ಸಂಭಾಲ್‌ನ ಮಸೀದಿಯ ಸಮೀಕ್ಷೆಯ ಮೇಲೆ ಭುಗಿಲೆದ್ದ ಹಿಂಸಾಚಾರದಲ್ಲಿ ಭಾಗಿಯಾಗಿರುವವರ ಪೋಸ್ಟರ್‌ಗಳನ್ನು ಸಾರ್ವಜನಿಕ ಗೋಡೆಗಳ ಮೇಲೆ ಹಾಕಲಾಗುವುದು ಎಂದು ಸಂಭಾಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಂದರ್ ಪೆನ್ಸಿಯಾ ಗುರುವಾರ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. “ಹಿಂಸಾಚಾರದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ 400 ಕ್ಕೂ ಹೆಚ್ಚು ವ್ಯಕ್ತಿಗಳನ್ನು ಅಧಿಕಾರಿಗಳು ಗುರುತಿಸಿದ್ದಾರೆ ಮತ್ತು 32 ಮಂದಿಯನ್ನು ಬಂಧಿಸಲಾಗಿದೆ. ಅವರ ಪೋಸ್ಟರ್‌ಗಳನ್ನು ವಿನ್ಯಾಸಗೊಳಿಸಲಾಗುತ್ತಿದೆ ಮತ್ತು ಶೀಘ್ರದಲ್ಲೇ ಹಾಕಲಾಗುವುದು” ಎಂದು ಪೆನ್ಸಿಯಾ ಹೇಳಿದ್ದಾರೆ. ಸಂಭಾಲ್ ಹಿಂಸಾಚಾರ
ನವೆಂಬರ್ 24 ರಂದು, ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಮುಸ್ಲಿಮರ ಗುಂಪು ಚಂದೌಸಿ ಪಟ್ಟಣದ ಶಾಹಿ ಜಾಮಾ ಮಸೀದಿಯ ಸಮೀಕ್ಷೆಯನ್ನು ವಿರೋಧಿಸಿದ ನಂತರ ಹಿಂಸಾಚಾರ ಭುಗಿಲೆದ್ದಿತ್ತು. 1526 ರ ಮೊಘಲ್ ಕಾಲದ ಮಸೀದಿಯನ್ನು ದೇವಾಲಯದ ಮೇಲೆ ಕಟ್ಟಲಾಗಿದೆ ಎಂದು ಬಿಜೆಪಿ ಪರ ಸಂಘಟನೆಗಳು ಅರೋಪಿಸಿ ಕೋರ್ಟ್‌ನಲ್ಲಿ ಅರ್ಜಿ ದಾಖಲಿಸಿತ್ತು. ಇದನ್ನು ಪರಿಗಣಿಸಿದ ನ್ಯಾಯಾಲಯ ಮಸೀದಿಯ ಸಮೀಕ್ಷೆಗೆ ಆದೇಶ ನೀಡಿತ್ತು. ಸಮೀಕ್ಷೆ ವೇಳೆ ನಡೆದ ಹಿಂಸಾಚಾರದಲ್ಲಿ ಐವರು ಸಾವನ್ನಪ್ಪಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ನವೆಂಬರ್ 27 ರಂದು ಉತ್ತರ ಪ್ರದೇಶ ಸರ್ಕಾರವು, ಹಿಂಸಾಚಾರ ನಡೆಸಿದ ವ್ಯಕ್ತಿಗಳು ಸಾರ್ವಜನಿಕ ಆಸ್ತಿಯ ಹಾನಿಯನ್ನು ಪಾವತಿಸುವಂತೆ ಮತ್ತು ಸಾರ್ವಜನಿಕ ಗೋಡೆಗಳ ಮೇಲೆ ಅವರ ಚಿತ್ರಗಳನ್ನು ಪ್ರದರ್ಶಿಸುವಂತೆ ಮಾಡುವುದಾಗಿ ಹೇಳಿತ್ತು. ಇದನ್ನು ಮುಖ್ಯಮಂತ್ರಿ ಆದಿತ್ಯನಾಥ್ ಅವರು ಬುಧವಾರ ಪುನರುಚ್ಚರಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಸಂಭಾಲ್ ಹಿಂಸಾಚಾರ
“ತೊಂದರೆ ಉಂಟುಮಾಡುವವರಿಂದ ಉಂಟಾದ ಸಾರ್ವಜನಿಕ ಆಸ್ತಿ ಹಾನಿಯನ್ನು ಸರಿಪಡಿಸುವ ವೆಚ್ಚವನ್ನು ಅವರಿಂದ ವಸೂಲಿ ಮಾಡಬೇಕು. ಅಶಾಂತಿ ಸೃಷ್ಟಿಸಲು ಕಾರಣರಾದವರನ್ನು ಗುರುತಿಸಿ, ಅವರ ಪೋಸ್ಟರ್‌ಗಳನ್ನು ಹಾಕಿ. ಸಾರ್ವಜನಿಕ ಬೆಂಬಲವನ್ನು ಪಡೆದು ವ್ಯಾಪಕ ಶೋಧ ಕಾರ್ಯಾಚರಣೆಗಳನ್ನು ನಡೆಸಿ. ಯಾವುದೇ ಅಪರಾಧಿ ತಪ್ಪಿಸಿಕೊಳ್ಳಬಾರದು” ಎಂದು ” ಎಂದು ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಆದಿತ್ಯನಾಥ್ ಹೇಳಿದ್ದಾರೆ.
ಗುರುವಾರ ಅಯೋಧ್ಯೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮುಖ್ಯಮಂತ್ರಿ, “ಅಯೋಧ್ಯೆ, ಸಂಭಾಲ್ ಮತ್ತು ಬಾಂಗ್ಲಾದೇಶದ ಹಿಂಸಾಚಾರದ ನಡುವೆ ಸಾಮ್ಯತೆಯಿದೆ. ಮೂವರ ಸ್ವಭಾವ ಮತ್ತು ಡಿಎನ್‌ಎ ಒಂದೇ ಆಗಿದೆ” ಎಂದು ಆದಿತ್ಯನಾಥ್ ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
2020 ರಲ್ಲಿ ಕೂಡಾ ಉತ್ತರ ಪ್ರದೇಶ ಸರ್ಕಾರವು ವಿವಾದಾಸ್ಪದ ನಾಗರಿಕ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆಯ ಸಮಯದಲ್ಲಿ ಹಿಂಸಾಚಾರ ನಡೆಸಿದ ಆರೋಪಿಗಳ ಪೋಸ್ಟರ್‌ಗಳನ್ನು ಸಾರ್ವಜನಿಕವಾಗಿ ಪ್ರದರ್ಶಿಸಿತ್ತು. ಆದರೆ, ನಂತರ ಅಲಹಾಬಾದ್ ಹೈಕೋರ್ಟ್ ಅದನ್ನು ತೆಗೆದುಹಾಕುವಂತೆ ನಿರ್ದೇಶನ ನೀಡಿತ್ತು.
ಇದನ್ನೂ ಓದಿ: ಮುಡಾ ಪ್ರಕರಣ | ವಿಚಾರಣೆ ಮುಂದೂಡಿದ ಹೈಕೋರ್ಟ್ : ರಾಜ್ಯಪಾಲರು ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್
ಮುಡಾ ಪ್ರಕರಣ | ವಿಚಾರಣೆ ಮುಂದೂಡಿದ ಹೈಕೋರ್ಟ್ : ರಾಜ್ಯಪಾಲರು ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್


