Homeಮುಖಪುಟಮೊದಲು ಬಿಜೆಪಿಯೊಂದಿಗೆ ಸಂಬಂಧ ಮುರಿದುಕೊಳ್ಳಿ- ಎನ್‌ಸಿಪಿ: ಏನಾದರೂ ಕೇಳಿ ಮುಖ್ಯಮಂತ್ರಿ ಹುದ್ದೆ ಬಿಟ್ಟು- ಬಿಜೆಪಿ

ಮೊದಲು ಬಿಜೆಪಿಯೊಂದಿಗೆ ಸಂಬಂಧ ಮುರಿದುಕೊಳ್ಳಿ- ಎನ್‌ಸಿಪಿ: ಏನಾದರೂ ಕೇಳಿ ಮುಖ್ಯಮಂತ್ರಿ ಹುದ್ದೆ ಬಿಟ್ಟು- ಬಿಜೆಪಿ

ಅತ್ತ ಎನ್‌ಸಿಪಿ, ಇತ್ತ ಬಿಜೆಪಿ ಎಷ್ಟೇ ಒತ್ತಾಯ ಮಾಡಿದರೂ ಮುಖ್ಯಮಂತ್ರಿ ಹುದ್ದೆಯ ಪಟ್ಟು ಬಿಡದ ಶಿವಸೇನೆ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರ ರಚನೆ ಸಂಬಂಧ ಎನ್‌ಸಿಪಿ ಪಕ್ಷವು ಮೊದಲು ಬಿಜೆಪಿಯೊಂದಿಗಿನ ಎಲ್ಲಾ ಸಂಬಂಧ ಕಡಿದುಕೊಂಡು ನಂತರ ಮಾತುಕತೆಗೆ ಬನ್ನಿ ಎಂದು ಶಿವಸೇನೆಗೆ ಖಡಕ್‌ ಆಗಿ ಹೇಳಿದೆ. ಸದ್ಯ ಕೇಂದ್ರ ಸಚಿವ ಸಂಪುಟದಲ್ಲಿ ಶಿವಸೇನೆಯಿಂದ ಅರವಿಂದ್‌ ಸಾವಂತ್‌ ಸಚಿವರಾಗಿದ್ದಾರೆ. ಅವರು ತಕ್ಷಣ ರಾಜಿನಾಮೆ ನೀಡಿ ಹೊರಬರಬೇಕು ಮತ್ತು ಎನ್‌ಡಿಎ ಜೊತೆಗೆ ಶಿವಸೇನೆ ಸಂಬಂಧ ಕಡಿದುಕೊಳ್ಳಬೇಕು. ನಂತರ ನಾವು ಬೆಂಬಲ ನೀಡಬಹುದು ಎಂದು ಎನ್‌ಸಿಪಿ ವಕ್ತಾರ ನವಾಬ್‌ ಮಲ್ಲಿಕ್‌ರವರು ತಿಳಿಸಿದ್ದಾರೆ.

ಅಲ್ಲದೇ ಕೆಲವು ಶಿವಸೇನೆಯ ಶಾಸಕರು ಈಗಲೂ ಬಿಜೆಪಿಯ ಸಂಪರ್ಕದಲ್ಲಿದ್ದಾರೆ. ಅದು ಸಂಪೂರ್ಣ ತಪ್ಪಬೇಕು. ಆನಂತರವಷ್ಟೇ ನಾವು ಬೆಂಬಲ ನೀಡಬಹುದು ಎಂದು ನವಾಬ್‌ ಮಲ್ಲಿಕೆ ತಿಳಿಸಿದ್ದಾರೆ. ಒಮ್ಮೆ ನಾವು ಬೆಂಬಲ ಕೊಟ್ಟಲ್ಲಿ ಅದು ಸ್ಥಿರ ಸರ್ಕಾರವಾಗಿರಬೇಕು. ಹಾಗಾಗಿ ಶಿವಸೇನೆ ಸಂಪೂರ್ಣವಾಗಿ ಬಿಜೆಪಿಯನ್ನು ತ್ಯಜಿಸಿ ಬಂದರೆ ಮಾತ್ರ ಬೆಂಬಲ ನೀಡಬಹುದು ಎಂದಿದ್ದಾರೆ.

