‌ ವೇಳೆ ನಡೆದ ವಿಧಾನಸಭಾ ಚುನಾವಣೆಯಲ್ಲಿ, ವೈಎಸ್‌ಆರ್ ಕಾಂಗ್ರೆಸ್ ಪಕ್ಷವು ಸೋತು, ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷದ ಸರ್ಕಾರ ಅಧಿಕಾರಕ್ಕೆ ಏರಿತ್ತು.

ಇದನ್ನೂ ಓದಿ: ‘ಮೋದಿ ಅದಾನಿ ಒಂದೆ..’ ಎಂಬ ವಿಶೇಷ ಜಾಕೆಟ್ ಧರಿಸಿದ ಇಂಡಿಯಾ ಬ್ಲಾಕ್ ಸದಸ್ಯರು; ಸಂಸತ್ತಿನಲ್ಲಿ ಪ್ರತಿಭಟನೆ

‘ಮೋದಿ ಅದಾನಿ ಒಂದೆ..’ ಎಂಬ ವಿಶೇಷ ಜಾಕೆಟ್ ಧರಿಸಿದ ಇಂಡಿಯಾ ಬ್ಲಾಕ್ ಸದಸ್ಯರು; ಸಂಸತ್ತಿನಲ್ಲಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...