Homeಮುಖಪುಟ'ಇಂಡಿಯಾ'ದ ಜವಾಬ್ದಾರಿ ವಹಿಸಿಕೊಳ್ಳಲು ಸಿದ್ಧ - ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

‘ಇಂಡಿಯಾ’ದ ಜವಾಬ್ದಾರಿ ವಹಿಸಿಕೊಳ್ಳಲು ಸಿದ್ಧ – ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

- Advertisement -
- Advertisement -

ವಿರೋಧ ಪಕ್ಷ ಒಕ್ಕೂಟ ಇಂಡಿಯಾದ ಕಾರ್ಯಚಟುವಟಿಕೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತೃಪ್ತಿ ವ್ಯಕ್ತಪಡಿಸಿದ್ದು, ಅವಕಾಶ ಸಿಕ್ಕರೆ ಮೈತ್ರಿಕೂಟದ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಇಂಗಿತವನ್ನು ಸೂಚಿಸಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ತಮ್ಮ ಪಾತ್ರವನ್ನು ನಿರ್ವಹಿಸುತ್ತಿರುವಾಗಲೆ ಇಂಡಿಯಾ ಒಕ್ಕೂಟವನ್ನು ಮುನ್ನಡೆಸುವ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ ಎಂದು ಅವರು ಹೇಳಿದ್ದಾರೆ. ‘ಇಂಡಿಯಾ’ದ ಜವಾಬ್ದಾರಿ

“ನಾನು ಇಂಡಿಯಾ ಒಕ್ಕೂಟವನ್ನು ರಚಿಸಿದ್ದೇನೆ, ಈಗ ಅದನ್ನು ನಿರ್ವಹಿಸುವುದು ಮುನ್ನಡೆಸುವವರಿಗೆ ಬಿಟ್ಟದ್ದು. ಅವರು ಉತ್ತಮ ಪ್ರದರ್ಶನವನ್ನು ನೀಡಲು ಸಾಧ್ಯವಾಗದಿದ್ದರೆ, ನಾನು ಏನು ಮಾಡಲು ಸಾಧ್ಯ?ಎಲ್ಲರೂ ಜೊತೆಯಲ್ಲಿ ಮುನ್ನಡೆಸಬೇಕು ಎಂದು ನಾನು ಹೇಳುತ್ತೇನೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಿಜೆಪಿಯ ಪ್ರಭಲ ವಿರೋಧಿ ಶಕ್ತಿಯಾಗಿದ್ದರೂ ಅವರು ಯಾಕೆ ಮೈತ್ರಿಕೂಟವನ್ನು ಮುನ್ನಡೆಸುತ್ತಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಅವಕಾಶ ನೀಡಿದರೆ ನಾನು ಅದರ ಸುಗಮ ಕಾರ್ಯನಿರ್ವಹಣೆಯನ್ನು ಖಚಿತಪಡಿಸಿಕೊಳ್ಳುತ್ತೇನೆ. ನಾನು ಪಶ್ಚಿಮ ಬಂಗಾಳದಿಂದ ಹೊರಗೆ ಹೋಗಲು ಬಯಸುವುದಿಲ್ಲ, ಆದರೆ ಇಲ್ಲಿಂದಲೆ ಅದನ್ನು ಮುನ್ನಡೆಸಲು ನನಗೆ ಸಾಧ್ಯ” ಎಂದು ಅವರು ಹೇಳಿದ್ದಾರೆ. ‘ಇಂಡಿಯಾ’ದ ಜವಾಬ್ದಾರಿ

ಬಿಜೆಪಿಯನ್ನು ಎದುರಿಸಲು ರಚಿಸಲಾದ ಇಂಡಿಯಾ ಮೈತ್ರಿಕೂಟದಲ್ಲಿ ಎರಡು ಡಜನ್‌ಗಿಂತಲೂ ಹೆಚ್ಚು ವಿರೋಧ ಪಕ್ಷಗಳನ್ನು ಒಳಗೊಂಡಿದೆ. ಆದಾಗ್ಯೂ, ಮೈತ್ರಿಯಲ್ಲಿನ ಆಂತರಿಕ ಭಿನ್ನಾಭಿಪ್ರಾಯಗಳು ಮತ್ತು ಸಮನ್ವಯದ ಕೊರತೆಯ ಕಾರಣಕ್ಕೆ ವಿವಿಧ ವಲಯಗಳಿಂದ ಟೀಕೆಗೆ ಗುರಿಯಾಗಿದೆ.

