Homeಮುಖಪುಟಫ್ರಾನ್ಸ್ ಪ್ರಧಾನಿ ವಿರುದ್ಧ ಅವಿಶ್ವಾಸ ನಿರ್ಣಯ : ಸರ್ಕಾರ ಪತನ

ಫ್ರಾನ್ಸ್ ಪ್ರಧಾನಿ ವಿರುದ್ಧ ಅವಿಶ್ವಾಸ ನಿರ್ಣಯ : ಸರ್ಕಾರ ಪತನ

- Advertisement -
- Advertisement -

ಫ್ರಾನ್ಸ್‌ ಪ್ರಧಾನಿ ಮಿಷೆಲ್ ಬರ್ನಿಯರ್ ವಿರುದ್ಧ ಬುಧವಾರ (ಡಿ.4) ಮಂಡಿಸಲಾಗಿದ್ದ ಅವಿಶ್ವಾಸ ನಿರ್ಣಯ ಅಂಗೀಕಾರವಾಗಿದ್ದು, ಅವರು ಅಧಿಕಾರದಿಂದ ಪದಚ್ಯುತಗೊಂಡಿದ್ದಾರೆ.

ಅರುವತ್ತು ವರ್ಷಗಳ ಬಳಿಕ, ಅಂದರೆ 1962ರ ಬಳಿಕ ಇದೇ ಮೊದಲ ಬಾರಿಗೆ ಅವಿಶ್ವಾಸ ನಿರ್ಣಯಕ್ಕೆ ಯಶಸ್ಸು ದೊರೆತಿದೆ. ಫ್ರಾನ್ಸ್‌ ಸಂಸತ್ತಿನ ಬಲಪಂಥೀಯ ಮತ್ತು ಎಡಪಂಥೀಯ ಸದಸ್ಯ‌ರು ಒಗ್ಗೂಡಿ ನಿರ್ಣಯದ ಪರ ಮತ ಚಲಾಯಿಸಿದ್ದಾರೆ.

ಅವಿಶ್ವಾಸ ನಿರ್ಣಯದ ಅಂಗೀಕಾರಕ್ಕೆ ಒಟ್ಟು 288 ಮತಗಳ ಅಗತ್ಯವಿತ್ತು. ಆದರೆ, 331 ಮತಗಳು ನಿರ್ಣಯದ ಪರ ಚಲಾವಣೆಯಾಗಿದೆ. ಅವಿಶ್ವಾಸ ನಿರ್ಣಯಕ್ಕೆ ಗೆಲುವಾದ ಬೆನ್ನಲ್ಲೇ ಪ್ರಧಾನಿ ಬರ್ನಿಯರ್ ಮತ್ತು ಅವರ ಸಂಪುಟ ಸದಸ್ಯರು ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಸರ್ಕಾರ ಪತನಗೊಂಡಿದೆ.

ಕೇವಲ ಮೂರು ತಿಂಗಳ ಹಿಂದೆ, ಅಂದರೆ ಕಳೆದ ಸೆಪ್ಟೆಂಬರ್‌ನಲ್ಲಿ ಪ್ರಧಾನಿ ಹುದ್ದೇಗೇರಿದ್ದ ಮಿಷೆಲ್ ಬರ್ನಿಯರ್ ಪದಚ್ಯುತಿಗೊಳ್ಳುವ ಮೂಲಕ ಆಧುನಿಕ ಫ್ರಾನ್ಸ್‌ನ ಇತಿಹಾಸದಲ್ಲಿ ಅತಿ ಕಡಿಮೆ ಅವಧಿಯಲ್ಲಿ ಅಧಿಕಾರದಲ್ಲಿದ್ದ ಪ್ರಧಾನಿ ಎನಿಸಿಕೊಂಡಿದ್ದಾರೆ.

“ಅವಿಶ್ವಾಸ ನಿರ್ಣಯ ಎಲ್ಲವನ್ನೂ ಗಂಭೀರಗೊಳಿಸಲಿದೆ. ಪರಿಸ್ಥಿತಿಯನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಲಿದೆ” ಎಂದು ಬರ್ನಿಯರ್ ತನ್ನ ವಿದಾಯ ಭಾಷಣದಲ್ಲಿ ಹೇಳಿದ್ದಾರೆ.

ಸರ್ಕಾರ ಪತನಗೊಂಡಿರುವ ಹಿನ್ನೆಲೆ, ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಗುರುವಾರ ಮಿತ್ರಪಕ್ಷಗಳು ಮತ್ತು ಸಂಸತ್ತಿನ ನಾಯಕರನ್ನು ಭೇಟಿ ಮಾಡಿದ್ದು, ಶೀಘ್ರದಲ್ಲೇ ಹೊಸ ಪ್ರಧಾನಿಯ ನೇಮಕವಾಗಲಿದೆ ಎಂದಿದ್ದಾರೆ. ಹೊಸ ಸರ್ಕಾರ ರಚನೆ ಆಗುವವವರೆಗೂ ಉಸ್ತುವಾರಿ ಪ್ರಧಾನಿಯಾಗಿ ಮುಂದುವರಿಯುವಂತೆ ಬರ್ನಿಯರ್ ಅವರಿಗೆ ಅಧ್ಯಕ್ಷ ಮ್ಯಾಕ್ರನ್ ಸೂಚಿಸಿದ್ದಾರೆ.

ಫ್ರಾನ್ಸ್‌ನ ನ್ಯಾಷನಲ್ ಅಸೆಂಬ್ಲಿಯಲ್ಲಿ ಯಾವುದೇ ಪಕ್ಷ ಸ್ಪಷ್ಟ ಬಹುಮತ ಪಡೆದಿಲ್ಲ. ಪ್ರಸ್ತುತ ಮೂರು ಮೈತ್ರಿಕೂಟಗಳಿವೆ. ಇದರಿಂದ ಅಲ್ಲಿ ರಾಜಕೀಯ ಸಂದಿಗ್ದತೆ ಉಂಟಾಗಿದೆ. ಇದು ದೇಶದ ರಾಜಕೀಯ ಮತ್ತು ಆರ್ಥಿಕತೆಯ ಮೇಲೆ ದೊಡ್ಡ ಪರಿಣಾಮ ಬೀರುವ ಆತಂಕ ಸೃಷ್ಟಿಯಾಗಿದೆ.

ಇದನ್ನೂ ಓದಿ : ಜನಾಕ್ರೋಶಕ್ಕೆ ಮಣಿದ ದಕ್ಷಿಣ ಕೊರಿಯಾ ಅಧ್ಯಕ್ಷ : ‘ತುರ್ತು ಮಿಲಿಟರಿ ಆಡಳಿತ’ ವಾಪಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...