Homeಮುಖಪುಟಉಪ ಮುಖ್ಯಮಂತ್ರಿಯಾದ ಮರುದಿನ ಅಜಿತ್ ಪವಾರ್ ಮೇಲಿನ 1000 ಕೋಟಿ ರೂ. ಬೇನಾಮಿ ಆರೋಪ ತೆರವು!

ಉಪ ಮುಖ್ಯಮಂತ್ರಿಯಾದ ಮರುದಿನ ಅಜಿತ್ ಪವಾರ್ ಮೇಲಿನ 1000 ಕೋಟಿ ರೂ. ಬೇನಾಮಿ ಆರೋಪ ತೆರವು!

- Advertisement -
- Advertisement -

ಬಿಜೆಪಿ ಮೈತ್ರಿ ಪಕ್ಷವಾದ ಎನ್‌ಸಿಪಿಯ ನಾಯಕ ಅಜಿತ್ ಪವಾರ್ ಅವರು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಒಂದೇ ದಿನದಲ್ಲಿ, ಬೇನಾಮಿ ಆಸ್ತಿ ವಹಿವಾಟು ತಡೆ ಮೇಲ್ಮನವಿ ನ್ಯಾಯಮಂಡಳಿಯು ಅಜಿತ್ ಪವಾರ್ ಮತ್ತು ಅವರ ಕುಟುಂಬದ ವಿರುದ್ಧದ ಬೇನಾಮಿ ಆಸ್ತಿ ಮಾಲೀಕತ್ವದ ಆರೋಪವನ್ನು ಶುಕ್ರವಾರ ವಜಾಗೊಳಿಸಿದೆ ಎಂದು ವರದಿಯಾಗಿದೆ. ಉಪ ಮುಖ್ಯಮಂತ್ರಿಯಾದ

ನ್ಯಾಯಾಲಯದ ತೀರ್ಪಿನ ನಂತರ, ಆದಾಯ ತೆರಿಗೆ ಇಲಾಖೆಯು 2021 ರ ಬೇನಾಮಿ ವಹಿವಾಟು ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ 1,000 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಅಜಿತ್ ಕುಮಾರ್ ಅವರಿಗೆ ಬಿಡುಗಡೆ ಮಾಡಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಇತ್ತೀಚೆಗೆ ಚುನಾಯಿತರಾದ ಮಹಾಯುತಿ ಸರ್ಕಾರದ ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದ ಒಂದು ದಿನದ ನಂತರ ಇದು ನಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಾಕಷ್ಟು ಪುರಾವೆಗಳ ಆಧಾರದ ಮೇಲೆ ಅಜಿತ್ ಪವಾರ್ ಮತ್ತು ಅವರ ಕುಟುಂಬಕ್ಕೆ ಬೇನಾಮಿ ಮಾಲೀಕತ್ವದ ಅಡಿಯಲ್ಲಿ ಆಸ್ತಿಗಳನ್ನು ಲಿಂಕ್ ಮಾಡಿದ 2021 ರ ಪ್ರಕರಣವನ್ನು ನ್ಯಾಯಮಂಡಳಿ ವಜಾಗೊಳಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಉಪ ಮುಖ್ಯಮಂತ್ರಿಯಾದ

ಆದಾಯ ತೆರಿಗೆ ಇಲಾಖೆಯು ಅಕ್ಟೋಬರ್ 7, 2021 ರಂದು ಅಜಿತ್ ಕುಮಾರ್ ಮತ್ತು ಅವರ ಕುಟುಂಬಕ್ಕೆ ಸಂಬಂಧಿಸಿದ ಹಲವಾರು ಸ್ಥಳಗಳ ಮೇಲೆ ದಾಳಿ ನಡೆಸಿತ್ತು. ಇದರಲ್ಲಿ ಸತಾರಾದಲ್ಲಿನ ಸಕ್ಕರೆ ಕಾರ್ಖಾನೆ, ದೆಹಲಿಯ ಫ್ಲಾಟ್, ಗೋವಾದ ರೆಸಾರ್ಟ್ ಮತ್ತು ಮಹಾರಾಷ್ಟ್ರದಾದ್ಯಂತ ಹಲವಾರು ಭೂಮಿ ಸೇರಿದಂತೆ ಹಲವು ಆಸ್ತಿಗಳು ಸೇರಿತ್ತು.

