Homeಚಳವಳಿರೈತರ ಹೋರಾಟಕ್ಕೆ ಜಯ : ಎಲ್ಲಾ ಕೃಷಿ ಉತ್ಪನ್ನಗಳಿಗೆ 'ಎಂಎಸ್‌ಪಿ' ಕೇಂದ್ರ ಸರ್ಕಾರ

ರೈತರ ಹೋರಾಟಕ್ಕೆ ಜಯ : ಎಲ್ಲಾ ಕೃಷಿ ಉತ್ಪನ್ನಗಳಿಗೆ ‘ಎಂಎಸ್‌ಪಿ’ ಕೇಂದ್ರ ಸರ್ಕಾರ

- Advertisement -
- Advertisement -

ರೈತರ ಬೃಹತ್ ಹೋರಾಟದ ನಡುವೆ ಎಲ್ಲಾ ಕೃಷಿ ಉತ್ಪನ್ನಗಳನ್ನು ‘ಕನಿಷ್ಠ ಬೆಂಬಲ ಬೆಲೆ’ (ಎಂಎಸ್‌ಪಿ) ಯಲ್ಲಿ ಖರೀದಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದ್ದು, ಹೋರಾಟಕ್ಕೆ ದೊಡ್ಡ ಜಯ ಸಿಕ್ಕಂತಾಗಿದೆ.

ರೈತರ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಘೋಷಣೆ ಮಾಡಬೇಕು. ಅದಕ್ಕೆ ಕಾನೂನು ಖಾತರಿ ನೀಡಬೇಕು ಎಂಬುವುದು ಕಳೆದ 9 ತಿಂಗಳಿನಿಂದ ಹರಿಯಾಣದ ಅಂಬಾಲಾ ಬಳಿಯ ಶಂಭು ಗಡಿಯಲ್ಲಿ ಹೋರಾಟ ಮಾಡುತ್ತಿದ್ದ ರೈತರ ಪ್ರಮುಖ ಬೇಡಿಕೆಯಾಗಿತ್ತು. ಈಗ ಅದನ್ನು ಈಡೇರಿಸುವುದಾಗಿ ಸರ್ಕಾರ ಭರವಸೆ ಕೊಟ್ಟಿದೆ.

ಶುಕ್ರವಾರ (ಡಿ.6) ಹೋರಾಟವನ್ನು ತೀವ್ರಗೊಳಿಸಿದ್ದ ರೈತರು, ರಾಜಧಾನಿ ದೆಹಲಿಯತ್ತ ಮೆರವಣಿಗೆ ಹಮ್ಮಿಕೊಂಡಿದ್ದರು. ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್‌ಗಳನ್ನು ಮುರಿದು ಮುನ್ನುಗಿದ್ದರು. ಈ ವೇಳೆ ಪೊಲೀಸರು ರೈತರ ಮೇಲೆ ಅಶ್ರುವಾಯು ಸಿಡಿಸಿ, ಲಾಠಿ ಚಾರ್ಜ್‌ ನಡೆಸಿದ್ದರು. ಇದರಿಂದ ಉದ್ವಿಗ್ನ ವಾತಾವರಣ ಉಂಟಾಗಿತ್ತು.

ಅತ್ತ ಹರಿಯಾಣ ಗಡಿಯಲ್ಲಿ ರೈತರು ಮತ್ತು ಪೊಲೀಸರ ನಡುವೆ ಸಂಘರ್ಷ ಏರ್ಪಟ್ಟಿದ್ದ ವೇಳಯೇ, ಇತ್ತ ರಾಜ್ಯಸಭೆಯಲ್ಲಿ ರೈತರಿಗೆ ಎಂಎಸ್‌ಪಿ ನೀಡುವ ಕುರಿತ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ರೈತರ ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ನೀಡುವುದಾಗಿ ಭರವಸೆ ನೀಡಿದ್ದಾರೆ.

