Homeಕರ್ನಾಟಕಹಿರಿಯ ಪತ್ರಕರ್ತ ಡಿ.ಉಮಾಪತಿ ಅವರಿಗೆ 'ವಡ್ಡರ್ಸೆ ರಘುರಾಮಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ'

ಹಿರಿಯ ಪತ್ರಕರ್ತ ಡಿ.ಉಮಾಪತಿ ಅವರಿಗೆ ‘ವಡ್ಡರ್ಸೆ ರಘುರಾಮಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ’

- Advertisement -
- Advertisement -

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಈ ವರ್ಷದಿಂದ ಆರಂಭಿಸಿರುವ ‘ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ’ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಡಿ.ಉಮಾಪತಿ ಅವರು ಭಾಜನರಾಗಿದ್ದಾರೆ.

ವಾರ್ತಾ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಈ ಬಗ್ಗೆ ಮಾಹಿತಿ ನೀಡಿದ್ದು, “ನ್ಯಾ.ಅಶೋಕ ಹಿಂಚಿಗೇರಿ ಅವರ ಅಧ್ಯಕ್ಷತೆಯಲ್ಲಿ ರಚನೆಯಾಗಿದ್ದ ಪ್ರಶಸ್ತಿ ಆಯ್ಕೆ ಸಮಿತಿಯು ಒಮ್ಮತದಿಂದ ಹಿರಿಯ ಪತ್ರಕರ್ತ ಡಿ.ಉಮಾಪತಿಯವರನ್ನು ‘ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ’ಗೆ ಆಯ್ಕೆ ಮಾಡಿದೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿಯು ₹2 ಲಕ್ಷ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.

ಪತ್ರಿಕೋದ್ಯಮದಲ್ಲಿ ಸಾಮಾಜಿಕ ನ್ಯಾಯ ಕುರಿತು ವರದಿ, ವಿಶೇಷ ಲೇಖನಗಳ ಪ್ರಕಟಣೆ ಗುರುತಿಸಿ, ಗೌರವಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024ರ ಆಯವ್ಯಯದಲ್ಲಿ ಹಿರಿಯ ಪತ್ರಕರ್ತ ‘ವಡ್ಡರ್ಸೆ ರಘುರಾಮಶೆಟ್ಟಿ’ ಹೆಸರಿನಲ್ಲಿ ‘ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ’ ಘೋಷಿಸಿದ್ದರು.

ಡಿ.ಉಮಾಪತಿ ಅವರ ಕುರಿತು

ಮಾರ್ಚ್ 18,1959 ರಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಜನಿಸಿದ ಡಿ.ಉಮಾಪತಿ ಅವರು, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಆಂಗ್ಲ ಸಾಹಿತ್ಯ ಮತ್ತು ಪತ್ರಿಕೋದ್ಯಮದಲ್ಲಿ ಬಿ.ಎ, ಮೈಸೂರು ವಿಶ್ವವಿದ್ಯಾಲಯದಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಎರಡನೆ ರ‍್ಯಾಂಕ್ ಮೂಲಕ ಪಡೆದಿದ್ದಾರೆ.

ಕನ್ನಡಪ್ರಭದಲ್ಲಿ ಇಂಟರ್ನ್‌ಶಿಪ್‌ಗಾಗಿ ಸೇರಿದ ಅವರಿಗೆ, ಪ್ರತಿಭೆ ಹಾಗೂ ಸಾಮರ್ಥ್ಯದ ಕಾರಣಕ್ಕೆ ಅಲ್ಲಿ ಖಾಯಂ ಕೆಲಸ ಲಭಿಸಿತ್ತು. ‘ನ್ಯೂ ಇಂಡಿಯನ್ ಎಕ್ಸಪ್ರೆಸ್’ ಸಮೂಹ ಸಂಸ್ಥೆಯ ‘ಕನ್ನಡ ಪ್ರಭ’ದಲ್ಲಿ ಪತ್ರಕರ್ತರಾಗಿ ಕೆಲಸ ಆರಂಭಿಸಿದರು. ನಂತರ ದೆಹಲಿಗೆ ತೆರಳಿ ಕನ್ನಡ ಪ್ರಭ, ವಿಜಯ ಕರ್ನಾಟಕ ಹಾಗೂ ಪ್ರಜಾವಾಣಿ ಪತ್ರಿಕೆಗಳಿಗೆ ದೆಹಲಿ ವರದಿಗಾರರಾಗಿ ಕೆಲಸ ಮಾಡಿದ್ದಾರೆ. ಪಾರ್ಲಿಮೆಂಟ್ ವರದಿ, ಚುನಾವಣಾ ವಿಶ್ಲೇಷಣೆಗಳು, ಸುಪ್ರೀಂ ಕೋರ್ಟುಗಳಲ್ಲಿನ ನದಿ ನೀರು ನ್ಯಾಯಾಧೀಕರಣ ವ್ಯಾಜ್ಯಗಳ, ರಾಷ್ಟ್ರಮಟ್ಟದ ರಾಜಕೀಯ ಬೆಳವಣಿಗೆಗಳು, ಪ್ರಧಾನ ಮಂತ್ರಿಗಳು ಹಾಗೂ ವಿದೇಶಾಂಗ ಸಚಿವರ ವಿದೇಶ ಪ್ರವಾಸದ ಜೊತೆಗೂಡಿ ರಾಜತಾಂತ್ರಿಕ ವರದಿಗಾರಿಕೆಯಲ್ಲಿ ವಿಶಿಷ್ಟ ಅನುಭವ ಇವರದ್ದಾಗಿದೆ.

ಡಿ. ಉಮಾಪತಿ ಅವರು ಪ್ರೆಸ್ ಕ್ಲಬ್ ಆಫ್ ಇಂಡಿಯಾದ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದರು. ಆಂದೋಲನ, ರೈತ ಚಳವಳಿ, ಸಂಯುಕ್ತ ಕರ್ನಾಟಕ, ವಾರ್ತಾಭಾರತಿ ಪತ್ರಿಕೆಗಳಿಗೆ ಅಂಕಣ ಬರಹಗಾರರಾಗಿಯೂ ಗುರುತಿಸಿಕೊಂಡಿದ್ದಾರೆ. ಪ್ರಸ್ತುತ ‘ನ್ಯಾಯಪಥ’ (ಗೌರಿ ಮಿಡಿಯಾ) ಮತ್ತು ’ಈ ದಿನ.ಕಾಮ್‌’ ಮಾಧ್ಯಮ ಸಂಸ್ಥೆಯ ಕನ್ಸಲ್ಟಿಂಗ್ ಎಡಿಟರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ‘ದೆಹಲಿ ನೋಟ’, ’ಪದಕುಸಿಯೇ ನೆಲವಿಲ್ಲ’ ಉಮಾಪತಿ ಅವರ ಎರಡು ಮಹತ್ವದ ಕೃತಿಗಳು ಪ್ರಕಟವಾಗಿವೆ.

ಇದನ್ನೂ ಓದಿ; ಕಾಂಗ್ರೆಸ್ ‘ಜನಕಲ್ಯಾಣ ಸಮಾವೇಶ’ಕ್ಕೆ ಹರಿದುಬಂದ ಜನಸಾಗರ; ದೇವೇಗೌಡರ ತವರಿನಲ್ಲಿ ‘ಕೈ’ ನಾಯಕರ ಶಕ್ತಿ ಪ್ರದರ್ಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...