ತಮ್ಮ ಅಹಂಗಳನ್ನು ಬದಿಗಿಟ್ಟು ಮಮತಾ ಬ್ಯಾನರ್ಜಿ ಅವರನ್ನು ವಿರೋಧ ಪಕ್ಷದ ನಾಯಕಿಯಾಗಿ ಗುರುತಿಸುವಂತೆ ಕಾಂಗ್ರೆಸ್ ಮತ್ತು ಇತರ ಇಂಡಿಯಾ ಒಕ್ಕೂಟದ ಮಿತ್ರಪಕ್ಷಗಳಿಗೆ ಅವರ ಪಕ್ಷದ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಕರೆ ನೀಡಿದ ಕೆಲವೆ ದಿನಗಳ ನಂತರ ಮಮತಾ ಅವರು ಈ ಹೇಳಿಕೆಗಳನ್ನು ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಬಿಜೆಪಿ ಅದ್ಭುತ ಪ್ರದರ್ಶನವನ್ನು ನೀಡಿದ್ದು, ಪಕ್ಷದ ನೇತೃತ್ವದ ಆಡಳಿತರೂಢ ಮಹಾಯುತಿ ಮೈತ್ರಿಕೂಟವನ್ನು ಪ್ರಚಂಡ ವಿಜಯದತ್ತ ಮುನ್ನಡೆಸಿ ದಾಖಲೆ ಸಂಖ್ಯೆಯ ಸ್ಥಾನಗಳನ್ನು ಪಡೆದುಕೊಂಡಿದೆ. ಈ ನಡುವೆ ಜಾರ್ಖಂಡ್ ಚುನಾವಣೆಯಲ್ಲಿ ಜೆಎಂಎಂ ಕೂಡಾ ಅದ್ಭುತ ಪ್ರದರ್ಶನ ನೀಡಿದ್ದು ಇಂಡಿಯಾ ಮೈತ್ರಿಕೂಟ ಜಾರ್ಖಂಡ್‌ನಲ್ಲಿ ಮತ್ತೆ ಅಧಿಕಾರ ವಹಿಸಿಕೊಂಡಿದೆ.

ಅದಾಗ್ಯೂ, ಕಾಂಗ್ರೆಸ್ ತನ್ನ ಸೋಲಿನ ಸರಣಿಯನ್ನು ಮುಂದುವರೆಸಿದೆ. ಮಹಾರಾಷ್ಟ್ರದಲ್ಲಿ ಪಕ್ಷವು ತನ್ನ ಅತ್ಯಂತ ಕಳಪೆ ಪ್ರದರ್ಶನ ತೋರಿದೆ. ಜಾರ್ಖಂಡ್‌ನಲ್ಲಿ ಆಡಳಿತಾರೂಢ JMM ಜೊತೆಗೆ ಸಣ್ಣ ಮಿತ್ರ ಪಕ್ಷವಾಗಿ ಕಾಂಗ್ರೆಸ್ ಜೊತೆಗೂಡಿದೆ. ಇತರ ಮಿತ್ರಪಕ್ಷಗಳು ಕಾಂಗ್ರೆಸ್ ಅನ್ನು ಮೀರಿಸಿದ್ದು ವಿರೋಧ ಪಕ್ಷದ ಒಕ್ಕೂಟದಲ್ಲಿ ಅದರ ಪಾತ್ರವು ಮತ್ತಷ್ಟು ಕ್ಷೀಣಿಸಿದೆ.

ಮತ್ತೊಂದೆಡೆ, ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಪ್ರತಿಭಟನೆಯಂತಹ ವಿವಾದಗಳ ನಡುವೆಯು ಬಿಜೆಪಿಯನ್ನು ಸೋಲಿಸುವ ಮೂಲಕ ಟಿಎಂಸಿಯು ರಾಜ್ಯದಲ್ಲಿ ಇತ್ತೀಚೆಗೆ ನಡೆದ ಉಪಚುನಾವಣೆ ಪ್ರಾಬಲ್ಯ ಮೆರೆದಿದೆ. ಸಿಪಿಐ(ಎಂ) ನೇತೃತ್ವದ ಲೆಫ್ಟ್ ಫ್ರಂಟ್, ಅದರ ಮಿತ್ರಪಕ್ಷವಾದ ಸಿಪಿಐ(ಎಂಎಲ್) ಲಿಬರೇಶನ್ ಮತ್ತು ಕಾಂಗ್ರೆಸ್, ಇಂಡಿಯಾ ಮೈತ್ರಿಯ ರಾಷ್ಟ್ರೀಯ ಮಟ್ಟದ ಮಿತ್ರ ಪಕ್ಷವಾದ ಟಿಎಂಸಿಯ ಮುಂದೆ ಹಿನ್ನಡೆ ಅನುಭವಿಸಿವೆ. ಅವರ ಅಭ್ಯರ್ಥಿಗಳು ಠೇವಣಿ ಕೂಡಾ ಕಳೆದುಕೊಂಡಿದ್ದಾರೆ.

ಇದನ್ನೂ ಓದಿ: ಜಗನ್ ನಡೆಸಿದ್ದ ಸೋಲಾರ್ ಒಪ್ಪಂದದಲ್ಲಿ ನಾಯ್ಡು ಸರ್ಕಾರ ಅದಾನಿಯನ್ನು ರಕ್ಷಿಸುತ್ತಿದೆ – ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ ಶರ್ಮಿಳಾ ಆರೋಪ

ಜಗನ್ ನಡೆಸಿದ್ದ ಸೋಲಾರ್ ಒಪ್ಪಂದದಲ್ಲಿ ನಾಯ್ಡು ಸರ್ಕಾರ ಅದಾನಿಯನ್ನು ರಕ್ಷಿಸುತ್ತಿದೆ – ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ ಶರ್ಮಿಳಾ ಆರೋಪ

ಇದನ್ನೂ ಓದಿ: ಜಗನ್ ನಡೆಸಿದ್ದ ಸೋಲಾರ್ ಒಪ್ಪಂದದಲ್ಲಿ ನಾಯ್ಡು ಸರ್ಕಾರ ಅದಾನಿಯನ್ನು ರಕ್ಷಿಸುತ್ತಿದೆ – ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ ಶರ್ಮಿಳಾ ಆರೋಪ ಸ್ಸವ fಗವಸಾವ್ದಅವ ಅfವವದಸವಸಸವದ ಅfವಾವಾದವ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...