“ರೈತರ ಎಲ್ಲಾ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸಲಾಗುವುದು ಎಂದು ನಾನು ಸದನಕ್ಕೆ ಭರವಸೆ ನೀಡಲು ಬಯಸುತ್ತೇನೆ. ಇದು ಮೋದಿ ಸರ್ಕಾರ ಮತ್ತು ಮೋದಿಯವರ ಭರವಸೆಯನ್ನು ಈಡೇರಿಸುವ ಗ್ಯಾರಂಟಿಯನ್ನು ನಾನು ನಿಮಗೆ ಕೊಡುತ್ತೇನೆ” ಎಂದು ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಇದೇ ವೇಳೆ ಪ್ರತಿಪಕ್ಷದ ಸದಸ್ಯರನ್ನು ತರಾಟೆಗೆ ತೆಗೆದುಕೊಂಡ ಚೌಹಾಣ್, “ಇನ್ನೊಂದು ಕಡೆಯ ನಮ್ಮ ಸ್ನೇಹಿತರು ಅಧಿಕಾರದಲ್ಲಿದ್ದಾಗ ಎಂ.ಎಸ್ ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ದಾಖಲೆಯಲ್ಲಿ ಹೇಳಿದ್ದರು. ವಿಶೇಷವಾಗಿ ಉತ್ಪನ್ನದ ವೆಚ್ಚಕ್ಕಿಂತ 50 ಪ್ರತಿಶತ ಹೆಚ್ಚು ನೀಡಲು, ಈ ಬಗ್ಗೆ ನನ್ನ ಬಳಿ ದಾಖಲೆ ಇದೆ” ಎಂದಿದ್ದಾರೆ.

ಚೌಹಾಣ್ ಅವರು ತಮ್ಮ ಹೇಳಿಕೆಯಲ್ಲಿ ಕೇಂದ್ರ ಕೃಷಿ ಇಲಾಖೆಯ ಮಾಜಿ ರಾಜ್ಯ ಸಚಿವ ಕಾಂತಿಲಾಲ್ ಭೂರಿಯಾ, ಮಾಜಿ ಕೃಷಿ ಸಚಿವರಾದ ಶರದ್ ಪವಾರ್ ಮತ್ತು ಕೆ ವಿ ಥಾಮಸ್ ಅವರನ್ನು ಉಲ್ಲೇಖಿಸಿ ವಾಗ್ದಾಳಿ ನಡೆಸಿದ್ದಾರೆ.

ಚೌಹಾಣ್ ಟೀಕೆಯ ವೇಳೆ ಪ್ರತಿಕ್ರಿಯಿಸಿದ ರಾಜ್ಯಸಭೆ ಅಧ್ಯಕ್ಷ ಜಗದೀಪ್ ಧನ್ಕರ್ ಅವರು, “ನಿಮ್ಮ ಆರೋಪವನ್ನು ದೃಢೀಕರಿಸಲು ದಾಖಲೆ ಸಲ್ಲಿಸಿ” ಎಂದು ಸೂಚಿಸಿದರು. ಅದಕ್ಕೆ ಚೌಹಾಣ್ ಒಪ್ಪಿಕೊಂಡಿದ್ದಾರೆ.

ಮೋದಿ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ದ ಸುದೀರ್ಘ ಹೋರಾಟ ನಡೆಸಿ ಜಯಗಳಿಸಿದ್ದ ರೈತರು, ಕಳೆದ ಫೆಬ್ರವರಿಯಲ್ಲಿ ಎಂಎಸ್‌ಪಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹರಿಯಾಣದಿಂದ ದೆಹಲಿಗೆ ‘ದೆಹಲಿ ಚಲೋ’ ಪಾದಯಾತ್ರೆ ಹಮ್ಮಿಕೊಂಡಿದ್ದರು. ಆದರೆ, ಅವರು ದೆಹಲಿ ಪ್ರವೇಶಿಸಲು ಹರಿಯಾಣದ ಬಿಜೆಪಿ ಸರ್ಕಾರ ಅವಕಾಶ ನೀಡಿರಲಿಲ್ಲ.

ರೈತರ ನಿರಂತರ ಹೋರಾಟದ ವೇಳೆ ಪೊಲೀಸರೊಂದಿಗೆ ಹಲವು ಬಾರಿ ಸಂಘರ್ಷ ನಡೆದಿತ್ತು. ಕೆಲ ರೈತರು ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಕಳೆದ ಒಂದು ವಾರದಿಂದ ಪ್ರತಿಭಟನೆ ತೀವ್ರಗೊಳಿಸಿದ್ದ ಶುಕ್ರವಾರ ಪೊಲೀಸರ ಬ್ಯಾರಿಕೇಡ್‌ಗಳನ್ನು ಬೇಧಿಸಿ ದೆಹಲಿಯತ್ತ ಹೊರಟಿದ್ದರು. ಈ ವೇಳೆ ಪೊಲೀಸರು ಅಶ್ರುವಾಯು ಸಿಡಿಸಿ, ಲಾಠಿಚಾರ್ಜ್ ಮಾಡಿ ಅಡ್ಡಿಪಡಿಸಿದ್ದಾರೆ.

ಇದನ್ನೂ ಓದಿ : ಹರಿಯಾಣ | ರೈತರ ಮೇಲೆ ಅಶ್ರುವಾಯು ದಾಳಿ; ಇಂಟರ್‌ನೆಟ್ ಬಂದ್; ಸೆಕ್ಷನ್ ಜಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...