ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಏಕನಾಥ್ ಶಿಂಧೆ ಅವರು ಬಿಜೆಪಿ ಜೊತೆಗೆ ‘ಹಠಮಾರಿ’ ಧೋರಣೆ ಮುಂದುವರೆಸಿದ್ದರೆ, ಹೊಸ ಸರ್ಕಾರದ ಪ್ರಮಾಣ ವಚನದಲ್ಲಿ ಅವರು ಇಲ್ಲದೆ ಮುಂದುವರೆಯಲು ಬಿಜೆಪಿಯ ವರಿಷ್ಠರು ಯೋಜಿಸಿದ್ದರು ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಶುಕ್ರವಾರ ಹೇಳಿದ್ದಾರೆ. ಶಿಂಧೆ ಹಠ ಹಿಡಿದಿದ್ದರೆ
ಹೊಸದಿಲ್ಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಜಯ್ ರಾವತ್, ಮಹಾಯುತಿಗೆ ಭಾರಿ ಬಹುಮತ ಬಂದರೂ ರಾಜ್ಯ ಸರಕಾರಕ್ಕೆ ಇದುವರೆಗೂ ಪೂರ್ಣ ಪ್ರಮಾಣದ ಸಚಿವ ಸಂಪುಟ ಇಲ್ಲದೇ ಇರುವುದು ಮೈತ್ರಿಕೂಟದಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬುದನ್ನು ಸೂಚಿಸುತ್ತದೆ ಎಂದು ಪ್ರತಿಪಾದಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಭಾರಿ ಜನಾದೇಶದ ಹೊರತಾಗಿಯೂ ಬಿಜೆಪಿ ಸರ್ಕಾರ ರಚಿಸಲು 15 ದಿನಗಳನ್ನು ತೆಗೆದುಕೊಂಡಿದೆ ಎಂದು ಅವರು ಹೇಳಿದ್ದಾರೆ. ಶಿಂಧೆ ಹಠ ಹಿಡಿದಿದ್ದರೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
“ಏಕನಾಥ್ ಶಿಂಧೆ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಬೇಕಿತ್ತು. ಏಕನಾಥ್ ಶಿಂಧೆ ಇಲ್ಲದೆಯೇ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬಿಜೆಪಿ ಮುಂದಾಗಿತ್ತು. ಬಿಜೆಪಿ ಮೇಲೆ ಒತ್ತಡ ಹೇರುವ ಹಠಮಾರಿ ಧೋರಣೆ ತಾಳಿದ್ದರೆ, ಅವರು ಇಲ್ಲದೆ ಮುಂದುವರೆಯುವಂತೆ ರಾಜ್ಯ ಬಿಜೆಪಿ ನಾಯಕತ್ವಕ್ಕೆ ಪಕ್ಷದ ವರಿಷ್ಠರು ತಿಳಿಸಿದ್ದರು.” ಎಂದು ರಾವತ್ ಹೇಳಿಕೊಂಡಿದ್ದಾರೆ.
ಮುಂಬೈನ ಆಜಾದ್ ಮೈದಾನದಲ್ಲಿ ಗುರುವಾರ ಸಂಜೆ ನಡೆದ ಅದ್ಧೂರಿ ಸಮಾರಂಭದಲ್ಲಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಮೂರನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮಾಜಿ ಮುಖ್ಯಮಂತ್ರಿ ಏಕಾಂತ್ ಶಿಂಧೆ ಮತ್ತು ಅಜಿತ್ ಪವಾರ್ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು ಮತ್ತು ಎನ್‌ಡಿಎ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.
ಏಕನಾಥ್ ಶಿಂಧೆಗೆ ಉಪ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಲು ಇಷ್ಟವಿರಲಿಲ್ಲ, ಆದರೆ ಬಿಜೆಪಿ ಮತ್ತು ಅವರ ಪಕ್ಷದ ಶಾಸಕರ ಒತ್ತಾಯದ ನಂತರ ಅವರು ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿ ಸೇರಿದ್ದರು. ಹೊಸ ಸರ್ಕಾರದ ಭಾಗವಾಗುತ್ತೇನೋ ಇಲ್ಲವೋ ಎಂಬ ಬಗ್ಗೆ ಅವರು ಮೌನ ತಾಳಿದ್ದರು. ಪ್ರಮಾಣವಚನ ಸಮಾರಂಭಕ್ಕೆ ಕೆಲವೇ ಗಂಟೆಗಳ ಮೊದಲು ಶಿವಸೇನೆಯ ಶಾಸಕರೊಬ್ಬರು ಶಿಂಧೆ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಖಚಿತಪಡಿಸಿದ್ದರು.
ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಂಡು ಬಿಜೆಪಿ ರಾಜ್ಯದಲ್ಲಿ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ರಾವತ್ ಆರೋಪಿಸಿದ್ದಾರೆ. ಶಿಂಧೆ ವಿರುದ್ಧ ದಾಳಿ ಮಾಡಿದ ಅವರು ಪ್ರಮಾಣವಚನ ಸಮಾರಂಭದಲ್ಲಿ ಕೆಲವು ಮುಖಗಳು ಸಂತೋಷವಾಗಿರಲಿಲ್ಲ ಎಂದು ಹೇಳಿದ್ದಾರೆ. 2019 ರಲ್ಲಿ ಉದ್ಧವ್ ಠಾಕ್ರೆ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗ ಅದೇ ಮುಖಗಳು ಅಸ್ಪಷ್ಟವಾಗಿದ್ದವು ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ‘ಮೋದಿ ಅದಾನಿ ಭಾಯಿ ಭಾಯಿ..’; ಕಪ್ಪು ಮಾಸ್ಕ್ ಧರಿಸಿ ವಿಪಕ್ಷ ಸಂಸದರಿಂದ ಪ್ರತಿಭಟನಾ ಮೆರವಣಿಗೆ
‘ಮೋದಿ ಅದಾನಿ ಭಾಯಿ ಭಾಯಿ..’; ಕಪ್ಪು ಮಾಸ್ಕ್ ಧರಿಸಿ ವಿಪಕ್ಷ ಸಂಸದರಿಂದ ಪ್ರತಿಭಟನಾ ಮೆರವಣಿಗೆ


