Homeಮುಖಪುಟಕೇಂದ್ರ ರಕ್ಷಣಾ ಸಚಿವರಿಗೆ ಹಣ ಸುಲಿಗೆಯ ಬೆದರಿಕೆ ಪತ್ರ; ಇಬ್ಬರ ಬಂಧನ

ಕೇಂದ್ರ ರಕ್ಷಣಾ ಸಚಿವರಿಗೆ ಹಣ ಸುಲಿಗೆಯ ಬೆದರಿಕೆ ಪತ್ರ; ಇಬ್ಬರ ಬಂಧನ

- Advertisement -
- Advertisement -

ರಾಂಚಿ ಸಂಸದ ಮತ್ತು ಕೇಂದ್ರ ರಕ್ಷಣಾ ಖಾತೆ ರಾಜ್ಯ ಸಚಿವ ಸಂಜಯ್ ಸೇಠ್ ಅವರು ನವದೆಹಲಿಯಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಿದ್ದಾಗಲೆ ದುಷ್ಕರ್ಮಿಗಳು ಬೆದರಿಕೆ ಪತ್ರ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳು ಕಳುಹಿಸಿದರುವ ಪಠ್ಯದಲ್ಲಿ ಸಚಿವರೊಂದಿಗೆ 50 ಲಕ್ಷ ನೀಡಬೇಕು ಎಂಬ ಬೇಡಿಕೆಯನ್ನು ಸಲ್ಲಿಸಿದ್ದಾರೆ. ಕೇಂದ್ರ ರಕ್ಷಣಾ ಸಚಿವರಿಗೆ

ಬೆದರಿಕೆ ಸಂದೇಶದ ಹಿಂದಿರುವ ಆರೋಪಿಗಳು, ಮೂರು ದಿನಗಳಲ್ಲಿ 50 ಲಕ್ಷ ಮೊತ್ತವನ್ನು ಪಾವತಿಸುವಂತೆ ಹೇಳಿದ್ದು, ಇಲ್ಲದಿದ್ದರೆ ತೀವ್ರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಸಚಿವರನ್ನು ಎಚ್ಚಿರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದುಷ್ಕರ್ಮಿಗಳು ಸಚಿವರ ಫೋನ್‌ಗೆ ಸಂದೇಶ ಕಳುಹಿಸಿದ್ದಾಗ ಅವರು ದೆಹಲಿಯಲ್ಲಿದ್ದರು ಎಂದು ವರದಿಯಾಗಿದೆ. ಘಟನೆ ಕುರಿತು ಮಾತನಾಡಿದ ಅವರು, ನಾನು ಪೊಲೀಸರಿಗೆ ಮಾಹಿತಿ ನೀಡಿದ್ದೇನೆ. ಇಂದು ನಾನು ನನ್ನ ಕ್ಷೇತ್ರದಲ್ಲಿದ್ದೇನೆ. ಪೊಲೀಸರು ತನಿಖೆಯ ಕೆಲಸವನ್ನು ಮಾಡುತ್ತಿದ್ದಾರೆ, ನಾನು ನನ್ನ ಕೆಲಸವನ್ನು ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಬೆದರಿಕೆಯ ನಂತರ, ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದೆ, ದೆಹಲಿ ಮತ್ತು ಜಾರ್ಖಂಡ್ ಎರಡರಲ್ಲೂ ತನಿಖೆ ನಡೆಯುತ್ತಿದೆ. ಸಚಿವರಿಗೆ ಎಚ್ಚರಿಕೆ ನೀಡಿದ ನಂತರ ದೆಹಲಿ ಪೊಲೀಸರು ಪ್ರಾಥಮಿಕ ತನಿಖೆಯನ್ನು ಪ್ರಾರಂಭಿಸಿದ್ದರು. ಪೊಲೀಸ್ ಕಮಿಷನರ್ ಸೇರಿದಂತೆ ಉನ್ನತ ಅಧಿಕಾರಿಗಳು ದೆಹಲಿಯಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ವಿವರಗಳನ್ನು ಸಂಗ್ರಹಿಸಿದ್ದಾರೆ.

ದೆಹಲಿ ಪೊಲೀಸರು ನಡೆಸಿದ ತನಿಖೆಯಲ್ಲಿ, ಆರೋಪಿಗಳು ರಾಂಚಿಯ ಹೊಸಿರ್‌ನಿಂದ ಸಂದೇಶ ಕಳುಹಿಸಿದ್ದಾರೆ ಎಂಬುವುದನ್ನು ಪತ್ತೆಹಚ್ಚಿದ್ದರು. ನಂತರ, ದೆಹಲಿ ಪೊಲೀಸರು ಜಾರ್ಖಂಡ್ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅನುರಾಗ್ ಗುಪ್ತಾ ಅವರಿಗೆ ತನಿಖೆಯ ಬಗ್ಗೆ ಮಾಹಿತಿ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಗುಪ್ತಾ ಅವರು ಈ ಬಗ್ಗೆ ತಕ್ಷಣದ ತನಿಖೆಗೆ ಆದೇಶಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ದೆಹಲಿ ಪೊಲೀಸರು ಮತ್ತು ರಾಂಚಿ ಪೊಲೀಸರ ಜಂಟಿ ತಂಡವು ಕಂಕೆ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಿರ್‌ನಲ್ಲಿ ತನಿಖೆ ನಡೆಸುತ್ತಿದೆ. ಇಲ್ಲಿಯವರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ. ಕೇಂದ್ರ ಮಟ್ಟದ ಸಚಿವರೊಬ್ಬರು ಪಠ್ಯ ಸಂದೇಶದ ಮೂಲಕ ಸುಲಿಗೆ ಬೆದರಿಕೆಯನ್ನು ಸ್ವೀಕರಿಸಿದ ಮೊದಲ ನಿದರ್ಶನ ಇದಾಗಿದೆ ಎಂದು ವರದಿಯಾಗಿದೆ. ಕೇಂದ್ರ ರಕ್ಷಣಾ ಸಚಿವರಿಗೆ

ಇದನ್ನೂ ಓದಿ: ಮದ್ಯ & ತಂಬಾಕಿನೊಂದಿಗೆ ‘ಮಾಂಸಾಹಾರ’ವನ್ನು ಹೋಲಿಸಿದ ಕನ್ನಡ ಸಾಹಿತ್ಯ ಪರಿಷತ್ – ಆಕ್ರೋಶ

ಮದ್ಯ & ತಂಬಾಕಿನೊಂದಿಗೆ ‘ಮಾಂಸಾಹಾರ’ವನ್ನು ಹೋಲಿಸಿದ ಕನ್ನಡ ಸಾಹಿತ್ಯ ಪರಿಷತ್ – ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...