ಏನಾದರೂ ಕೇಳಿ ಮುಖ್ಯಮಂತ್ರಿ ಹುದ್ದೆ ಬಿಟ್ಟು- ಬಿಜೆಪಿ

ಇನ್ನು ಬಿಜೆಪಿ ಪಕ್ಷವೂ ಈಗಲೂ ಶಿವಸೇನೆಗೆ ಬಿಜೆಪಿಯ ಬಾಗಿಲು ಮುಕ್ತವಾಗಿ ತೆಗೆದಿದೆ. ಬನ್ನಿ ಏನಾದರೂ ಬೇಕಾದರೆ ಕೇಳಿ ಆದರೆ ಮುಖ್ಯಮಂತ್ರಿ ಮಾತ್ರ ದೇವೇಂದ್ರ ಫಡ್ನಾವೀಸ್‌ ಆಗಿರುತ್ತಾರೆ ಎಂದು ಬಿಜೆಪಿ ಹೇಳಿದೆ.

ಮಾತುಕತೆಗೆ ದಿನದ 24 ಗಂಟೆಯೂ ಬಿಜೆಪಿಯ ಬಾಗಿಲು ತೆರೆದಿದೆ. ಏಕೆಂದರೆ ಜನ ನಮಗೆ ಬಹುಮತ ನೀಡಿದ್ದಾರೆ. ಹಾಗಾಗಿ ಸರ್ಕಾರ ರಚಿಸಬೇಕಾದರೆ ನಾವು ಮಾತುಕತೆ ಮಾಡಬೇಕಿದೆ ಎಂದು ಮುಖ್ಯಮಂತ್ರಿಗಳ ಸಭೆಯ ನಂತರ ಬಿಜೆಪಿಯ ಮುಖಂಡ ಚಂದ್ರಕಾಂತ್‌ ಪಾಟೀಲ್‌ ಹೇಳಿದ್ದಾರೆ.

ಶಿವಸೇನೆ ಪಟ್ಟು ಹಿಡಿಯಲು ಕಾರಣವೇನು?

ಮಹಾರಾಷ್ಟ್ರದಲ್ಲಿ ಶಿವಸೇನೆಯವರು ಮುಖ್ಯಮಂತ್ರಿಯಾಗಿ 20 ವರ್ಷವಾಗಿದೆ. 1999ರಲ್ಲಿ ನಾರಾಯಣ್‌ ರಾಣೆ ಮುಖ್ಯಮಂತ್ರಿಯಾಗಿದ್ದೆ ಕೊನೆ. ಇನ್ನು ಕಳೆದ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಚುನಾವಣಾ ಪೂರ್ವ ಮೈತ್ರಿ ಇಲ್ಲದೇ 63 ಸ್ಥಾನಗಳನ್ನು ಗೆದ್ದಿದ್ದ ಶಿವಸೇನೆ ಈ ಬಾರಿ ಚುನಾವಣಾ ಪೂರ್ವ ಮೈತ್ರಿ ಇದ್ದರೂ ಸಹ 56ಕ್ಕೆ ಕುಸಿದಿದೆ. ಅಂದರೆ ಶಿವಸೇನೆ ಬಲಾಢ್ಯ ಇದ್ದ ಜಾಗಗಳಲೆಲ್ಲಾ ಬಿಜೆಪಿ ಗೆಲ್ಲುತ್ತಾ ಬಂದಿದೆ. ಹಾಗಾಗಿ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಾದರೆ ಶಿವಸೇನೆಗೆ ಮತ್ತೆ ಅಧಿಕಾರ ಬೇಕಿದೆ. ಹಾಗಾಗಿ ಅದು ಪಟ್ಟು ಬಿಡದೇ ಕುಳಿತಿದೆ ಮಾತ್ರವಲ್ಲ ಎನ್‌ಸಿಪಿ ಮತ್ತು ಕಾಂಗ್ರೆಸ್‌ನೊಂದಿಗೂ ಮೈತ್ರಿಗೆ ಮುಂದಾಗಿದೆ.