ಆದಾಯ ಇಲಾಖೆ ದಾಳಿ ನಡೆಯುವ ವೇಳೆ, ಅಜಿತ್ ಪವಾರ್ ಅವರು ಅವಿಭಜಿತ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಭಾಗವಾಗಿದ್ದರು. ಈ ವೇಳೆ ಜೂನ್ 2022ರಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನಗೊಂಡಿತ್ತು. ಈ ವೇಳೆ ಅಜಿತ್ ಪವಾರ್ ಅವರು ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದರು. ಸರ್ಕಾರ ಪತನದ ನಂತರ ಅವರು ಪಕ್ಷವನ್ನು ಒಡೆದು ಜುಲೈ 2023 ರಿಂದ ಶಿಂಧೆ ನೇತೃತ್ವದ ಶಿವಸೇನೆ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ಮುಂದುವರೆದಿದ್ದರು. ಈ ಸರ್ಕಾರಕ್ಕೆ ಬಿಜೆಪಿ ಕೂಡಾ ಸೇರಿದ್ದು, ಫಡ್ನವಿಸ್ ಉಪ ಮುಖ್ಯಮಂತ್ರಿಯಾಗಿದ್ದರು.

ಶುಕ್ರವಾರ ನ್ಯಾಯಪೀಠವು ಬೇನಾಮಿ ವ್ಯವಹಾರದ ಪ್ರತಿಪಾದನೆಯನ್ನು ತಿರಸ್ಕರಿಸಿ, ಆರೋಪಗಳಿಗೆ ಸಾಕಷ್ಟು ಪುರಾವೆಗಳ ಕೊರತೆಯಿದೆ ಎಂದು ಹೇಳಿದೆ. “ಅಜಿತ್ ಪವಾರ್, [ಪತ್ನಿ] ಸುನೇತ್ರಾ ಪವಾರ್ ಮತ್ತು [ಮಗ] ಪಾರ್ಥ್ ಪವಾರ್ ಬೇನಾಮಿ ಆಸ್ತಿಗಳನ್ನು ಸಂಗ್ರಹಿಸಲು ಹಣವನ್ನು ವರ್ಗಾಯಿಸಿಲ್ಲ” ಎಂದು ನ್ಯಾಯಪೀಠ ತೀರ್ಪು ನೀಡಿದೆ. ಎಲ್ಲಾ ಆಸ್ತಿ ವಹಿವಾಟುಗಳನ್ನು ಕಾನೂನುಬದ್ಧವಾಗಿ ನಡೆಸಲಾಗಿದೆ ಮತ್ತು ದಾಖಲೆಗಳಲ್ಲಿ ಯಾವುದೇ ಅಕ್ರಮಗಳಿಲ್ಲ ಎಂದು ಅಜಿತ್ ಪವಾರ್ ಅವರ ಕಾನೂನು ಸಲಹೆಗಾರರು ವಾದಿಸಿದ್ದರು.

ಇದನ್ನೂ ಓದಿ: ಸಂವಿಧಾನ ಬದಲಾಯಿಸುತ್ತೇವೆ ಎಂದಿದ್ದ ಆರೆಸ್ಸೆಸ್‌ ನಾಯಕನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಸಚಿವರು, ಸಂಸದರು, ಶಾಸಕರು ಮತ್ತು ನಾಯಕರು ಅತಿಥಿಗಳು! ಹೋಗಲ್ಲ ಎಂದ ಸಿಎಂ!

ಸಂವಿಧಾನ ಬದಲಾಯಿಸುತ್ತೇವೆ ಎಂದಿದ್ದ ಆರೆಸ್ಸೆಸ್‌ ನಾಯಕನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಸಚಿವರು, ಸಂಸದರು, ಶಾಸಕರು ಮತ್ತು ನಾಯಕರು ಅತಿಥಿಗಳು! ಹೋಗಲ್ಲ ಎಂದ ಸಿಎಂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...