ಹಾಗೆ ನೋಡಿದರೆ 2014ರಿಂದಲೇ ಶಿವಸೇನೆಯ ಸ್ಥಾನವನ್ನು ಬಿಜೆಪಿ ಆಕ್ರಮಿಸುತ್ತಾ ಬಂದಿದೆ. ಹಾಗಾಗಿಯೇ ಶಿವಸೇನೆ ಬಿಜೆಪಿಯನ್ನು ಬಹಿರಂಗವಾಗಿಯೇ ಟೀಕಿಸುತ್ತಾ ಬಂದಿದೆ. ಈ ಬಾರಿಯ ಲೋಕಸಭಾ ಚುನಾವಣೆಯ ಸೀಟು ಹಂಚಿಕೆಯಲ್ಲಿ ಭಿನ್ನಮತ ಭುಗಿಲೆದ್ದಿತು. ಹೇಗೋ ನಿವಾರಿಸಿಕೊಂಡರೂ ಸಹ ಅವರ ನಡುಗೆ ಅಂತಹ ಭಾಂದವ್ಯವೇನೂ ಉಳಿದಿಲ್ಲ. ಹಾಗಾಗೆ ಈ ಬಾರಿ ಬಿಜೆಪಿಗೆ ಶಿವಸೇನೆ ಬಿಟ್ಟರೆ ಬೇರೆ ಆಯ್ಕೆಗಳೇ ಇಲ್ಲದಂತಾಗಿದೆ. ಇದೇ ಸಂದರ್ಭ ಬಳಸಿಕೊಂಡು ಮುಖ್ಯಮಂತ್ರಿ ಹುದ್ದೆ ಪಡೆದೇ ತೀರಬೇಕೆಂದು ಶಿವಸೇನೆ ತೀರ್ಮಾನಿಸಿದೆ.

ಇನ್ನು ಬಿಜೆಪಿ ಅತ್ಯಧಿಕ ಸ್ಥಾನಗಳನ್ನು ಪಡೆದ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಅದಕ್ಕೆ ಶಿವಸೇನೆಯ ಬೆಂಬಲವಿಲ್ಲದೇ ಸರ್ಕಾರ ರಚಿಸಲು ಸಾಧ್ಯವಾಗುತ್ತಿಲ್ಲ. ಆದರೆ ಮುಖ್ಯಮಂತ್ರಿಯ ಹುದ್ದೆಯನ್ನು ಸಹ ಬಿಟ್ಟುಕೊಡಲು ಬಿಜೆಪಿ ಸಿದ್ದರಿಲ್ಲ. ಹೆಚ್ಚು ಕಮ್ಮಿ ಇಡೀ ದೇಶವೇ ಬಿಜೆಪಿಯ ಕೈಯಲ್ಲಿರುವಾಗ ಅತಿದೊಡ್ಡ ಆರ್ಥಿಕತೆ ಹೊಂದಿರುವ ಮಹಾರಾಷ್ಟ್ರವನ್ನು ಬಿಟ್ಟುಕೊಡಲು ಅದು ತಯಾರಿಲ್ಲ. ಇನ್ನು ಸರ್ವಾಧಿಕಾರಿ ಮನಸ್ಥಿತಿಯ ಬಿಜೆಪಿ ಮತ್ತೊಂದು ಸರ್ವಾಧಿಕಾರಿ ಮನಸ್ಥಿತಿಯ ಶಿವಸೇನೆಯ ಕೈಕೆಳಗೆ ಕೆಲಸ ಮಾಡುವುದು ಅವರ ಅಹಂಕಾರಕ್ಕೆ ಅಡ್ಡಿಯಾಗಿದೆ ಎನ್ನಲಾಗುತ್ತಿದೆ.

ಸರ್ಕಾರ ರಚನೆಗೆ ಇನ್ನೆರೆಡು ದಿನಗಳು ಮಾತ್ರ ಬಾಕಿ ಉಳಿದಿವೆ. ಹಗ್ಗ ಜಗ್ಗಾಟ ಮುಂದುವರೆದಿದೆ. ಯಾರು ಯಾರ ಜೊತೆಗೆ ಬೇಕಾದರೂ ಸೇರಿ ಸರ್ಕಾರ ರಚಿಸುವ ಅವಕಾಶವಿದೆ. ಇಲ್ಲವೇ ರಾಷ್ಟ್ರಪತಿ ಆಡಳಿತಕ್ಕೆ ಹೋಗುವ ದಾರಿಯಿದೆ. ಇನ್ನೆರೆಡು ದಿನದಲ್ಲಿ ಏನಾಗಲಿದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...